Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘AC’ ಇಲ್ಲದೆಯೇ ನಿಮ್ಮ ಮನೆ ಮಲೆನಾಡಿನಂತೆ ತಂಪಾಗಿರಬೇಕೆ? ಈ 6 ಸೂತ್ರಗಳನ್ನು ಪಾಲಿಸಿ!

05/04/2026 9:44 PM

ಇನ್ಮುಂದೆ ರಾಜ್ಯದಲ್ಲಿ ‘ದ್ವಿತೀಯ PUC’ವರೆಗೆ ಗಂಡು ಮಕ್ಕಳಿಗೂ ‘ಉಚಿತ ಬಸ್ ಪ್ರಯಾಣ’ದ ವ್ಯವಸ್ಥೆ

05/04/2026 9:28 PM

ಹುಬ್ಬಳ್ಳಿಯಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ, ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಆರೋಪಿಗಳ ಬಂಧನ

05/04/2026 9:18 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿ ಜಾತಿ ಗಣತಿ ಅವಧಿ 5 ದಿನ ವಿಸ್ತರಣೆ : ಶಿಕ್ಷಕರಿಗೆ ಬೆಳಗ್ಗೆ 8 ರಿಂದ ಮಧ್ಯಾಹ್ನ 1ರವರೆಗೆ ತರಗತಿ ನಡೆಸಿ ಸಮೀಕ್ಷೆ ಕಾರ್ಯಕ್ಕೆ ಸರ್ಕಾರ ಆದೇಶ
KARNATAKA

ರಾಜ್ಯದಲ್ಲಿ ಜಾತಿ ಗಣತಿ ಅವಧಿ 5 ದಿನ ವಿಸ್ತರಣೆ : ಶಿಕ್ಷಕರಿಗೆ ಬೆಳಗ್ಗೆ 8 ರಿಂದ ಮಧ್ಯಾಹ್ನ 1ರವರೆಗೆ ತರಗತಿ ನಡೆಸಿ ಸಮೀಕ್ಷೆ ಕಾರ್ಯಕ್ಕೆ ಸರ್ಕಾರ ಆದೇಶ

By kannadanewsnow5707/10/2025 5:47 AM

ಬೆಂಗಳೂರು: ರಾಜ್ಯದ ಶಿಕ್ಷಕರು ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ ಜೊತೆಗೆ ಶಾಲಾ ತರಗತಿಯನ್ನು ನಡೆಸುವಂತೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಆದೇಶಿಸಿದೆ. ಈ ಮೂಲಕ ರಾಜ್ಯದ ಜಾತಿಗಣತಿ ಸಮೀಕ್ಷೆಯಲ್ಲಿ ತೊಡಗಿದ್ದಂತ ಶಿಕ್ಷಕರಿಗೆ ಸರ್ಕಾರ ಶಾಕ್ ನೀಡಿದೆ.

ಈ ಕುರಿತಂತೆ ರಾಜ್ಯ ಸರ್ಕಾರ ಆದೇಶಿಸಿದ್ದು, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಕರ್ನಾಟಕ ರಾಜ್ಯದ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಸಮೀಕ್ಷೆಯನ್ನು ಡಿಜಿಟಲ್ ವಿಧಾನದಲ್ಲಿ ಕೈಗೊಳ್ಳುವುದು ಮತ್ತು ಸಮೀಕ್ಷೆಯನ್ನು ಡಿಜಿಟಲ್ ವಿಧಾನದಲ್ಲಿ ಮಾಡಲು ತಂತ್ರಾಂಶದ ಅಭಿವೃದ್ಧಿ ಮತ್ತು ಉಸ್ತುವಾರಿಯನ್ನು ಕೈಗೊಳ್ಳುವುದು, ಹಿಂದುಳಿದ ವರ್ಗಗಳ ಆಯೋಗವು ನಡೆಸುವ ಸಮೀಕ್ಷೆಗೆ ಸಾರ್ವಜನಿಕವಾಗಿ ಲಭ್ಯವಿರುವ ಚುನಾವಣಾ ಮತದಾರರ ಪಟ್ಟಿಯನ್ನು ಉಪಯೋಗಿಸಿಕೊಂಡು ಸಮೀಕ್ಷಾ ಕಾರ್ಯವನ್ನು ಕೈಗೊಳ್ಳಲು ಅಧಿಕಾರಿಗಳನ್ನು ಹಾಗೂ ಶಿಕ್ಷಕರನ್ನು ಹಾಗೂ ಇತರ ಸಿಬ್ಬಂದಿಗಳು ಕೆಲಸ ನಿರ್ವಹಿಸುವಂತೆ ಆದೇಶಿಸಿದೆ. ಸದರಿ ಆದೇಶದಂತೆ ಸಮೀಕ್ಷೆಯನ್ನು ನಡೆಸಲಾಗುತ್ತಿದೆ.

