Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕೇಂದ್ರದಿಂದ ಹೊಸ ‘ವಿಕಸಿತ ಭಾರತ – ಜಿ ರಾಮ್ ಜಿ’ ಕಾಯ್ದೆ ಜಾರಿ: ಗ್ರಾಮೀಣ ಜನತೆಗೆ 125 ದಿನಗಳ ಉದ್ಯೋಗ ಖಾತರಿ

13/03/2026 8:46 PM

LPG Cylinder Booking : ಈ ಅಪ್ಲಿಕೇಶನ್’ಗಳು ನಿಮ್ಮ ಗ್ಯಾಸ್ ಸಿಲಿಂಡರ್ ತ್ವರಿತವಾಗಿ ಬುಕ್ ಮಾಡಲು ಸಹಾಯ ಮಾಡುತ್ವೆ! ಹೇಗೆ ಗೊತ್ತಾ?

13/03/2026 8:40 PM

ಪತ್ರಕರ್ತರ ಜೊತೆ ವಿಧಾನಸೌಧ ಗಾರ್ಡನ್ ನಲ್ಲಿ ಊಟ ಸವಿದ ಸಚಿವ ಸಂತೋಷ್ ಲಾಡ್!

13/03/2026 7:45 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇನ್ನೊಂದು ತಿಂಗಳಿನಲ್ಲಿ ‘ಜಾತಿಗಣತಿ ವರದಿ’ ಬಿಡುಗಡೆ : CM ಸಿದ್ಧರಾಮಯ್ಯ ಘೋಷಣೆ
KARNATAKA

ಇನ್ನೊಂದು ತಿಂಗಳಿನಲ್ಲಿ ‘ಜಾತಿಗಣತಿ ವರದಿ’ ಬಿಡುಗಡೆ : CM ಸಿದ್ಧರಾಮಯ್ಯ ಘೋಷಣೆ

By kannadanewsnow5702/02/2026 6:37 AM

ರಾಯಚೂರು: ಇನ್ನೊಂದು ತಿಂಗಳಿನಲ್ಲಿ ಜಾತಿಗಣತಿ ವರದಿ ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಣೆ ಮಾಡಿದ್ದಾರೆ. ಆ ಮೂಲಕ ಜಾತಿಗಣತಿ ವರದಿ ಬಿಡುಗಡೆ ಶೀಘ್ರವೇ ಆಗಲಿದೆ ಎಂಬುದಾಗಿ ತಿಳಿಸಿದ್ದಾರೆ.

ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನ ತಿಂಥಣಿ ಕಾಗಿನೆಲೆ ಪೀಠದಲ್ಲಿ ಮಾತನಾಡಿದಂತ ಅವರು, ನಾನು ಯಾವತ್ತೂ ಅಧಿಕಾರದ ಹಿಂದೆ ಬಿದ್ದವನಲ್ಲ. ನಾನು ಹೋರಾಟದ ಮೂಲಕ ರಾಜಕೀಯ ಮಾಡುತ್ತಾ ಬಂದವನು. ಮುಂದೆಯೂ ಶಕ್ತಿ ಇರುವವರೆಗೂ ನಾನು ಹೋರಾಟ ಮಾಡುತ್ತೇನೆ. ಧ್ವನಿ ಇಲ್ಲದವರಿಗೆ ಧ್ವನಿಯಾಗಿ ಅವರ ಪರ ಹೋರಾಟ ಮಾಡುತ್ತೇನೆ ಎಂದರು.

ಇನ್ನೊಂದು ತಿಂಗಳಿನಲ್ಲಿ ಜಾತಿಗಣತಿ ವರದಿ ಬಿಡುಗಡೆ ಮಾಡುತ್ತೇವೆ. ಹೆಚ್ಚು ಅಂದ್ರೆ ಎರಡು ತಿಂಗಳಿಲ್ಲಿ ವರದಿ ಬಿಡುಗಡೆ ಮಾಡುತ್ತೇವೆ. ಸರ್ವೆ ಆಗಿದೆ. ಆ ಬಗ್ಗೆ ವರದಿ ಕೊಟ್ಟ ಮೇಲೆ ಅಂಗೀಕರಿಸಿ ಬಿಡುಗಡೆ ಮಾಡಲಾಗುತ್ತದೆ. ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳುತ್ತೇವೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದರು.

