Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Shocking: ಮತಾಂತರಕ್ಕೆ ಒತ್ತಡ: ವೈಪ್ರೊ ಸಂಸ್ಥೆಯ ಮಾಜಿ ಉದ್ಯೋಗಿಯಿಂದ ಗಂಭೀರ ಆರೋಪ, ಉದ್ಯೋಗಕ್ಕೆ ರಾಜೀನಾಮೆ!

ಜೂನ್ 10ರಂದು ಭಾರತದ ಅತಿ ದೀರ್ಘಕಾಲದ ಚುನಾಯಿತ ಪ್ರಧಾನಿಯಾಗಿ ಮೋದಿ ದಾಖಲೆ | PM Modi

ಸಿಎಂ ಡಿಕೆಶಿ ಮೊದಲ ಕ್ಯಾಬಿನೆಟ್ ಬಿಗ್ ಗಿಫ್ಟ್: ವಿದ್ಯಾರ್ಥಿಗಳಿಗೆ ಫ್ರೀ ಬಸ್ ಪಾಸ್ ಸೇರಿದಂತೆ 6 ಮಹತ್ವದ ಘೋಷಣೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿ `ಕೋಮು ಸೌಹಾರ್ದತೆಗೆ’ ಧಕ್ಕೆ ತರುವವರ ವಿರುದ್ಧ ಕೇಸ್ ಫಿಕ್ಸ್ : CM ಸಿದ್ದರಾಮಯ್ಯ ಎಚ್ಚರಿಕೆ
KARNATAKA

ರಾಜ್ಯದಲ್ಲಿ `ಕೋಮು ಸೌಹಾರ್ದತೆಗೆ’ ಧಕ್ಕೆ ತರುವವರ ವಿರುದ್ಧ ಕೇಸ್ ಫಿಕ್ಸ್ : CM ಸಿದ್ದರಾಮಯ್ಯ ಎಚ್ಚರಿಕೆ

By kannadanewsnow57

ದಕ್ಷಿಣ ಕನ್ನಡ : ರಾಜ್ಯದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ತರುವವರ ಮೇಲೆ ಹಾಗೂ ಸುಳ್ಳು ಸುದ್ದಿ ಹಬ್ಬಿಸಿದವರ ಮೇಲೆ ಪ್ರಕರಣ ದಾಖಲು ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಸೋಮವಾರ ಪುತ್ತೂರಿನಲ್ಲಿ ಆಯೋಜಿಸಿದ್ದ “ಅಶೋಕ ಜನ-ಮನ 2025” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಕೋಮು ಸೌಹಾರ್ದತೆ ಇದ್ದರೆ ಯಾವುದೇ ರಾಜ್ಯ, ಜಿಲ್ಲೆ ಬೆಳವಣಿಗೆಯಾಗಲು ಸಾಧ್ಯ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಬಗ್ಗೆ ವಿಶೇಷ ಗಮನ ಹರಿಸಬೇಕು. ಕೋಮು ಸೌಹಾರ್ದತೆಗೆ ಧಕ್ಕೆ ತರುವವರ ಮೇಲೆ ಹಾಗೂ ಸುಳ್ಳು ಸುದ್ದಿ ಹಬ್ಬಿಸಿದವರ ಮೇಲೆ ಪ್ರಕರಣ ದಾಖಲು ಮಾಡಲಾಗುವುದು. ಈ ಬಗ್ಗೆ ಸಚಿವರಾದ ಪ್ರಿಯಾಂಕ್ ಖರ್ಗೆ ಹಾಗೂ ಹೆಚ್.ಕೆ ಪಾಟೀಲ್ ಅವರು ಕಾನೂನು ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದ್ದಾರೆ ಎಂದು ಹೇಳಿದ್ದಾರೆ.

ಅಶೋಕ್ ರೈ ಅವರು ನಮ್ಮ ಶಾಸಕರಾಗಿ ಉತ್ತಮ ಕೆಲಸ ಮಾಡುತ್ತಿದ್ದಾರೆ. ಟ್ರಸ್ಟ್ ವತಿಯಿಂದ ವಸ್ತ್ರದಾನ ಕಾರ್ಯವನ್ನು13 ವರ್ಷಗಳಿಂದ ಮಾಡುತ್ತಾ ಬರುತ್ತಿದ್ದಾರೆ. ಒಂದು ಲಕ್ಷ ಜನರಿಗೆ ಇಂದು ವಸ್ತ್ರದಾನ ಮಾಡುತ್ತಿದ್ದಾರೆ. ಅವರ ಈ ಕಾರ್ಯ ಇತರರಿಗೆ ಅವರು ಸ್ಫೂರ್ತಿಯಾಗಲಿ.

