ಬೆಂಗಳೂರು : ನಿಯಮ ಉಲ್ಲಂಘನೆ ಮಾಡಿದ್ದು ಅಲ್ಲದೆ, ಪೋಲಿಸ್ ಇಲಾಖೆಯ ಅನುಮತಿ ಪಡೆಯದೆ ಕನ್ನಡ ಬಿಗ್ ಬಾಸ್ ಸೀಸನ್ 12 ಶೋ ಆರಂಭಿಸಿದ್ದಕ್ಕಾಗಿ ನಿನ್ನೆ ಬಿಗ್ ಬಾಸ್ ಮನೆಗೆ ಬೀಗ ಜಡಿಯಲಾಗಿತ್ತು. ಬಿಗ್ ಬಾಸ್ ಮನೆಗೆ ಬೀಗ ಹಾಕಿದ್ದನ್ನು ಪ್ರಶ್ನಿಸಿ ಇಂದು ಹೈಕೋರ್ಟಿಗೆ ಕಾರ್ಯಕ್ರಮದ ಆಯೋಜಕರು ಅರ್ಜಿ ಸಲ್ಲಿಸಲಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್ ವಿಚಾರಣೆಯನ್ನು ನಾಳೆ ಮುಂದೂಡಿದೆ.
ಜಾಲಿವುಡ್ ಸ್ಟುಡಿಯೋದಿಂದ ರಿಟ್ ಅರ್ಜಿ ಸಲ್ಲಿಸಲಾಗಿದೆ. ನಿನ್ನೆ ಸಂಜೆ ಕಂದಾಯ ಅಧಿಕಾರಿಗಳು ಪೊಲೀಸರ ಸಮ್ಮುಖದಲ್ಲಿ ಬಿಗ್ ಬಾಸ್ ಮನೆಗೆ ಬೀಗ ಹಾಕಲಾಯಿತು. ಬಳಿಕ ಒಂದು ಗಂಟೆಗಳ ಕಾಲ ಸ್ಪರ್ಧಿಗಳಿಗೆ ಮನೆಯಿಂದ ಹೊರಗಡೆ ಹೋಗಲು ಅವಕಾಶ ನೀಡಲಾಗಿತ್ತು. ಇದೀಗ ಅರ್ಜಿದಾರರಿಂದ ರಿಟ್ ಅರ್ಜಿಯ 2ನೇ ಪ್ರತಿ ಸಲ್ಲಿಸಿದ್ದಾರೆ. ಕಚೇರಿ ಆಕ್ಷೇಪಣೆಗಳನ್ನ ಸರಿಪಡಿಸಿದ ಹಿನ್ನೆಲೆ ರಿಟ್ ಅರ್ಜಿ ವಿಚಾರಣೆ ನಾಳೆಗೆ ಹೈಕೋರ್ಟ್ ನಿಗದಿಪಡಿಸಿತು.