ನವದೆಹಲಿ: ಜಾತಿಗಣತಿ ಸಮೀಕ್ಷೆ ನಡೆದು 9, 10 ವರ್ಷವಾಗಿದೆ. ಹೀಗಾಗಿ ಕೆಲವರು ಅಪಸ್ವರ ಎತ್ತಿದ್ದಾರೆ. ಈ ಹಿನ್ನಲೆಯಲ್ಲಿ ಕರ್ನಾಟಕದಲ್ಲಿ ಮತ್ತೊಮ್ಮೆ ಜಾತಿಗಣತಿ ಸಮೀಕ್ಷೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಿಸಿದ್ದಾರೆ.
ಇಂದು ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರಾಜ್ಯದಲ್ಲಿನ ಬೆಳವಣಿಗೆ ಬಗ್ಗೆ ರಾಹುಲ್ ಗಾಂಧಿ ಜೊತೆಗೆ ಚರ್ಚೆ ಮಾಡಲಾಯಿತು. ಮುಖ್ಯವಾಗಿ ಜಾತಿಗಣತಿ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಿದರು ಎಂದರು.
ಕೆಲವರು ವರದಿಗೆ ಅಪಸ್ವರ ಎತ್ತಿರುವ ಬಗ್ಗೆ ಚರ್ಚೆಯಾಯಿತು. ಜಾತಿಗಣತಿ ಸಮೀಕ್ಷೆ ಮಾಡಿ 9 ರಿಂದ 10 ವರ್ಷ ಆಗಿದೆ. ಹಾಗಾಗಿ ಮತ್ತೊಮ್ಮೆ ಮಾಡಲು ರಾಹುಲ್ ಗಾಂಧಿ ಹೇಳಿದ್ದಾರೆ. ಮತ್ತೊಮ್ಮೆ ಜಾತಿಗಣತಿ ಸಮೀಕ್ಷೆಗೆ ನಾವು ಒಪ್ಪಿಗೆ ನೀಡಿದ್ದೇವೆ. 90 ದಿನದೊಳಗೆ ಜಾತಿಗಣತಿ ಸಮೀಕ್ಷೆ ಮುಗಿಯಲಿದೆ ಎಂದರು.
BREAKING: ಕರ್ನಾಟಕ ವಿಧಾನ ಪರಿಷತ್ತಿನ ಮಾಜಿ ಸಭಾಪತಿ ಡೇವಿಡ್ ಸಿಮಿಯೋನ್ ನಿಧನ
BIG NEWS : ರಾಯಚೂರಲ್ಲಿ ಓರ್ವ ಬಾಲಕ ಸೇರಿ 15 ಜನರ ಮೇಲೆ ಬೀದಿ ನಾಯಿಗಳ ದಾಳಿ : 8 ಜನ ಆಸ್ಪತ್ರೆಗೆ ದಾಖಲು