ಆರ್ಥಿಕವಾಗಿ ಸದೃಢರಾದವರು ಸಮಾಜದಲ್ಲಿನ ದುರ್ಬಲರಿಗೆ ತಮ್ಮ ಗಳಿಕೆಯ ಒಂದು ಭಾಗವನ್ನು ನೀಡುವುದು ಒಳ್ಳೆಯ ಕೆಲಸ. ಸಂವಿಧಾನದ ಸಮ ಸಮಾಜ ಉದ್ದೇಶ, ಬಸವಣ್ಣನ ಕಾಯಕ ಮತ್ತು ದಾಸೋಹ ತತ್ವ ಎಲ್ಲವೂ ಇದೇ ಆಗಿದೆ.

ನಮ್ಮ ನಾಡು ವೈವಿಧ್ಯತೆಯಲ್ಲಿ ಏಕತೆಯನ್ನು ಕಾಣಬೇಕು. ಸರ್ವಜನಾಂಗದ ಶಾಂತಿಯ ತೋಟವಾಗಬೇಕು. ಪರಸ್ಪರ ಕಚ್ಚಾಡುವ, ಅಸಮಾನತೆವುಳ್ಳ ಸಮಾಜ ನಿರ್ಮಾಣವಾಗಬಾರದು. ಇತರೆ ಧರ್ಮಗಳ ಬಗ್ಗೆ ಸಹಿಷ್ಣುತೆ ಅಗತ್ಯ. ಸಹಬಾಳ್ವೆ ಇರಬೇಕು. ಇದನ್ನು ಎಲ್ಲರೂ ಪಾಲಿಸಿದಾಗ ಸಂವಿಧಾನದ ಧ್ಯೇಯೋದ್ದೇಶಗಳನ್ನು ಪಾಲಿಸಿದಂತಾಗುತ್ತದೆ.

ಶಕ್ತಿ ಯೋಜನೆ ಜಾರಿಯಾದ ನಂತರ ತಲಾ ಆದಾಯದಲ್ಲಿ ಕರ್ನಾಟಕ ಮೊದಲನೇ ಸ್ಥಾನದಲ್ಲಿದೆ. ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ಸರ್ಕಾರ ದಿವಾಳಿಯಾಗಿದೆ ಎಂದು ಟೀಕಿಸುತ್ತಾರೆ. ಸರ್ಕಾರದ ಬಳಿ ಹಣವಿಲ್ಲದಿದ್ದರೆ ಕಾಂಗ್ರೆಸ್ ಸರ್ಕಾರ ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ 2,500 ಕೋಟಿ ರೂ. ಗಳ ಅನುದಾನ ಕೊಡಲು ಸಾಧ್ಯವಾಗುತ್ತಿತ್ತೆ?

ಟೀಕೆ ಮಾಡುವವರು ಸುಮ್ಮನೆ ಟೀಕೆ ಮಾಡುತ್ತಾರೆ. ಏಕೆಂದರೆ ಜಾತಿ ಧರ್ಮದ ಹೆಸರಿನಲ್ಲಿ ಜಗಳ ತರುವುದರಲ್ಲಿ ಜಿಲ್ಲೆ ನಂಬರ್ ಒನ್ ಸ್ಥಾನದಲ್ಲಿತ್ತು. ಅದಕ್ಕೆಲ್ಲಾ ನಮ್ಮ ಸರ್ಕಾರ ಕಡಿವಾಣ ಹಾಕಿದೆ. ಜಾತಿ ಧರ್ಮ ಎಂದು ಜಗಳ ತರುವವರ ಮಕ್ಕಳನ್ನು ಇದಕ್ಕೆ ಕಳಿಸುವುದಿಲ್ಲ. ಬಡವರ ಮಕ್ಕಳನ್ನು, ಅಮಾಯಕರನ್ನು ಕಳಿಸುತ್ತಾರೆ. ದಕ್ಷ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಪೋಲಿಸ್ ಅಧಿಕಾರಿಗಳು ದಕ್ಷರಾಗಿದ್ದರೆ ಬದಲಾವಣೆ ತರಲು ಸಾಧ್ಯ. ಅಧಿಕಾರಿಗಳು ಮತ್ತು ಜನ ಪ್ರತಿನಿಧಿಗಳು ಅನ್ಯೋನ್ಯತೆಯಿಂದ ಕೆಲಸ ಮಾಡಬೇಕು.

