*ಅವಿನಾಶ್ ಆರ್ ಭೀಮಸಂದ್ರ
ಬೆಂಗಳೂರು: ಕರ್ನಾಟಕ ರಾಜ್ಯದ, ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಸಬ್-ಇನ್ಸ್ಪೆಕ್ಟರ್ (ಸಿವಿಲ್) (ಪುರುಷ ಮತ್ತು ಮಹಿಳಾ) ಹಾಗೂ ಸೇವೆಯಲ್ಲಿರುವವರು ಒಳಗೊಂಡAತೆ ಹುದ್ದೆಗಳ ನೇರ ನೇಮಕಾತಿಗಾಗಿ ಕರ್ನಾಟಕ ರಾಜ್ಯ ಪೊಲೀಸ್ ಲಿಪಿಕ ನೌಕರರ ಸೇವೆಗಳು ಸೇರಿದಂತೆ (ನೇಮಕಾತಿ) ನಿಯಮ 2004 ಮತ್ತು ಅದರ (ತಿದ್ದುಪಡಿ) ನಿಯಮ, 2009, ಕರ್ನಾಟಕ ರಾಜ್ಯ ಪೊಲೀಸ್ ಲಿಪಿಕ ಸೇವೆಗಳನ್ನು ಒಳಗೊಂಡ (ನೇಮಕಾತಿ) (ತಿದ್ದುಪಡಿ) ನಿಯಮಗಳು 2014, 2016 ಮತ್ತು 2020, ಕರ್ನಾಟಕ ಸಾರ್ವಜನಿಕ ಉದ್ಯೋಗ (ಕಲ್ಯಾಣ-ಕರ್ನಾಟಕ ಪ್ರದೇಶಕ್ಕೆ ನೇಮಕಾತಿಯಲ್ಲಿ ಮೀಸಲಾತಿ) ಆದೇಶ, 2013, ಕರ್ನಾಟಕ ಸಾರ್ವಜನಿಕ ಉದ್ಯೋಗ (ಕಲ್ಯಾಣ-ಕರ್ನಾಟಕ ಪ್ರದೇಶಕ್ಕೆ ನೇಮಕಾತಿಯಲ್ಲಿ ಮೀಸಲಾತಿ) (ಅರ್ಹತಾ ಪ್ರಮಾಣ ಪತ್ರಗಳ ನೀಡಿಕೆ)
ನಿಯಮಗಳು, 2013 ಹಾಗೂ ಕರ್ನಾಟಕ ಸರ್ಕಾರದ ಸುತ್ತೋಲೆ ಸಂಖ್ಯೆ:ಸಿಆಸುಇ 3 ಹೈಕಕೋ 2018, ದಿನಾಂಕ:06.06.2020,
ಮತ್ತು ಕರ್ನಾಟಕ ನಾಗರಿಕ ಸೇವೆಗಳು (ಸಾಮಾನ್ಯ ನೇಮಕಾತಿ) ನಿಯಮಾವಳಿ 1977 ಹಾಗೂ ಮೇಲೆ ತಿಳಿಯಪಡಿಸಿದ ನಿಯಮಗಳಿಗೆ ಕಾಲಕಾಲಕ್ಕೆ ಆಗುವ ತಿದ್ದುಪಡಿಗಳ ಅನುಸಾರ ಈ ಅಧಿಸೂಚನೆಯನ್ನು ಪ್ರಕಟಿಸುತ್ತ ಅರ್ಹ ಅಭ್ಯರ್ಥಿಗಳಿಂದ ಆನ್-
ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅಂದ ಹಾಗೇ ಅರ್ಜಿಗಳನ್ನು ಇಲಾಖೆಯ ಅಧಿಕೃತ ವೆಬ್ಸೈಟ್ https://recruitment.ksp.gov.in ನಲ್ಲಿ ಆನ್-ಲೈನ್ (On-line)) (ಎಲೆಕ್ಟಾçನಿಕ್ ಮಾರ್ಗ) ಮುಖಾಂತರ ಮಾತ್ರ ಸಲ್ಲಿಸತಕ್ಕದ್ದು, ಅರ್ಜಿಗಳನ್ನು ಖುದ್ದಾಗಿ ಅಥವಾ ಅಂಚೆ ಮೂಲಕಪ್ರತ್ಯೇಕವಾಗಿ ಸಲ್ಲಿಸಲು ಅವಕಾಶವಿರುವುದಿಲ್ಲ.
