ಬೆಂಗಳೂರು : ವಿಧಾನಸೌಧದಲ್ಲೇ ಲಂಚ ನಡೆಯುತ್ತಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸ್ಪೋಟಕ ಹೇಳಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿದ್ದರಾಮಯ್ಯ ವಿಧಾನಸೌಧದಲ್ಲಿ ಹಣ ಸಿಕ್ಕಿರುವ ಪ್ರಕಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ್ದಾರೆ. ಸಿಎಂ ಬೊಮ್ಮಾಯಿ ಅವರ ಮೂಗಿನ ನೇರಕ್ಕೆ ಭ್ರಷ್ಟಾಚಾರ ನಡೆಯುತ್ತಿದೆ. ಲೋಕೋಪಯೋಗಿ ಇಲಾಖೆ ಸಹಾಯಕ ಇಂಜಿನಿಯರ್ ಬಳಿ ಹಣ ಪತ್ತೆಯಾಗಿದೆ. ಅವನು ವಿಧಾನಸೌಧದಲ್ಲಿ ಯಾರಿಗೆ ಹಣ ಕೊಡಲು ತಂದಿದ್ದನು ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಒಂದು ಮುಖ್ಯಮಂತ್ರಿಗಳಿಗೆ ಲಂಚ ಕೊಡಲು ತಂದಿದ್ದನು, ಇಲ್ಲವಾದಲ್ಲಿ ಲೋಕೋಪಯೋಗಿ ಸಚಿವರಿಗೆ ಹಣ ಕೊಡಲು ಬಂದಿರಬೇಕು, ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಸಿದ್ದರಾಮಯ್ಯ ವಿವಾದಾತ್ಮಕ ಹೇಳಿಕೆ
ಕೋಮುವಾದದ ಬೀಜ ದಕ್ಷಿಣ ಕನ್ನಡ ಜಿಲ್ಲೆ ಹಿಂದುತ್ವದ ಲ್ಯಾಬ್ “ನಿಂದಲೇ ಉತ್ಪತ್ತಿಯಾಗುತ್ತಿದೆ ಎಂದು ರಾಜ್ಯ ವಿಧಾನಸಭೆ ಪ್ರತಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತೊಂದು ವಿವಾದ ಸೃಷ್ಟಿಸಿದ್ದಾರೆ. ಹರೇಕಳ ಕಡವಿನ ಬಳಿಯ ಯು.ಟಿ ಫರೀದ್ ವೇದಿಕೆಯಲ್ಲಿ ಜರಗಿದ ಉಳ್ಳಾಲ ಮತ್ತು ಮುಡಿಪು ಬ್ಲಾಕ್ ಕಾಂಗ್ರೆಸ್ ಬೃಹತ್ ಸಾರ್ವಜನಿಕ ಜನಜಾಗೃತಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಬಿಜೆಪಿಯವರು ಜನರಿಗೆ ಕೊಟ್ಟ ಭರವಸೆ ಮರೆತು ಸಮಾಜ ಒಡೆಯುವ ಕೆಲಸದಲ್ಲಿ ತೊಡಗಿದ್ದಾರೆ. ಬಿಜೆಪಿಯವರಿಗೆ ಅಸಮಾನತೆಯ ಸಮಾಜ ಬೇಕಿದೆ. ಕೋಮುವಾದದ ಬೀಜ ದಕ್ಷಿಣ ಕನ್ನಡ ಜಿಲ್ಲೆ ಹಿಂದುತ್ವದ ಲ್ಯಾಬ್”ನಿಂದಲೇ ಉತ್ಪತ್ತಿಯಾಗುತ್ತಿದೆ ಎಂದು ಕಿಡಿಕಾರಿದ್ದಾರೆ.
BIGG NEWS : ಗಣಿಧಣಿ ‘ಜನಾರ್ಧನ ರೆಡ್ಡಿಯ ’ಸೋಶಿಯಲ್ ಮೀಡಿಯಾದ ಎಲ್ಲಾ ಖಾತೆಗಳು ಹ್ಯಾಕ್.!