ಬಜೆಟ್ ನಲ್ಲಿ ಘೋಷಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ವೈದ್ಯಕೀಯ ಕಾಲೇಜು ಪುತ್ತೂರಿನಲ್ಲಿಯೇ ನಿರ್ಮಾಣವಾಗಲಿದೆ. ಈ ಬಗ್ಗೆ ಯಾರಿಗೂ ಅನುಮಾನ ಪಡುವುದು ಬೇಡ. ವೈದ್ಯಕೀಯ ಕಾಲೇಜು ನಿರ್ಮಾಣವನ್ನು ಸರ್ಕಾರ ಮಾಡಿಯೇ ಮಾಡಲಿದೆ. ಎಲ್ಲಾ ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜು ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ನಮ್ಮ ಬದ್ಧತೆಯಾಗಿದೆ. ಇಲ್ಲಿಯವರೆಗೆ 22 ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆ ನಿರ್ಮಾಣವಾಗಿದೆ. ಜಿಲ್ಲೆಯಲ್ಲಿ ಜೇನು ಕಚ್ಚಿ ಮೃತಪಟ್ಟ ವ್ಯಕ್ತಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಐದು ಲಕ್ಷ ಪರಿಹಾರ ನೀಡಲಾಗುವುದು ಎಂದು ಹೇಳಿದ್ದಾರೆ.

ಅಶೋಕ್ ರೈ ಅವರು ನಮ್ಮ ಶಾಸಕರಾಗಿ ಉತ್ತಮ ಕೆಲಸ ಮಾಡುತ್ತಿದ್ದಾರೆ. ಟ್ರಸ್ಟ್ ವತಿಯಿಂದ ವಸ್ತ್ರದಾನ ಕಾರ್ಯವನ್ನು13 ವರ್ಷಗಳಿಂದ ಮಾಡುತ್ತಾ ಬರುತ್ತಿದ್ದಾರೆ. ಒಂದು ಲಕ್ಷ ಜನರಿಗೆ ಇಂದು ವಸ್ತ್ರದಾನ ಮಾಡುತ್ತಿದ್ದಾರೆ. ಅವರ ಈ ಕಾರ್ಯ ಇತರರಿಗೆ ಅವರು ಸ್ಫೂರ್ತಿಯಾಗಲಿ.

ಆರ್ಥಿಕವಾಗಿ ಸದೃಢರಾದವರು ಸಮಾಜದಲ್ಲಿನ ದುರ್ಬಲರಿಗೆ ತಮ್ಮ ಗಳಿಕೆಯ ಒಂದು… pic.twitter.com/XYvfV4twoO

— CM of Karnataka (@CMofKarnataka) October 21, 2025

Cases will be fixed against those who threaten 'communal harmony' in the state: CM Siddaramaiah warns
Share. Facebook Twitter LinkedIn WhatsApp Email

Related Posts

ಸಿಎಂ ಡಿಕೆಶಿ ಮೊದಲ ಕ್ಯಾಬಿನೆಟ್ ಬಿಗ್ ಗಿಫ್ಟ್: ವಿದ್ಯಾರ್ಥಿಗಳಿಗೆ ಫ್ರೀ ಬಸ್ ಪಾಸ್ ಸೇರಿದಂತೆ 6 ಮಹತ್ವದ ಘೋಷಣೆ!

