ಬೆಂಗಳೂರು: ಇಂದು ರಾಜ್ಯದ ಜನರು ಬಹು ಕುತೂಹಲದಿಂದ ನಿರೀಕ್ಷೆ ಮಾಡುತ್ತಿದ್ದಂತ ಜಾತಿಗಣತಿ ವರದಿಯನ್ನು ರಾಜ್ಯ ಸರ್ಕಾರಕ್ಕೆ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರು ಸಲ್ಲಿಕೆ ಮಾಡಿದ್ದಾರೆ.

ವಿಧಾನಸೌಧಕ್ಕೆ ಎರಡು ಬಾಕ್ಸ್ ಗಳಲ್ಲಿ ಜಾತಿಗಣತಿ ವರದಿಯ ಪ್ರತಿಗಳ ಜೊತೆಗೆ ಜಯಪ್ರಕಾಶ್ ಹೆಗ್ಡೆ ಅವರ ತಂಡವು ಆಗಮಿಸಿತು. ವಿಧಾನಸೌಧದಲ್ಲಿ ಅವರು, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿಯಾಗಿ, ತಾವು ತಯಾರಿಸಿದಂತ ಜಾತಿಗಣತಿ ವರದಿಯನ್ನು ಸಲ್ಲಿಕೆ ಮಾಡಿದರು. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಜಯಪ್ರಕಾಶ್ ನೀಡಿದಂತ ಜಾತಿಗಣತಿ ವರದಿಯನ್ನು ವಿಧಾನಸೌಧದಲ್ಲಿ ಸ್ವೀಕರಿಸಿದರು.

ಇದಕ್ಕೂ ಮುನ್ನಾ ಸುದ್ದಿಗಾರರೊಂದಿಗೆ ಮಾತನಾಡಿದಂತ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಡರಗಿ ಅವರು, ಜಾತಿಗಣತಿ ವರದಿಯನ್ನು ಸ್ವೀಕರಿಸಿರೋದು ಸಂತಸದ ವಿಚಾರವಾಗಿದೆ. ಜಾತಿ ಗಣತಿ ವರದಿ ಬಿಡುಗಡೆ ಮಾಡಿ ನಂತ್ರ ಚರ್ಚೆ ಮಾಡುವುದು ಸೂಕ್ತ. ಜಾತಿ ಗಣತಿ ವರದಿ ನೋಡದೇ ವಿರೋಧ ಮಾಡುವುದು ಸರಿಯಲ್ಲ ಎಂದರು.

ಸರ್ಕಾರಕ್ಕೆ ಸಲ್ಲಿಕೆಯಾದ ಜಾತಿಗಣತಿ ವರದಿಯಲ್ಲಿ ಏನಿದೆ.?

ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಸಲ್ಲಿಸಿರುವಂತ ಜಾತಿಗಣತಿ ವರದಿಯಲ್ಲಿ ಜಾತಿವಾರು ಸಂಖ್ಯೆಯನ್ನು ನಮೂದಿಸಲಾಗಿದೆ ಎನ್ನಲಾಗುತ್ತಿದೆ.

ಈ ವರದಿಯಲ್ಲಿ ಎಸ್ಸಿ, ಎಸ್ಟಿ ಹೊರತುಪಡಿಸಿ ಜಾತಿವಾರು ಲಕ್ಷಣಗಳನ್ನು ಸಮೀಕ್ಷೆ ಮಾಡಿ ನೀಡಲಾಗಿದೆ. ಎಸ್ಸಿ ವರ್ಗದ ಪ್ರಮುಖ ಲಕ್ಷಣಗಳು ವರದಿಯಲ್ಲಿವೆ ಎನ್ನಲಾಗುತ್ತಿದೆ.

ಇದಲ್ಲದೇ ವಿಧಾನಸಭಾ ಕ್ಷೇತ್ರವಾರು ಸಮೀಕ್ಷೆಯ ಸೇರಿದಂತೆ ರಾಜ್ಯದ ವಿವಿಧ ಜಾತಿಗಳ ಬಗ್ಗೆ ವರದಿಯಲ್ಲಿ ಮಹತ್ವದ ಅಂಶಗಳನ್ನು ವಿವರಿಸಲಾಗಿದೆ ಎಂದು ಹೇಳಲಾಗುತ್ತಿದೆ. ಆ ಬಗ್ಗೆ ವರದಿ ಬಹಿರಂಗಗೊಂಡ ನಂತ್ರ ಖಚಿತ ಮಾಹಿತಿ ಹೊರಬೀಳಬೇಕಿದೆ.

ಪಾಕಿಸ್ತಾನದ ಪರ ಘೋಷಣೆ ಕೂಗಿರುವವರ ವಿರುದ್ಧ ಕಾನೂನು ರೀತ್ಯಾ ಕ್ರಮ: ಗೃಹ ಸಚಿವ ಡಾ.ಜಿ.ಪರಮೇಶ್ವರ್

‘ಇಂಗ್ಲೆಂಡ್ ವಿರುದ್ಧ’ದ 5ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯಾವಳಿಗೆ ಬಲಿಷ್ಟ ‘ಭಾರತ ತಂಡ’ ಪ್ರಕಟ

Share.
Exit mobile version