ರಾಜ್ಯದಲ್ಲಿ ಮತ್ತೊಮ್ಮೆ ಜಾತಿಗಣತಿ ಸಮೀಕ್ಷೆ: ಆನ್ ಲೈನ್ ಮೂಲಕವೂ ಮಾಹಿತಿ ದಾಖಲಿಗೆ ಅವಕಾಶ- ಡಿಸಿಎಂ DKS

ನವದೆಹಲಿ: “ಜಾತಿ ಗಣತಿ ವಿಚಾರವಾಗಿ ಎದ್ದಿರುವ ಅಪಸ್ವರ, ಸಮುದಾಯಗಳ ಅಂಕಿಅಂಶಗಳ ಬಗ್ಗೆ ಇರುವ ಗೊಂದಲ ನಿವಾರಣೆಗೆ ತೀರ್ಮಾನಿಸಲಾಗಿದೆ. ಮನೆ ಮನೆ ಸಮೀಕ್ಷೆ ಹಾಗೂ ಆನ್ಲೈನ್ ಮೂಲಕ ಎಲ್ಲರೂ ತಮ್ಮ ಮಾಹಿತಿಯನ್ನು ಮತ್ತೊಮ್ಮೆ ಸಲ್ಲಿಸಲು ಅವಕಾಶ ನೀಡಲಾಗುವುದು. ಈ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ನಡೆಸಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ನವದೆಹಲಿಯಲ್ಲಿ ಎಐಸಿಸಿ ನಾಯಕರ ಸಭೆ ಬಳಿಕ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಶಿವಕುಮಾರ್ ಅವರು ಮಾಧ್ಯಮಗಳ ಜತೆ ಮಂಗಳವಾರ ಮಾತನಾಡಿದರು. “ಮಂಗಳವಾರದಂದು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ … Continue reading ರಾಜ್ಯದಲ್ಲಿ ಮತ್ತೊಮ್ಮೆ ಜಾತಿಗಣತಿ ಸಮೀಕ್ಷೆ: ಆನ್ ಲೈನ್ ಮೂಲಕವೂ ಮಾಹಿತಿ ದಾಖಲಿಗೆ ಅವಕಾಶ- ಡಿಸಿಎಂ DKS