2 Mins Read

BREAKING: ಇಡೀ ರಾಜ್ಯಕ್ಕೆ ರಾಜ್ಯಕ್ಕೆ ಬಿ-ಖಾತಾದಿಂದ ಎ-ಖಾತಾ ಯೋಜನೆ ವಿಸ್ತರಣೆ: ಸಿಎಂ ಡಿ.ಕೆ ಶಿವಕುಮಾರ್ ಘೋಷಣೆ

2 Mins Read

GOOD NEWS: ರಾಜ್ಯದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಸಿಎಂ ಡಿ.ಕೆ ಶಿವಕುಮಾರ್ ಗುಡ್ ನ್ಯೂಸ್: ಎಲ್ಲರಿಗೂ ಫ್ರಿ ಬಸ್ ಪಾಸ್

2 Mins Read
Recent News

Shocking: ಮತಾಂತರಕ್ಕೆ ಒತ್ತಡ: ವೈಪ್ರೊ ಸಂಸ್ಥೆಯ ಮಾಜಿ ಉದ್ಯೋಗಿಯಿಂದ ಗಂಭೀರ ಆರೋಪ, ಉದ್ಯೋಗಕ್ಕೆ ರಾಜೀನಾಮೆ!

ಜೂನ್ 10ರಂದು ಭಾರತದ ಅತಿ ದೀರ್ಘಕಾಲದ ಚುನಾಯಿತ ಪ್ರಧಾನಿಯಾಗಿ ಮೋದಿ ದಾಖಲೆ | PM Modi

ಸಿಎಂ ಡಿಕೆಶಿ ಮೊದಲ ಕ್ಯಾಬಿನೆಟ್ ಬಿಗ್ ಗಿಫ್ಟ್: ವಿದ್ಯಾರ್ಥಿಗಳಿಗೆ ಫ್ರೀ ಬಸ್ ಪಾಸ್ ಸೇರಿದಂತೆ 6 ಮಹತ್ವದ ಘೋಷಣೆ!

BREAKING: ಇಡೀ ರಾಜ್ಯಕ್ಕೆ ರಾಜ್ಯಕ್ಕೆ ಬಿ-ಖಾತಾದಿಂದ ಎ-ಖಾತಾ ಯೋಜನೆ ವಿಸ್ತರಣೆ: ಸಿಎಂ ಡಿ.ಕೆ ಶಿವಕುಮಾರ್ ಘೋಷಣೆ

State News
KARNATAKA

ಸಿಎಂ ಡಿಕೆಶಿ ಮೊದಲ ಕ್ಯಾಬಿನೆಟ್ ಬಿಗ್ ಗಿಫ್ಟ್: ವಿದ್ಯಾರ್ಥಿಗಳಿಗೆ ಫ್ರೀ ಬಸ್ ಪಾಸ್ ಸೇರಿದಂತೆ 6 ಮಹತ್ವದ ಘೋಷಣೆ!

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಜವಾಬ್ದಾರಿ ವಹಿಸಿಕೊಂಡಿರುವ ಡಿ.ಕೆ. ಶಿವಕುಮಾರ್ ಅವರು ಮೊದಲ ದಿನವೇ ಆಡಳಿತದಲ್ಲಿ ಮುನ್ನುಗ್ಗಿದ್ದಾರೆ. ಇಂದು ನಡೆದ…

BREAKING: ಇಡೀ ರಾಜ್ಯಕ್ಕೆ ರಾಜ್ಯಕ್ಕೆ ಬಿ-ಖಾತಾದಿಂದ ಎ-ಖಾತಾ ಯೋಜನೆ ವಿಸ್ತರಣೆ: ಸಿಎಂ ಡಿ.ಕೆ ಶಿವಕುಮಾರ್ ಘೋಷಣೆ

GOOD NEWS: ರಾಜ್ಯದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಸಿಎಂ ಡಿ.ಕೆ ಶಿವಕುಮಾರ್ ಗುಡ್ ನ್ಯೂಸ್: ಎಲ್ಲರಿಗೂ ಫ್ರಿ ಬಸ್ ಪಾಸ್

BIG BREAKING: ರಾಜ್ಯದಲ್ಲಿ ‘ಭೂ ಗ್ಯಾರಂಟಿ’ ಘೋಷಿಸಿದ ಸಿಎಂ ಡಿ.ಕೆ ಶಿವಕುಮಾರ್: 3 ಅಂತಸ್ತಿನ ಮನೆಗಳಿಗೆ ಒಸಿ ವಿನಾಯ್ತಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.