ಬೆಂಗಳೂರು : ಬೆಳಗಾವಿಯ ಭೂತ ರಾಮನ ಹಟ್ಟಿ ಬಳಿ ಇರುವ ಕಿತ್ತೂರು ರಾಣಿ ಚೆನ್ನಮ್ಮ ಕಿರು ಮೃಗಾಲಯದಲ್ಲಿ 31 ಕೃಷ್ಣಮೃಗಗಳು ನಿಗೂಢವಾಗಿ ಸಾವನ್ನಪ್ಪಿವೆ ಈ ಕುರಿತು ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ಈಗಾಗಲೇ ಈ ಕುರಿತು ತನಿಖೆ ನಡೆಯುತ್ತಿದ್ದು ವರದಿಯಲ್ಲಿ ಲೋಪ ಕಂಡು ಬಂದರೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.
ರಾಣಿ ಚೆನ್ನಮ್ಮ ಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರಲ್ಲಿ ಮಾತನಾಡಿದ ಅವರು, ಉನ್ನತ ಮಟ್ಟದ ತನಿಖಾ ಸಂಸ್ಥೆ ರಚನೆ ಮಾಡಲಾಗಿದೆ. ಬದುಕುಳಿದ 7 ಕೃಷ್ಣಮೃಗಗಳನ್ನು ಸಹ ರಕ್ಷಣೆ ಮಾಡುತ್ತಿದ್ದೇವೆ, ಕೋರೋಣ ರೀತಿಯಲ್ಲಿ ಸೋಂಕು ತಗುಲಿದ್ದು ಹೀಗಾಗಿ 31 ಕೃಷ್ಣಮೃಗಗಳು ಮೃತಪಟ್ಟಿವೆ. ಕೃಷ್ಣಮೃಗಗಳ ಸಾವಿನ ಬಗ್ಗೆ ತನಿಖೆ ನಡೆಯುತ್ತಿದೆ ಈ ಕುರಿತು ವರದಿ ಬರಲಿ ವರದಿಯಲ್ಲಿ ಏನಾದರೂ ಲೋಪ ಕಂಡು ಬಂದರೆ ಕ್ರಮ ಕೈಗೊಳ್ಳುತ್ತೇವೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿಕೆ ನೀಡಿದರು.