ರಾಜ್ಯದಲ್ಲಿ ಕನಕಗುರುಪೀಠ ಜಾತ್ಯಾತೀತ ಪೀಠವಾಗಿ ಕೆಲಸ ಮಾಡುತ್ತಿದ್ದು, ಗುರುಪೀಠದಲ್ಲಿ ಪೂಜ್ಯ ಶ್ರೀ ಸಿದ್ದರಾಮಾನಂದಪುರಿ ಸ್ವಾಮೀಜಿಯವರು ಶಿಕ್ಷಣ, ಆಧ್ಯಾತ್ಮ ಮತ್ತು ಜಾತ್ಯತೀತ ಮನೋಭಾವಕ್ಕೆ ಹೆಚ್ಚು ಒತ್ತು ನೀಡಿದ್ದರು. ಕುರುಬ ಸಮುದಾಯಕ್ಕೆ ಮೊದಲ ಬಾರಿಗೆ ಕಾಗಿನೆಲೆ ಗುರುಪೀಠ 1992 ರಲ್ಲಿ ಸ್ಥಾಪಿತವಾಗಿ, ಶ್ರೀ ತಾರಕಾನಂದ ಸ್ವಾಮೀಜಿಯವರು ಅದರ ಮೊದಲ ಗುರುಗಳಾಗಿದ್ದರು. ಕಲ್ಯಾಣ ಕರ್ನಾಟಕ, ಬೆಂಗಳೂರು, ಮೈಸೂರು ಮುಂಬಯಿ ಕರ್ನಾಟಕ ವಿಭಾಗಗಳಿದ್ದು, ಈ ಎಲ್ಲಾ ವಿಭಾಗಗಳಿಗೂ ಪ್ರತ್ಯೇಕ ಗುರುಗಳಿದ್ದು, ಈ ವಿಭಾಗಕ್ಕೆ ಶ್ರೀ ಸಿದ್ದರಾಮಾನಂದಪುರಿ ಸ್ವಾಮೀಜಿಯವರು ಗುರುಗಳಾಗಿದ್ದರು. ಗುರುಪೀಠದಲ್ಲಿ ಶಿಕ್ಷಣ, ಆಧ್ಯಾತ್ಮ, ಜಾತ್ಯಾತೀತ ಮನೋಭಾವಕ್ಕೆ ಹೆಚ್ಚು ಒತ್ತು ನೀಡಿದರು.

ಕಾಗಿನೆಲೆ ಗುರುಪೀಠ ಸ್ಥಾಪನೆಯ ಉದ್ದೇಶವೇ ಸಮಸಮಾಜ ನಿರ್ಮಾಣವಾಗಿದೆ. ಶ್ರೀಗಳ ಆತ್ಮಕ್ಕೆ ಶಾಂತಿ ಕೋರುತ್ತಾ, ಅವರ ಕುಟುಂಬ ವರ್ಗ ಹಾಗೂ ಇಡೀ ಸಮಾಜಕ್ಕೆ ಅವರ ಅಗಲಿಕೆಯ ನೋವು ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ.

