ಬೆಂಗಳೂರು: ಬಳ್ಳಾರಿ ಸಾರಿಗೆ ಇಲಾಖೆಯಲ್ಲಿ ಲಕ್ಷಾಂತರ ರೂಪಾರಿ ಹಣ ಟ್ರೆಜರಿಗೆ ಜಮಾ ಆಗದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ. ಅಲ್ಲದೇ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಆದೇಶಿದ್ದಾರೆ.
ಬಳ್ಳಾರಿ ಪ್ರಾದೇಶಿಕ ಸಾರಿಗೆ ಇಲಾಖೆ ಯಲ್ಲಿ ಸರ್ಕಾರದ ಖಜಾನೆ ಗೆ ಜಮಾ ಮಾಡಬೇಕಾಗಿದ್ದ ಲಕ್ಷಾಂತರ ಹಣ ಒಂದು ವಾರದಿಂದ ಜಮಾ ಮಾಡಿರುವುದಿಲ್ಲ. ರವಿ ತವರಕೆರೆ ಹಣಕಾಸಿನ ಸೆಕ್ಷನ್ ನಿರ್ವಹಣೆ ಮಾಡುತ್ತಿದ್ದು, ಇವರು ಹಣ ಸಂದಾಯ ಮಾಡಿರಲಿಲ್ಲ. ಈ ಪ್ರಕರಣವನ್ನು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಗಂಭೀರವಾಗಿ ಪರಿಗಣಿಸಿದ್ದಾರೆ.
ಈ ಪ್ರಕರಣ ಸಂಬಂಧ ಸಾರಿಗೆ ಅಧಿಕಾರಿಗಳು ಯಾವುದೇ ಕ್ರಮಕೈಗೊಂಡಿಲ್ಲ ಎಂಬ ದೂರಿಗೆ ಸಂಬಂಧಪಟ್ಟಂತೆ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಕೂಡಲೇ ಸದರಿ ಸಿಬ್ಬಂದಿಯನ್ನು ಅಮಾನತು ಮಾಡಿ, ಅವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಖಡಕ್ ಸೂಚನೆ ನೀಡಿದ್ದಾರೆ.
ಇನ್ಮುಂದೆ ಈ ರೀತಿಯ ಪ್ರಕರಣಗಳು ಮರುಕಳಿಸದಂತೆ ಎಚ್ಚರವಹಿಸಲು ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ಆಯುಕ್ತರಿಗೆ ಎಚ್ಚರಿಸಿದ್ದಾರೆ.