ಬಿ) ಒಂದು ವೇಳೆ ಕಲ್ಯಾಣ ಕರ್ನಾಟಕ ಪ್ರದೇಶದ ಸ್ಥಳೀಯ ಅಭ್ಯರ್ಥಿಯು ಪ್ರಸ್ತುತ ನೇಮಕಾತಿಗೆ ಸಂಬಂಧಿಸದಂತೆ ಮಿಕ್ಕುಳಿದ (ಪರಸ್ಥಳೀಯ) ವೃಂದದ ಹುದ್ದೆಯನ್ನು ಆಯ್ಕೆ ಮಾಡಿಕೊಂಡು ನೇಮಕಾತಿ ಹೊಂದಿದಲ್ಲಿ ಅಂತಹ ಅಭ್ಯರ್ಥಿಯು ಜಾರಿಯಲ್ಲಿರುವ ನಿಯಮದಂತೆ ತನ್ನ ಸೇವಾ ಅವಧಿಯಲ್ಲಿ ಅನುಚ್ಛೇದ 371ಜೆ ಮೀಸಲಾತಿ ಸೌಲಭ್ಯಗಳನ್ನು ಪಡೆಯಲು ಅವಕಾಶವಿರುವುದಿಲ್ಲ ಎಂಬುದನ್ನು ಸ್ಪಷ್ಠೀಕರಿಸಲಾಗಿದೆ.
ಸಿ) ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕವು ಮುಕ್ತಾಯವಾದ ನಂತರ 10 ದಿನಗಳ ಕಾಲಾವಕಾಶ ನೀಡಲಾಗುತ್ತಿದ್ದು, ಸದರಿ ದಿನಾಂಕದೊಳಗಾಗಿ ಅಭ್ಯರ್ಥಿಯು ತಾನು ಸಲ್ಲಿಸಿರುವ ಅರ್ಜಿಯಲ್ಲಿ ಹೆಸರು, ಜನ್ಮ ದಿನಾಂಕ, ಕೋರಿರುವ ಮೀಸಲಾತಿ ಹಾಗೂ ಇತರೆ ಯಾವುದೇ ಅಂಶಗಳ ಬದಲಾವಣೆ ಮಾಡಬೇಕಾದಲ್ಲಿ ಖುದ್ದಾಗಿ / ಅಂಚೆ ಮೂಲಕ ಸಂಬಂಧಪಟ್ಟಂ ದೃಢೀಕೃತ ದಾಖಲೆಗಳೊಂದಿಗೆ ಅಡಿಷನಲ್ ಡೈರೆಕ್ಟರ್ ಜನರಲ್ ಆಫ್ ಪೊಲೀಸ್, ನೇಮಕಾತಿ ಕಾರ್ಲಟನ್ ಭವನ, ಅರಮನೆ ರಸ್ತೆ, ಬೆಂಗಳೂರು ರವರ ಕಛೇರಿಗೆ ಸಲ್ಲಿಸತಕ್ಕದ್ದು. ನಿಗದಿಪಡಿಸಿದ ಕೊನೆಯ ದಿನಾಂಕದ ನಂತರ ಸಲ್ಲಿಸುವ ಯಾವುದೇ ಮನವಿಗಳನ್ನು
ಪರಿಗಣಿಸಲಾಗುವುದಿಲ್ಲ.
