ದಕ್ಷಿಣಕನ್ನಡ : ಬಿಜೆಪಿ ಯುವ ಮುಖಂಡನ ಬಂಧನ ಖಂಡಿಸಿ ನಡೆದ ಪ್ರತಿಭಟನೆ ವೇಳೆ ಬೆಳ್ತಂಗಡಿ ಪಿಎಸ್‌ಐಗೆ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕ ಪೂಂಜಾ ವಿರುದ್ಧ ಎರಡು ಕೇಸ್‌ ದಾಖಲಾಗಿದೆ. ಈ ಪ್ರಕರಣಗಗಳಿಗೆ ಸಂಬಂಧಿಸಿದಂತೆ ವಿಚಾರಣೆಗೆ ಠಾಣೆ ಆಗಮಿಸಬೇಕೆಂದು ಪೊಲೀಸರು ನೋಟಿಸ್ ಜಾರಿ ನೀಡಿದ್ದಾರೆ.

ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹರೀಶ್ ಪೂಂಜಾ ಬೆಂಗಳೂರಿನತ್ತ ಪಯಣ ಬೆಳೆಸಿದ್ದಾರೆ. ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜ ಎರಡು ಪಟ್ಟಣದ ಜಾಮೀನು ಪಡೆಯಲು ಬೆಂಗಳೂರಿಗೆ ಪ್ರಯಾಣಿಸಿದ್ದಾರೆ. ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಲಿದ್ದಾರೆ. ವಕೀಲ ಅರುಣ ಶ್ಯಾಮ್ ಮೂಲಕ ಜಾಮೀನು ಅರ್ಜಿ ಸಲ್ಲಿಸಲಿದ್ದಾರೆ.

ಕೇಸ್ಗೆ ಸಂಬಂಧಿಸಿದಂತೆ ಇದೀಗ ಶಾಸಕ ಹರೀಶ್ ಪೂಂಜಾ ಅವರು ಹೈಕೋರ್ಟ್ ಮರೆ ಹೋಗಲಿದ್ದಾರೆ ಎಂದು ತಿಳಿದುಬಂದಿದೆ. ಬೆಳತಂಗಡಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣ ದಾಖಲಾಗಿವೆ. ನೀನೇನ್ ಠಾಣೆಯ ಜಮೀನಿನ ಮೇಲೆ ಹರಿಶ ಪೂಂಜಾ ಅವರನ್ನು ಬಿಡುಗಡೆ ಮಾಡಲಾಗಿತ್ತು. ಆದರೆ ಮತ್ತೆ ವಿಚಾರಣೆಗೆ ಹಾಜರಾಗಬೇಕೆಂದು ಪೊಲೀಸರು ನೋಟಿಸ್ ನೀಡಿದ್ದಾರೆ.ಇದೀಗ ಈ ನೋಟೀಸ್ ಪ್ರಶ್ನಿಸಿ ಶಾಸಕ ಹರೀಶ್ ಪೂಂಜಾ ಅವರು ಹೈಕೋರ್ಟಿಗೆ ಜಾಮೀನು ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಪ್ರಕರಣದ ಹಿನ್ನೆಲೆ?

ಶಾಸಕ ಹರೀಶ್ ಪೂಂಜಾ ಬೆಂಬಲಿಗರು ಮೆಲಂತಬೆಟ್ಟುವಿನಲ್ಲಿ ಅಕ್ರಮವಾಗಿ ಕಲ್ಲುಗಣಿಗಾರಿಕೆ ನಡೆಸುತ್ತಿದ್ದರು ಎಂದು ಆರೋಪಿಸಿ ಬೆಳ್ತಂಗಡಿ ತಹಶಿಲ್ದಾರ್ ದಾಳಿ ಮಾಡಿದ್ದರು‌.ಶಾಸಕರ ಆಪ್ತರಾದ ಪ್ರಮೋದ್ ಉಜಿರೆ ಮತ್ತು ಶಶಿರಾಜ್ ಶೆಟ್ಟಿ ಮೇಲೆ ದೂರು ದಾಖಲಾಗಿತ್ತು‌. ಬಿಜೆಪಿ ತಾಲೂಕು ಯುವಮೋರ್ಚಾದ ಅಧ್ಯಕ್ಷ, ರೌಡಿಶೀಟರ್ ಆಗಿದ್ದ ಶಶಿರಾಜ್ ಶೆಟ್ಟಿಯನ್ನು ಪೊಲೀಸರು ಬಂಧಿಸಿದ್ದರು‌.

ಈ ವಿಚಾರ ತಿಳಿದ ಪೂಂಜಾ ಪೊಲೀಸರ ವಿರುದ್ಧ ಕೆಂಡಮಂಡಲರಾಗಿದ್ದರು. ಅಲ್ಲದೇ ಮೇ 18 ರ ರಾತ್ರಿ ತಮ್ಮ ಬೆಂಬಲಿಗರ ಪರ ಪೊಲೀಸ್ ಠಾಣೆಯಲ್ಲಿ ಧರಣಿ ನಡೆಸಿದ್ದರು.‌ ಈ ವೇಳೆ ಪೊಲೀಸ್ ಠಾಣೆ ನಿಮ್ಮಪ್ಪಂದಾ ಎಂದು ಹರೀಶ್ ಪೂಂಜಾ ಬೆಳ್ತಂಗಡಿ ಠಾಣೆ PSI ಮುರಳೀಧರ್ ನಾಯ್ಕ್‌ಗೆ ಅವಾಜ್ ಹಾಕಿದ್ದರು. ಈ ಹಿನ್ನೆಲೆಯಲ್ಲಿ ಈಗ ಕರ್ತವ್ಯಕ್ಕೆ ಅಡ್ಡಿ ಮತ್ತು ಅವಾಚ್ಯ ಶಬ್ದಗಳಿಂದ ನಿಂಧನೆ ಆರೋಪದ ಮೇಲೆ ದೂರು ದಾಖಲಾಗಿತ್ತು‌.

ಇನ್ನು ಎಫ್​ಐಆರ್​ ಖಂಡಿಸಿ ಶಾಸಕ ಹರೀಶ್ ಪೂಂಜಾ ಬೆಂಬಲಿಗರ ಜೊತೆ ಮೊನ್ನೆ ಬೆಳ್ತಂಗಡಿಯಲ್ಲಿ ಬೃಹತ್ ಪ್ರತಿಭಟನೆಯನ್ನು ಮಾಡಿದ್ದರು. ಅಲ್ಲಿ ಪೊಲೀಸ್ ಇಲಾಖೆ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಷ್ಯಂತ್ ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು.

ಈ ಹಿನ್ನೆಲೆಯಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಶಾಸಕ ಹರೀಸ್ ಪೂಂಜಾ ಮೇಲೆ ನಿನ್ನೆ(ಮೇ 21) ಮತ್ತೊಂದು ಪ್ರಕರಣ ದಾಖಲಾಗಿತ್ತು. ಪೊಲೀಸರಿಗೆ ಜೀವ ಬೆದರಿಕೆ ಒಡ್ಡಿದ ಹಾಗೂ ತಾಲೂಕು ಕಚೇರಿಗೆ ಬರುವ ಸಾರ್ವಜನಿಕರಿಗೂ ತಡೆ ಆರೋಪ ಮಾಡಿ ಐಪಿಸಿ 143, 147, 341, 504, 506 ಜೊತೆಗೆ 149 ಐ.ಪಿ.ಸಿಯಂತೆ ಪ್ರಕರಣ ದಾಖಲಿಸಲಾಗಿತ್ತು.

Share.
Exit mobile version