ಕನಕದಾಸರು ‘ಕುಲಕುಲವೆಂದು ಹೊಡೆದಾಡದಿರಿ’ ಎಂದಂತೆ, ಬುದ್ಧ ಬಸವಾದಿ ಶರಣರು ಜಾತಿವ್ಯವಸ್ಥೆಯನ್ನು ವಿರೋಧಿಸುತ್ತಾ ಬಂದಿದ್ದಾರೆ. ನಮ್ಮ ಸಮಾಜ ವಿವಿಧ ಜಾತಿ, ಧರ್ಮ, ವರ್ಗ, ಭಾಷೆಗಳಿಂದ ಕೂಡಿದೆ. ಮನುಜರೆಲ್ಲರೂ ಒಂದೇ ಕುಟುಂಬ ಎಂದು ಭಾವಿಸಬೇಕು. ಸಾಮಾಜಿಕ ಚಿಂತಕರಾದ ಲೋಹಿಯಾ ಅವರು ಮುಂದುವರಿದ ಜಾತಿಯವರು ಸಮಾಜವನ್ನು ದಾರಿತಪ್ಪಿಸುವ ಕೆಲಸವನ್ನು ಮಾಡುತ್ತಾರೆ ಎಂದಿದ್ದರು. ಸಮಾನ ಅವಕಾಶವಿರುವ ಸಮಸಮಾಜವನ್ನು ನಿರ್ಮಿಸುವುದು ಅವಶ್ಯಕ.

ಕೆಲವರು ಶಿಕ್ಷಣ ದೊರೆತರೂ ಗುಲಾಮಗಿರಿಯ ಮನಸ್ಥಿತಿಯಿಂದ ಹೊರಬಂದಿಲ್ಲ. ಸ್ವಾಭಿಮಾನಿಗಳಾಗಿ ಬದುಕುವುದು ಮುಖ್ಯ. ವೈಚಾರಿಕ ಮತ್ತು ವೈಜ್ಞಾನಿಕ ಶಿಕ್ಷಣ ಪಡೆದ ಯುವಪೀಳಿಗೆ ಸ್ವಾಭಿಮಾನ ಬೆಳೆಸಿಕೊಳ್ಳಬೇಕು. ಸ್ವಾತಂತ್ರ್ಯ ಬಂದ ಸಂದರ್ಭದಲ್ಲಿ ಶೇ. 15 ರಷ್ಟಿದ್ದ ಶಿಕ್ಷಣ ಈಗ ಶೇ.76 ಆಗಿದ್ದರೂ, ನಮ್ಮಲ್ಲಿ ಜಾತಿವ್ಯವಸ್ಥೆ ನಶಿಸಿಲ್ಲ. ಜಡತ್ವದಿಂದ ಕೂಡಿದ ಸಮಾಜಕ್ಕೆ ಚಲನೆ ಬರಲು ಆರ್ಥಿಕ , ಸಾಮಾಜಿಕ ಸಮಾನತೆ ಬೇಕು. ಸಮಾಜದ ಮೌಢ್ಯಗಳನ್ನು ಅಳಿಸುವ ಕಾರ್ಯದಲ್ಲಿ ಸ್ವಾಮೀಜಿಯವರು ತೊಡಗಿದ್ದರು.

ಜನರ ಆರ್ಶೀವಾದದಿಂದ 8 ಬಾರಿ ಗೆದ್ದು, ಎರಡನೇ ಬಾರಿ ಮುಖ್ಯಮಂತ್ರಿಯಾಗಿದ್ದೇನೆ. ನಾಡಿನ ಎಲ್ಲ ಜನರ ಪ್ರೀತಿಯಿಂದಲೇ ರಾಜಕೀಯದಲ್ಲಿಯೂ ಇಂದಿಗೂ ಬದುಕಿದ್ದೇನೆ. ಈ ಸಮಾಜದ ಪ್ರೀತಿಗೆ ಬೆಲೆಕಟ್ಟಲಾಗದು. ಧ್ವನಿಯಿಲ್ಲದವರ ಪರವಾಗಿ ಹೋರಾಡುವುದೇ ನನ್ನ ಪ್ರಥಮ ಕೆಲಸ.

ಇಡೀ ರಾಜ್ಯಕ್ಕೆ ಕನಕಗುರುಪೀಠ ಜಾತ್ಯಾತೀತ ಪೀಠವಾಗಿ ಕೆಲಸ ಮಾಡುತ್ತಿದೆ. ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ವಸತಿ ನಿಲಯ, ಯಾತ್ರಿನಿವಾಸ ಸೇರಿದಂತೆ ಹಲವು ಬೇಡಿಕೆಗಳಿಗೆ ಅನುದಾನ ನೀಡಲಾಗುವುದು. ಎಲ್ಲ ದಲಿತ ಹಾಗೂ ಹಿಂದುಳಿದ ವರ್ಗಗಳ ಮಠಗಳಿಗೆ ಬೆಂಗಳೂರಿನಲ್ಲಿ ಸುಮಾರು 50 ಎಕರೆ ಪ್ರದೇಶವನ್ನು ನೀಡಲು ಇತ್ತೀಚೆಗೆ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಕುರುಬ ಸಮುದಾಯಕ್ಕೆ ಎಸ್ ಟಿ ಗೆ ಸೇರಿಸುವ ನಿರ್ಧಾರವನ್ನು ಕೇಂದ್ರ ಸರ್ಕಾರ ಕೈಗೊಳ್ಳಲಿದ್ದು, ರಾಜ್ಯ ಸರ್ಕಾರ ಈಗಾಗಲೇ ತನ್ನ ಶಿಫಾರಸ್ಸನ್ನು ಕೇಂದ್ರಕ್ಕೆ ಸಲ್ಲಿಸಿದೆ. ಜಾತಿಗಣತಿ ವರದಿ ಇನ್ನೊಂದು ತಿಂಗಳ ಅವಧಿಯಲ್ಲಿ ಸಲ್ಲಿಕೆಯಾಗಲಿದ್ದು, ಸೂಕ್ತ ಚರ್ಚೆಯ ನಂತರ ಅಂಗೀಕರಿಸಿ ಜಾರಿಗೊಳಿಸಲಾಗುವುದು.

ರಾಜ್ಯದಲ್ಲಿ ಕನಕಗುರುಪೀಠ ಜಾತ್ಯಾತೀತ ಪೀಠವಾಗಿ ಕೆಲಸ ಮಾಡುತ್ತಿದ್ದು, ಗುರುಪೀಠದಲ್ಲಿ ಪೂಜ್ಯ ಶ್ರೀ ಸಿದ್ದರಾಮಾನಂದಪುರಿ ಸ್ವಾಮೀಜಿಯವರು ಶಿಕ್ಷಣ, ಆಧ್ಯಾತ್ಮ ಮತ್ತು ಜಾತ್ಯತೀತ ಮನೋಭಾವಕ್ಕೆ ಹೆಚ್ಚು ಒತ್ತು ನೀಡಿದ್ದರು.

ಕುರುಬ ಸಮುದಾಯಕ್ಕೆ ಮೊದಲ ಬಾರಿಗೆ ಕಾಗಿನೆಲೆ ಗುರುಪೀಠ 1992 ರಲ್ಲಿ ಸ್ಥಾಪಿತವಾಗಿ, ಶ್ರೀ ತಾರಕಾನಂದ ಸ್ವಾಮೀಜಿಯವರು… pic.twitter.com/VYjAsXIEdP

— Siddaramaiah (@siddaramaiah) February 1, 2026

'Caste Census Report' to be released in another month: CM Siddaramaiah announces
Share. Facebook Twitter LinkedIn WhatsApp Email

Related Posts

ಪತ್ರಕರ್ತರ ಜೊತೆ ವಿಧಾನಸೌಧ ಗಾರ್ಡನ್ ನಲ್ಲಿ ಊಟ ಸವಿದ ಸಚಿವ ಸಂತೋಷ್ ಲಾಡ್!

13/03/2026 7:45 PM1 Min Read

ಮಕ್ಕಳ ಅಪರಾಧಗಳ ಬಗ್ಗೆ ಅರಿವು ಮೂಡಿಸಿ-ಶಿಕ್ಷಣ ನೀಡುವುದು ನಮ್ಮ ಕರ್ತವ್ಯ: ಶಿವಮೊಗ್ಗ ಡಿಸಿ ಪ್ರಭುಲಿಂಗ ಕವಳಿಕಟ್ಟಿ

13/03/2026 7:41 PM3 Mins Read

ರಾಜಕೀಯವಾಗಿ ಸೋಲುಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ: ಸಿಎಂ ಸಿದ್ದರಾಮಯ್ಯ

13/03/2026 6:23 PM1 Min Read
Recent News

ಕೇಂದ್ರದಿಂದ ಹೊಸ ‘ವಿಕಸಿತ ಭಾರತ – ಜಿ ರಾಮ್ ಜಿ’ ಕಾಯ್ದೆ ಜಾರಿ: ಗ್ರಾಮೀಣ ಜನತೆಗೆ 125 ದಿನಗಳ ಉದ್ಯೋಗ ಖಾತರಿ

13/03/2026 8:46 PM

LPG Cylinder Booking : ಈ ಅಪ್ಲಿಕೇಶನ್’ಗಳು ನಿಮ್ಮ ಗ್ಯಾಸ್ ಸಿಲಿಂಡರ್ ತ್ವರಿತವಾಗಿ ಬುಕ್ ಮಾಡಲು ಸಹಾಯ ಮಾಡುತ್ವೆ! ಹೇಗೆ ಗೊತ್ತಾ?

13/03/2026 8:40 PM

ಪತ್ರಕರ್ತರ ಜೊತೆ ವಿಧಾನಸೌಧ ಗಾರ್ಡನ್ ನಲ್ಲಿ ಊಟ ಸವಿದ ಸಚಿವ ಸಂತೋಷ್ ಲಾಡ್!

13/03/2026 7:45 PM

ಮಕ್ಕಳ ಅಪರಾಧಗಳ ಬಗ್ಗೆ ಅರಿವು ಮೂಡಿಸಿ-ಶಿಕ್ಷಣ ನೀಡುವುದು ನಮ್ಮ ಕರ್ತವ್ಯ: ಶಿವಮೊಗ್ಗ ಡಿಸಿ ಪ್ರಭುಲಿಂಗ ಕವಳಿಕಟ್ಟಿ

13/03/2026 7:41 PM
State News
KARNATAKA

ಪತ್ರಕರ್ತರ ಜೊತೆ ವಿಧಾನಸೌಧ ಗಾರ್ಡನ್ ನಲ್ಲಿ ಊಟ ಸವಿದ ಸಚಿವ ಸಂತೋಷ್ ಲಾಡ್!

By kannadanewsnow0913/03/2026 7:45 PM KARNATAKA 1 Min Read

ಬೆಂಗಳೂರು : ವಿಧಾನಸೌಧದ ಎದುರಿಗಿರೋ ಗಾರ್ಡನ್ ‌ನಲ್ಲಿ ಇವತ್ತು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಎಸ್‌…

ಮಕ್ಕಳ ಅಪರಾಧಗಳ ಬಗ್ಗೆ ಅರಿವು ಮೂಡಿಸಿ-ಶಿಕ್ಷಣ ನೀಡುವುದು ನಮ್ಮ ಕರ್ತವ್ಯ: ಶಿವಮೊಗ್ಗ ಡಿಸಿ ಪ್ರಭುಲಿಂಗ ಕವಳಿಕಟ್ಟಿ

13/03/2026 7:41 PM

ರಾಜಕೀಯವಾಗಿ ಸೋಲುಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ: ಸಿಎಂ ಸಿದ್ದರಾಮಯ್ಯ

13/03/2026 6:23 PM

ಗುರುವಾರ ರಾಯರ ಅನುಗ್ರಹ ಪಡೆಯಲು ಈ ರಾಘವೇಂದ್ರ ಅಷ್ಟಾಕ್ಷರ ಸ್ತೋತ್ರ ತಪ್ಪದೇ ಪಠಿಸಿ

13/03/2026 5:46 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.