ಚಿತ್ರದುರ್ಗ: ಜಿಲ್ಲೆಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮೈಸೂರಿನ ಒಡನಾಡಿ ಸಂಸ್ಥೆಯ ಮೂಲಕ ಮಹಿಳೆಯೊಬ್ಬರು ದೂರು ನೀಡಿದ್ದಾರೆ. ಈ ದೂರಿನ ಆಧಾರದ ಮೇಲೆ, ಮೈಸೂರು ನಗರದ ನಜರಬಾದ್ ಪೊಲೀಸ್ ಠಾಣೆಯಲ್ಲಿ ಶಿವಮೂರ್ತಿ ಮರುಘಾಶರಣರು ( Shivamurthy Murughasharanru ) ಸೇರಿದಂತೆ 7 ಮಂದಿ ವಿರುದ್ಧ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲಿನ ಅತ್ಯಾಚಾರ ಪ್ರಕರಣ ಸಂಬಂಧ ಪೋಕ್ಸೋ ಕೇಸ್ ನಡಿ ಪ್ರಕರಣ ದಾಖಲಾಗಿದೆ ಎಂಬುದಾಗಿ ಚಿತ್ರದುರ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ( Chitradurga District Superintendent of Police ) ಸ್ಪಷ್ಟ ಪಡಿಸಿದ್ದಾರೆ.
ಕರ್ನಾಟಕ ಮೂರು ಭಾಗ, 3 ಮುಖ್ಯಮಂತ್ರಿ, 3 ರಾಜ್ಯಪಾಲರು – ಬ್ರಹ್ಮಾಂಡ ಗುರೂಜಿ ಸ್ಪೋಟಕ ಭವಿಷ್ಯ
ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಚಿತ್ರದುರ್ಗಾ ಜಿಲ್ಲಾ ಪೊಲೀಸ್ ಇಲಾಖೆಯು, ಗ್ರಾಮಾಂತರ ಠಾಣಾ ವ್ಯಾಪ್ತಿಯ ಮುರುಘಾಮಠದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಮಹಿಳೆಯೊಬ್ಬರು ಮಠದ ಅಧೀನದಲ್ಲಿರುವ ಅಕ್ಕ ಮಹಾದೇವಿ ವಿದ್ಯಾರ್ಥಿ ನಿಲಯದಲ್ಲಿ ವಾಸವಾಗಿದ್ದ ತಮ್ಮ ಇಬ್ಬರು ಅಪ್ರಾಪ್ತ ವಯಸ್ಸಿನ ಹೆಣ್ಣುಮಕ್ಕಳ ಹಾಗೂ ಇನ್ನಿತರ ಇಬ್ಬರು ಅಪ್ರಾಪ್ತ ವಯಸ್ಸಿನ ಹೆಣ್ಣುಮಕ್ಕಳ ಮೇಲೆ ಮುರುಘಾ ಮಠದ ಸ್ವಾಮೀಜಿ ಲೈಂಗಿಕ ದೌರ್ಜನ್ಯವನ್ನು ಎಸಗಿದ್ದಾರೆ ಎಂದು ಆರೋಪಿಸಿದ್ದಾರೆ.
ಮೈಸೂರಿನ ಒಡನಾಡಿ ಸಂಸ್ಥೆಯ ಮೂಲಕ ಮೈಸೂರು ನಗರದ ನಜರಬಾದ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ದೂರಿನ ಆಧಾರದ ಮೇಲೆ ಕಲಂ 376(2) (ಎನ್), 376(3), ಪೋಕ್ಸೋ ಆಕ್ಟ್ 2012 ಅಡಿ ಪ್ರಕರಣ ದಾಖಲಾಗಿರುತ್ತದೆ ಎಂದು ತಿಳಿಸಿದ್ದಾರೆ.
ಮೈಸೂರು ನಜರಬಾದ್ ಠಾಣೆ ಪೊಲೀಸರು ಕೃತ್ಯ ನಡೆದ ಸ್ಥಳದ ಆಧಾರದ ಮೇಲೆ ನ್ಯಾಯಾಲಯದ ಅನುಮತಿ ಪಡೆದು ಪ್ರಕರಣವನ್ನು ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಶಿವಮೊಗ್ಗ: ಸಂಗ್ರಹಿಸಿದ ಘನತ್ಯಾಜ್ಯ ಸಮರ್ಪಕ ವಿಲೇವಾರಿಗೆ ಸೂಚನೆ – DC ಡಾ.ಆರ್.ಸೆಲ್ವಮಣಿ
ಈ ಪ್ರಕರಣದಲ್ಲಿ ಎ.1 ಆರೋಪಿಯಾಗಿ ಶಿವಮೂರ್ತಿ ಮುರುಘಾಶರಣರು, ಎ2 ಆರೋಪಿಯಾಗಿ ಅಕ್ಕಮಹಾದೇವಿ ವಸತಿ ನಿಲಯದ ವಾರ್ಡನ್ ರಶ್ಮಿ, ಎ3 ಅಪ್ರಾಪ್ತ ವಯಸ್ಸಿನ ಆರೋಪಿ, ಎ4 ಪರಮಶಿವಯ್ಯ, ಎ5 ಗಂಗಾಧರಯ್ಯ, ಎ6 ಮಹಾಲಿಂಗ ಹಾಗೂ ಎ7 ಕರಿಬಸಪ್ಪ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಪ್ರಕರಣವನ್ನು ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯ ನಿರೀಕ್ಷಕರಾದ ಬಾಲಚಂದ್ರ ನಾಯ್ಕ ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾದ ಪೋಕ್ಸೋ ಪ್ರಕರಣದ ಕುರಿತು ಮಾನ್ಯ ಪೊಲೀಸ್ ಅಧೀಕ್ಷಕರು ನೀಡಿರುವ ಪತ್ರಿಕಾ ಪ್ರಕಟಣೆಯ ಪ್ರತಿ @DgpKarnataka @alokkumar6994 @igperdvg @ParashuramaKal1 pic.twitter.com/L0UxKaz8zT
— Chitradurga District Police (@DistrictPolice1) October 14, 2022