ಡಿ) ಪ್ರತಿಭಾನ್ವಿತ ಕ್ರೀಡಾಪಟುಗಳಿಗೆ ನೇರ ನೇಮಕಾತಿಗಳಲ್ಲಿ 2% ರಷ್ಟು ಹುದ್ದೆಗಳನ್ನು ಮೀಸಲಿರಿಸುವ ಸಂಬಂಧ ಕರಡು ವೃಂದ ಮತ್ತು ನೇಮಕಾತಿ ನಿಯಮಗಳನ್ನು ರಚಿಸಲಾಗಿರುತ್ತದೆ. ಆದ್ದರಿಂದ ಮಿಕ್ಕುಳಿದ ವೃಂದದ ಹುದ್ದೆಗಳಲ್ಲಿ 2% ರಂತೆ 08 ಹುದ್ದೆಗಳು ಹಾಗೂ ಕಲ್ಯಾಣ-ಕರ್ನಾಟಕ ಪ್ರದೇಶದ ಸ್ಥಳೀಯ ಹುದ್ದೆಗಳಲ್ಲಿ 01 ಹುದ್ದೆಯನ್ನು ಮೀಸಲಿರಿಸಲಾಗಿದ್ದು (ಅಂತಿಮ ವೃಂದ ಮತ್ತು ನೇಮಕಾತಿ ನಿಯಮಗಳನ್ನು ಹೊರಡಿಸುವ ಷರತ್ತಿಗೊಳಪಟ್ಟು), ಸದರಿ ಹುದ್ದೆಗಳ ನೇಮಕಾತಿ ಸಲುವಾಗಿ ಪ್ರತ್ಯೇಕವಾದ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗುವುದು.
ಶುಲ್ಕ: ಸಾಮಾನ್ಯ ವರ್ಗ, ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ ₹ . 500/- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ ₹ . 250/- ನಿಗದಿ ಮಾಡಲಾಗಿದೆ.
ಎ) ನಿಗದಿತ ಶುಲ್ಕವನ್ನು ನಗದು / ಆನ್ಲೈನ್ ರೂಪದಲ್ಲಿ ಸ್ಥಳೀಯ ಅಂಚೆ ಕಛೇರಿಗಳಲ್ಲಿ ಅಥವಾ ಹೆಚ್.ಡಿ.ಎಫ್.ಸಿ ಬ್ಯಾಂಕಿನ ಅಧಿಕೃತ ಶಾಖೆಗಳಲ್ಲಿ ಪಾವತಿಸಿ ನಂತರ ಚಲನ್ನ ‘ಅಭ್ಯರ್ಥಿ ಪ್ರತಿ’ಯನ್ನು ಇಟ್ಟುಕೊಂಡಿರತಕ್ಕದ್ದು. ಬಿ) ಇಲಾಖೆಯ ಅಧಿಕೃತ ವೆಬ್ಸೈಟ್ https://recruitment.ksp.gov.inನಲ್ಲಿ ನೀಡಲಾಗಿರುವ ಸೂಚನೆಗಳನ್ನು ಓದಿಕೊಂಡು ಯಾವುದೇ ತಪ್ಪು ಮಾಹಿತಿ ನೀಡದೆ ಆನ್-ಲೈನ್ನಲ್ಲಿ ಲಭ್ಯವಿರುವ ಅರ್ಜಿಯನ್ನು ಭರ್ತಿ ಮಾಡತಕ್ಕದ್ದು.
