ಬೆಂಗಳೂರು : ಶಿವಮೊಗ್ಗದಲ್ಲಿ ಸಿಇಟಿ ಪರೀಕ್ಷೆ ಬರೆಯಲು ಬಂದ ಬ್ರಾಹ್ಮಣ ವಿದ್ಯಾರ್ಥಿಯ ಜನಿವಾರವನ್ನು ಅಧಿಕಾರಿಗಳು ತೆಗೆಸಿದ ಪ್ರಕರಣ ಕರ್ನಾಟಕದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಇದೆ ವಿಚಾರವಾಗಿ ಉನ್ನತ ಶಿಕ್ಷಣ ಸಚಿವ ಡಾ. ಎಂಸಿ ಸುಧಾಕರ್ ಪ್ರತಿಕ್ರಿಯೆ ನೀಡಿದ್ದು, ಸಿಇಟಿ ಅಭ್ಯರ್ಥಿಯ ಜನಿವಾರ ತೆಗೆಸಿದ್ದು ನಿಜವೇ ಆದರೆ ಅದು ಅತಿರೇಕದ ವರ್ತನೆ. ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.
ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಿನ್ನೆ ಕ್ಯಾಬಿನೆಟ್ ಮೀಟಿಂಗ್ ನಲಿದ್ದೆ. ಹಾಗಾಗಿ ಈ ಘಟನೆ ಕುರಿತು ಇಂದು ಬೆಳಿಗ್ಗೆ ನನಗೆ ಮಾಹಿತಿ ಬಂದಿದೆ.ಸಿಇಟಿ ಅಭ್ಯರ್ಥಿಯ ಜನಿವಾರ ತೆಗೆಸಿದ್ದು ನಿಜವೇ ಆದರೆ ಅದು ಅತಿರೇಕದ ವರ್ತನೆ. ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ. ಯಾವುದೇ ಕೇಂದ್ರದಲ್ಲಿ ಆ ರೀತಿ ಆಗಿದ್ದರೆ ಗಂಭೀರವಾಗಿ ಪರಿಗಣಿಸುತ್ತೇವೆ ಎಂದು ಅವರು ಹೇಳಿದ್ದಾರೆ.
ಎಲ್ಲಾ ಜಾತಿ, ಧರ್ಮಗಳ ಆಚರಣೆ ಸಂಪ್ರದಾಯಕ್ಕೆ ಗೌರವ ಕೊಡಬೇಕು. ನಾನು ಈ ರೀತಿಯ ಘಟನೆಗಳಿಗೆಲ್ಲ ಪ್ರೋತ್ಸಾಹ ಕೊಡುವುದಿಲ್ಲ. ಘಟನೆ ಸಂಬಂಧ ಅಧಿಕಾರಿಗಳ ಬಳಿ ವರದಿ ಪಡೆದು, ಮುಂದೆ ಏನು ಮಾಡಬಹುದು ಎಂದು ಯೋಚಿಸುತ್ತೇನೆ. ಆ ರೀತಿ ಆಗಿದ್ದು ಸತ್ಯವೇ ಆದರೆ ಇನ್ನೊಮ್ಮೆ ಪರಿಶೀಲನೆ ಮಾಡುತ್ತೇನೆ. ಆಯ್ದ ವಿಚಾರ ಎತ್ತಿಕೊಂಡು ರಾಜಕೀಯ ಲಾಭ ಮಾಡುವುದಲ್ಲ. ಯಾವುದೇ ಸಮುದಾಯವನ್ನು ನೋವಿಸುವ ಉದ್ದೇಶ ನಮ್ಮದಲ್ಲ ಎಂದು ಸುಧಾಕರ್ ಬೆಂಗಳೂರಿನಲ್ಲಿ ಹೇಳಿದ್ದಾರೆ.