ಬೆಂಗಳೂರು:ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಿನ್ನೆ ಮಧ್ಯಾಹ್ನ ನಡೆದ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೊಲೀಸ್ ಅಧಿಕಾರಿಗಳ ಸಭೆ ಕರೆದಿದ್ದಾರೆ.
ಇಂದು ಮಧ್ಯಾಹ್ನ 1 ಗಂಟೆಗೆ ಗೃಹಕಚೇರಿ ಕೃಷ್ಣಾದಲ್ಲಿ ಸಭೆ ನಡೆಯಲಿದ್ದು ಮೈಸೂರಿನಿಂದ ಬೆಂಗಳೂರಿಗೆ ಸಿಎಂ ಸಿದ್ದರಾಮಯ್ಯ ಆಗಮಿಸಿ ಸಭೆಯಲ್ಲಿ ಭಾಗಿಯಾಗಲಿದ್ದಾರೆ.ಈ ಸಭೆಯಲ್ಲಿ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್, ನಗರ ಪೊಲೀಸ್ ಆಯುಕ್ತ ದಯಾನಂದ್ ಸೇರಿ ಹಲವರು ಭಾಗಿಯಾಗಲಿದ್ದಾರೆ.
ನೀರಿನ ಸಮಸ್ಯೆ ನಿವಾರಣೆಗೆ ಜಿಲ್ಲೆಗಳಿಗೆ 856 ಕೋಟಿ ರೂ. ಬಿಡುಗಡೆ : ಸಚಿವ ಕೃಷ್ಣ ಬೈರೆಗೌಡ
ಏತನ್ಮಧ್ಯೆ, ರಾಷ್ಟ್ರೀಯ ತನಿಖಾ ಸಂಸ್ಥೆಯ ತಂಡವು ವೈಟ್‌ಫೀಲ್ಡ್ ಪ್ರದೇಶದಲ್ಲಿ ಸ್ಫೋಟ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿತು.
ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ರಾಜ್ಯ ಗೃಹ ಸಚಿವ ಡಾ ಜಿ ಪರಮೇಶ್ವರ ಅವರು ಡಿಜಿಪಿ ಅಲೋಕ್ ಮೋಹನ್ ಅವರೊಂದಿಗೆ ಬೆಂಗಳೂರು ಸ್ಫೋಟದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.