ಮುಂಬೈ: ಬಾಲಿವುಡ್ ಸ್ಟಾರ್ ಜೋಡಿ ಕತ್ರಿನಾ ಕೈಫ್ ಮತ್ತು ವಿಕ್ಕಿ ಕೌಶಲ್ಗೆ ಸಾಮಾಜಿಕ ಜಾಲತಾಣಗಳ ಮೂಲಕ ಜೀವ ಬೆದರಿಕೆ ಹಾಕಿರುವ ಆರೋಪದ ಮೇಲೆ ಮುಂಬೈ ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಈ ಸಂಬಂಧ ಸಾಂತಾಕ್ರೂಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭವಾಗಿದೆ. ನಟರಿಗೆ ಏಕೆ ಬೆದರಿಕೆ ಹಾಕಲಾಗಿದೆ ಎಂಬುದಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ.
Maharashtra | Police register a case against an unidentified man and initiate an investigation for allegedly giving life threats to actors Katrina Kaif and Vicky Kaushal through social media. Case registered at Santacruz Police Station: Mumbai Police
(File photos) pic.twitter.com/hQTaTMnB9a
— ANI (@ANI) July 25, 2022
ಡಿಸೆಂಬರ್ 9 ರಂದು ರಾಜಸ್ಥಾನದ ಸವಾಯಿ ಮಾಧೋಪುರದಲ್ಲಿರುವ ಐಷಾರಾಮಿ ಸಿಕ್ಸ್ ಸೆನ್ಸ್ ಫೋರ್ಟ್ ಬರ್ವಾರಾದಲ್ಲಿ ಕತ್ರಿನಾ ಕೈಫ್ ಮತ್ತು ವಿಕ್ಕಿ ಕೌಶಲ್ ವಿವಾಹವಾದರು. ದಂಪತಿಗಳು ಇತ್ತೀಚೆಗೆ ನ್ಯೂಯಾರ್ಕ್ನಲ್ಲಿ ವಿಹಾರಕ್ಕೆ ತೆರಳಿದ್ದರು.
ಕೆಲವು ದಿನಗಳ ಹಿಂದೆ, ಸಲ್ಮಾನ್ ಮತ್ತು ಅವರ ತಂದೆ ಸಲೀಂ ಖಾನ್ ಅವರಿಗೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ನಿಂದ ಬೆದರಿಕೆ ಪತ್ರ ಬಂದಿತ್ತು, ಇದರ ಪರಿಣಾಮವಾಗಿ ನಟನ ನಿವಾಸದ ಬಳಿ ಭದ್ರತೆಯನ್ನು ಹೆಚ್ಚಿಸಲಾಗಿತ್ತು. ಸಲ್ಮಾನ್ ಸುರಕ್ಷಿತವಾಗಿರಲು ಅಧಿಕಾರಿಗಳೊಂದಿಗೆ ಬಂದೂಕು ಪರವಾನಗಿಗಾಗಿ ಅರ್ಜಿ ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ.