ಬೆಂಗಳೂರು : ಸೆಪ್ಟೆಂಬರ್ 22ರಂದು ರಾಜ್ಯದಲ್ಲಿ ಜಾತಿ ಗಣತಿ ಸಮೀಕ್ಷೆ ನಡೆಯಲಿದ್ದು ಈ ವಿಚಾರವಾಗಿ ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಂಪುಟ ಸಭೆ ನಡೆಯಿತು. ಅಲ್ಲದೇ ಕುರುಬ ಸಮುದಾಯವನ್ನು ಎಸ್ ಟಿ ಪಟ್ಟಿಗೆ ಸೇರಿಸುವ ಕುರಿತು ಕೆಲ ಸಚಿವರು ಟೇಬಲ್ ಕುಟ್ಟಿ ಆಕ್ರೋಶ ಹೊರಹಾಕಿದ್ದಾರೆ ಸಚಿವರ ಈ ಒಂದು ನಡೆಗೆ ಸಿಎಂ ಸಿದ್ದರಾಮಯ್ಯ ಸಿಡಿಮಿಡಿಗೊಂಡಿದ್ದಾರೆ.
ಹೌದು ಜಾತಿ ಗಣತಿ ಸಮೀಕ್ಷೆ ಮುಂದೂಡುವ ವಿಚಾರವಾಗಿ ಇಂದು ಸಚಿವರ ಜೊತೆಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಂಪುಟ ಸಭೆ ನಡೆಯಿತು. ಸಿದ್ದರಾಮಯ್ಯ ಮಾತಿಗೂ ಕೂಡ ಅವಕಾಶ ನೀಡಿದಂತೆ ಸಚಿವರು ಆಕ್ರೋಶ ಹೊರ ಹಾಕಿದ್ದಾರೆ. ಜಾತಿ ಗಣತಿ ಗೊಂದಲದ ಕುರಿತು ಸಚಿವರು ಟೇಬಲ್ ಕುಟ್ಟಿ ಆಕ್ರೋಶ ಹೊರ ಹಾಕಿದ್ದಾರೆ. ಸಚಿವರ ಆಕ್ರೋಶಕ್ಕೆ ಸಿಎಂ ಸಿದ್ದರಾಮಯ್ಯ ತಮ್ಮ ಸೀಟ್ ನಿಂದ ಗೆದ್ದು ಅತ್ತಿತ್ತ ಓಡಾಡಿದ್ದಾರೆ. ಸಂಪುಟ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಎಂದೂ ಕೂಡ ಹೀಗೆ ಅದು ಓಡಾಡಿರಲಿಲ್ಲ.
ಸಚಿವರ ಆಕ್ರೋಶದ ಅರಿವಾಗುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಸಿಡಿಮಿಡಿಗೊಂಡಿದ್ದಾರೆ. ಎಸ್ ಟಿ ಪಟ್ಟಿಗೆ ಕುರುಬ ಸೇರ್ಪಡೆ ಬಗ್ಗೆಯೂ ಸಚಿವರು ಅಕ್ಷತೆ ಇಂತಹ ಸೂಕ್ಷ್ಮ ಸಂದರ್ಭದಲ್ಲಿ ಈ ನಿರ್ಣಯ ಬೇಕೆರಲಿಲ್ಲ ಎಂದು ಎಸ್ ಟಿ ಸಚಿವರು ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೆ ಕ್ರಿಶ್ಚಿಯನ್ ಜಾತಿಗಳ ಬಗ್ಗೆಯೇ ಕೆಲ ಸಚಿವರು ತೀವ್ರ ಆಕ್ಷೇಪ ಹೊರಹಾಕಿದ್ದಾರೆ, ಕ್ರಿಶ್ಚಿಯನ್ ಜೊತೆಗೆ ಹಿಂದೂ ಜಾತಿಗಳ ಸಮೀಕರಣದಿಂದ ತಮ್ಮ ಅಸ್ತಿತ್ವ ಏನು ಉಳಿಯುತ್ತದೆ ಎಂದು ಸಚಿವರು ಪ್ರಶ್ನಿಸಿದ್ದಾರೆ.