ಮಂಡ್ಯ: ಜಿಲ್ಲೆಯ ಮದ್ಧೂರಲ್ಲಿ ಗಣೇಶ ಮೂರ್ತಿ ಮೆರವಣಿಗೆ ವೇಳೆಯಲ್ಲಿ ಕಲ್ಲು ತೂರಾಟ ಘಟನೆ ನಡೆದಿತ್ತು. ಈ ಘಟನೆಯ ಸಂಬಂಧ 22 ಆರೋಪಿಗಳನ್ನು ಬಂಧಿಸಲಾಗಿತ್ತು. ಇಂತಹ ಬಂಧಿತ 22 ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶಿಸಿದೆ.
ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿತ್ತು. ಈ ಘಟನೆಯ ಸಂಬಂಧ ಪೊಲೀಸರು 22 ಆರೋಪಿಗಳನ್ನು ಬಂಧಿಸಿದ್ದರು. ಈ ಬಂಧಿತ ಆರೋಪಿಗಳನ್ನು ಮದ್ದೂರಿನ 2ನೇ ಹೆಚ್ಚುವರಿ ಸಿವಿಲ್ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದಂತ ಕೋರ್ಟ್ ಆರೋಪಿಗಳಿಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ.