ಬೆಂಗಳೂರು: ತೀವ್ರ ಕುತೂಹಲ ಮೂಡಿಸಿದ್ದಂತ ಜಾತಿಗಣತಿ ವರದಿಯನ್ನು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದಂತ ಜಯಪ್ರಕಾಶ್ ಹೆಗಡೆಯವರು ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಸಲ್ಲಿಸಲಿದ್ದಾರೆ.
ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಅವರು ಇಂದು ಜಾತಿಗಣತಿ ವರದಿಯನ್ನು ಸಲ್ಲಿಸೋದಕ್ಕೆ ಕೊನೆಯ ದಿನವಾಗಿದೆ. ಈ ಹಿನ್ನಲೆಯಲ್ಲಿ ಸಿಎಂ ಸಿದ್ಧರಾಮಯ್ಯ ಅವರಿಗೆ ಇಂದು ಜಾತಿಗಣತಿ ವರದಿಯನ್ನು ಸಲ್ಲಿಸಲಾಗುತ್ತದೆ ಎಂಬುದಾಗಿ ತಿಳಿಸಿದ್ದಾರೆ.
ಲೋಕಸಭಾ ಚುನಾವಣೆಗೆ ಮುನ್ನವೇ ರಾಜ್ಯದಲ್ಲಿ ಜಾತಿಗಣತಿ ವರದಿ ಪ್ರಕರಗೊಳ್ಳುವ ಸಾಧ್ಯತೆ ಇದೆ. ಜಾತಿ ಗಣತಿಯ ವರದಿಯ ಆಧಾರದ ಮೇಲೆ ಲೋಕಸಭಾ ಚುನಾವಣೆಯನ್ನು ಎದುರಿಸೋದಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿದೆ ಎನ್ನಲಾಗುತ್ತಿದೆ.