ಸಮೀಕ್ಷೆಯನ್ನು ಗ್ರೇಟರ್ ಬೆಂಗಳೂರು ಆಥಾರಿಟಿ ವ್ಯಾಪ್ತಿಯಲ್ಲಿ ದಿನಾಂಕ: 04-10-2025 ರಿಂದ ಪ್ರಾರಂಭಿಸಲಾಗಿದ್ದು, ರಾಜ್ಯದ ಇತರೆ ಭಾಗಗಳಲ್ಲಿ ದಿನಾಂಕ: 22-09-2025 ರಿಂದ ಪ್ರಾರಂಭಿಸಲಾಗಿದೆ.

ಸಮೀಕ್ಷೆಯು ಪೂರ್ಣಗೊಳ್ಳಲು ಹಚ್ಚಿನ ಕಾಲಾವಕಾಶದ ಅಗತ್ಯವಿರುವುದನ್ನು ಮನಗೊಂಡು, ದಿನಾಂಕ: 26.09.2025 ರಂದು ಮಾನ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಚರ್ಚಿಸಿರುವಂತೆ ಸಮೀಕ್ಷೆಯು ರಜಾ ಅವಧಿಯ ನಂತರವು ಮುಂದುವರೆಯುವ ಸಾಧ್ಯತೆ ಇರುವುದರಿಂದ ರಜಾ ಅವಧಿಯ ನಂತರ ಶಾಲೆ ನಡೆಯುವ ಸಮಯವನ್ನು ಪರೀಷ್ಕರಿಸಿ ಆದೇಶಿಸುವುದು ಸೂಕ್ತ ಎಂದು ತೀರ್ಮಾನಿಸಿ ಅದರಂತೆ ಕ್ರಮವಹಿಸಲು ನಿರ್ಧರಿಸಲಾಯಿತು.

ಸಮೀಕ್ಷೆ ಪೂರ್ಣಗೊಳಿಸಲು ಇನ್ನೂ ಹೆಚ್ಚಿನ ಕಾಲಾವಕಾಶದ ಅಗತ್ಯವಿರುವುದಾಗಿ ತಿಳಿಸಿರುವ ಹಿನ್ನೆಲೆಯಲ್ಲಿ, ಶಾಲಾ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಮಧ್ಯವಾರ್ಷಿಕ ರಜಾ ದಿನಗಳ ನಂತರ ಶಾಲಾ ತರಗತಿಗಳು ಸಮೀಕ್ಷೆಯ ಕಾರಣದಿಂದ ಕುಂಠಿತವಾಗಬಾರದು ಎನ್ನುವ ದೃಷ್ಟಿಯಿಂದ ಈ ಕೆಳಗಿನ ಸೂಚನೆಗಳಂತೆ ಕಮವಹಿಸುವುದು.

ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ: ಈ ವ್ಯಾಪ್ತಿಯಲ್ಲಿನ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ದಿ: 8-10-2025 ರಿಂದ 24-10-2025 ರವರೆಗೆ ಶಾಲಾ ತರಗತಿಗಳನ್ನು ಬೆಳಿಗ್ಗೆ 8.00 ಗಂಟೆಯಿಂದ ಅಪರಾಹ್ನ 1.00 ಗಂಟೆಯವರೆಗೆ ನಿರ್ವಹಿಸಿ, ನಂತರದ ಅವಧಿಯಲ್ಲಿ ಸಮೀಕ್ಷೆ ಕಾರ್ಯಕ್ಕೆ ನಿಯೋಜಿಸಿರುವ ಶಿಕ್ಷಕರು ಸಮೀಕ್ಷಾ ಕಾರ್ಯವನ್ನು ನಿರ್ವಹಿಸುವುದು. ಸಮೀಕ್ಷೆಯನ್ನು ಕೈಗೊಂಡು ದಿನಾಂಕ: 24-10-2025 ರ ಅಂತ್ಯದೊಳಗೆ ಪೂರ್ಣಗೊಳಿಸುವುದು.

ರಾಜ್ಯದ ಇತರೆ ಭಾಗಗಳಲ್ಲಿ (ಗ್ರೇಟರ್‌ ಬೆಂಗಳೂರು ವ್ಯಾಪ್ತಿ ಹೊರತುಪಡಿಸಿ ಉಳಿದ ಭಾಗಗಳು): ಈ ವ್ಯಾಪ್ತಿಯಲ್ಲಿನ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ದಿ: 8-10-2025 ರಿಂದ 12-10-2025 ರವರೆಗೆ ಶಾಲಾ ತರಗತಿಗಳನ್ನು ಬೆಳಿಗ್ಗೆ 8.00 ಗಂಟೆಯಿಂದ ಅಪರಾಹ್ನ 1.00 ಗಂಟೆಯವರೆಗೆ ನಿರ್ವಹಿಸಿ, ನಂತರದ ಅವಧಿಯಲ್ಲಿ ಸಮೀಕ್ಷೆ ಕಾರ್ಯಕ್ಕೆ ನಿಯೋಜಿಸಿರುವ ಶಿಕ್ಷಕರು ಸಮೀಕ್ಷಾ ಕಾರ್ಯವನ್ನು ನಿರ್ವಹಿಸುವುದು. ಸಮೀಕ್ಷೆಯನ್ನು ರಜಾ ದಿನಗಳಲ್ಲಿಯೂ ಕೈಗೊಂಡು ದಿನಾಂಕ: 12-10-2025 ರ ಅಂತ್ಯದೊಳಗೆ ಪೂರ್ಣಗೊಳಿಸುವುದು.ಈ ಎಲ್ಲ ಅಂಶಗಳಂತೆ ರಾಜ್ಯದ ಸರ್ಕಾರಿ ಹಾಗೂ ಸರ್ಕಾರಿ ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳು ಕಾರ್ಯನಿರ್ವಹಿಸುವುದು ಎಂದಿದೆ.

ವನ್ಯಜೀವಿಯಿಂದ ಹಾಡಿಯ ಜಾನುವಾರು ಮೃತಪಟ್ಟರೆ ಪರಿಹಾರ: ಸಚಿವ ಈಶ್ವರ ಖಂಡ್ರೆ

Caste census period extended by 5 days in the state: Government orders teachers to conduct classes from 8 am to 1 pm and conduct survey work
Share. Facebook Twitter LinkedIn WhatsApp Email

Related Posts

ಇನ್ಮುಂದೆ ರಾಜ್ಯದಲ್ಲಿ ‘ದ್ವಿತೀಯ PUC’ವರೆಗೆ ಗಂಡು ಮಕ್ಕಳಿಗೂ ‘ಉಚಿತ ಬಸ್ ಪ್ರಯಾಣ’ದ ವ್ಯವಸ್ಥೆ

05/04/2026 9:28 PM1 Min Read

ಹುಬ್ಬಳ್ಳಿಯಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ, ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಆರೋಪಿಗಳ ಬಂಧನ

05/04/2026 9:18 PM1 Min Read

Rain In Karnataka: ನಾಳೆಯಿಂದ 4 ದಿನ ರಾಜ್ಯದಲ್ಲಿ ಮಳೆ ಅಬ್ಬರ: ಬೆಂಗಳೂರು ಸೇರಿ 16 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

05/04/2026 7:59 PM2 Mins Read
Recent News

‘AC’ ಇಲ್ಲದೆಯೇ ನಿಮ್ಮ ಮನೆ ಮಲೆನಾಡಿನಂತೆ ತಂಪಾಗಿರಬೇಕೆ? ಈ 6 ಸೂತ್ರಗಳನ್ನು ಪಾಲಿಸಿ!

05/04/2026 9:44 PM

ಇನ್ಮುಂದೆ ರಾಜ್ಯದಲ್ಲಿ ‘ದ್ವಿತೀಯ PUC’ವರೆಗೆ ಗಂಡು ಮಕ್ಕಳಿಗೂ ‘ಉಚಿತ ಬಸ್ ಪ್ರಯಾಣ’ದ ವ್ಯವಸ್ಥೆ

05/04/2026 9:28 PM

ಹುಬ್ಬಳ್ಳಿಯಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ, ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಆರೋಪಿಗಳ ಬಂಧನ

05/04/2026 9:18 PM

ಸಿಎಸ್‌ಕೆ ವಿರುದ್ಧ ವಿರಾಟ್ ಕೊಹ್ಲಿ ಅಬ್ಬರ: ರೋಹಿತ್ ಶರ್ಮಾ ದಾಖಲೆ ಪುಡಿಪುಡಿ ಮಾಡಿದ ‘ಕಿಂಗ್ ಕೊಹ್ಲಿ’!

05/04/2026 9:15 PM
State News
KARNATAKA

ಇನ್ಮುಂದೆ ರಾಜ್ಯದಲ್ಲಿ ‘ದ್ವಿತೀಯ PUC’ವರೆಗೆ ಗಂಡು ಮಕ್ಕಳಿಗೂ ‘ಉಚಿತ ಬಸ್ ಪ್ರಯಾಣ’ದ ವ್ಯವಸ್ಥೆ

By kannadanewsnow0905/04/2026 9:28 PM KARNATAKA 1 Min Read

ಬೆಂಗಳೂರು: ರಾಜ್ಯದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಕರ್ನಾಟಕ ಸರ್ಕಾರವು ಸಿಹಿ ಸುದ್ದಿಯೊಂದನ್ನು ನೀಡಲು ಸಜ್ಜಾಗಿದೆ. ರಾಜ್ಯದಲ್ಲಿ ‘ಮಕ್ಕಳ ಸ್ನೇಹಿ ಸಾರಿಗೆ ವ್ಯವಸ್ಥೆ’ಯನ್ನು…

ಹುಬ್ಬಳ್ಳಿಯಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ, ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಆರೋಪಿಗಳ ಬಂಧನ

05/04/2026 9:18 PM

Rain In Karnataka: ನಾಳೆಯಿಂದ 4 ದಿನ ರಾಜ್ಯದಲ್ಲಿ ಮಳೆ ಅಬ್ಬರ: ಬೆಂಗಳೂರು ಸೇರಿ 16 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

05/04/2026 7:59 PM

ಮನೆಯ ‘ಗೃಹಮಂತ್ರಿ’ಯಾದತಂಹ ಗೃಹಿಣಿಗಾಗಿ ಉಪಯುಕ್ತ ‘ಟಿಪ್ಸ್’ಗಳು.!

05/04/2026 7:04 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.