ಟಿಪ್ಪಣಿ: ಒಮ್ಮೆ ಶುಲ್ಕವನ್ನು ಪಾವತಿಸಿದ ನಂತರ ಅದನ್ನು ಯಾವುದೇ ಸಂದರ್ಭದಲ್ಲಿಯೂ ಹಿಂದಿರುಗಿಸಲಾಗುವುದಿಲ್ಲ ಅಥವಾ ಅದನ್ನು ನೇಮಕಾತಿ ಸಮಿತಿಯು ನಡೆಸುವ ಇತರೆ ಯಾವುದೇ ಪರೀಕ್ಷೆ ಅಥವಾ ನೇಮಕಾತಿಗಳಿಗೆ ಹೊಂದಿಸಿಕೊಳ್ಳಲಾಗುವುದಿಲ್ಲ. ಮೇಲಿನ ಕಾಲಂಗಳಲ್ಲಿ ನಮೂದಿಸಿದಂತೆ ಅಭ್ಯರ್ಥಿಗೆ ಅನ್ವಯಿಸುವ ಒಟ್ಟು ಪರೀಕ್ಷಾ ಶುಲ್ಕವನ್ನು ಆನ್ಲೈನ್ / ನಗದು ರೂಪದಲ್ಲಿ ಚಲನ್ ನೊಂದಿಗೆ ಮಾತ್ರ ಮೇಲೆ ನಮೂದಿಸಿರುವ ಬ್ಯಾಂಕ್ಗಳಲ್ಲಿ ಮತ್ತು ಅಂಚೆ ಕಛೇರಿಗಳಲ್ಲಿ ಪಾವತಿಸತಕ್ಕದ್ದು. ಡಿಡಿ, ಪೋಸ್ಟಲ್ ಆರ್ಡರ್, ಮನಿ ಆರ್ಡರ್ ಇವುಗಳನ್ನು ಸ್ವೀಕರಿಸಲಾಗುವುದಿಲ್ಲ.
ಆನ್-ಲೈನ್ ( (On-line)) ಮುಖಾಂತರ ಅರ್ಜಿ ಸಲ್ಲಿಸುವ ಹಾಗೂ ಶುಲ್ಕ ಪಾವತಿಸುವ ವಿಧಾನ: ಅರ್ಜಿದಾರ ಅರ್ಜಿಯನ್ನು ಭರ್ತಿ ಮಾಡುವ ಮುನ್ನ ಇಲಾಖೆಯ ಅಧಿಕೃತ ವೆಬ್ಸೈಟ್ https://recruitment.ksp.gov.in ನಲ್ಲಿ ನೀಡಲಾಗಿರುವ ಮಾಹಿತಿಸೂಚಿ / ಸೂಚನೆಗಳನ್ನು ಜಾಗರೂಕತೆಯಿಂದ ಓದಿಕೊಂಡು ಭರ್ತಿ ಮಾಡಬೇಕು. ಇಲಾಖೆಯ ಅಧಿಕೃತ ವೆಬ್ಸೈಟ್ https://recruitment.ksp.gov.in ನಲ್ಲಿ ನೀಡಲಾಗಿರುವ ಅಧಿಸೂಚನೆಯನ್ನು ಓದಿಕೊಂಡು ಯಾವುದೇ ತಪ್ಪು ಮಾಹಿತಿಯನ್ನು ನೀಡದೇ ಆನ್-ಲೈನ್ನಲ್ಲಿ ಲಭ್ಯವಿರುವ ಅರ್ಜಿಯನ್ನು ಭರ್ತಿ ಮಾಡತಕ್ಕದ್ದು. ತಪ್ಪು ಮಾಹಿತಿಗಳನ್ನು ನೀಡಿ ಅರ್ಜಿ ಸಲ್ಲಿಸಿದ್ದಲ್ಲಿ ಅಂತಹವರ ವಿರುದ್ಧ ಕಾನೂನಿನನ್ವಯ ನೇಮಕಾತಿ ಸಮಿತಿಯು ಸೂಕ್ತ ಕ್ರಮ ಕೈಗೊಳ್ಳುವುದು.ಅರ್ಜಿಯನ್ನು ಭರ್ತಿ ಮಾಡುವ ಮುನ್ನ ಅರ್ಜಿದಾರ ಒಂದು ಬಿಳಿ ಹಾಳೆಯ ಮೇಲೆ ಪಾಸ್ಪೋರ್ಟ್ ಅಳತೆಯ ಬಣ್ಣದ ಭಾವಚಿತ್ರ, ಸಹಿ ಮತ್ತು ಅಧಿಸೂಚನೆಯ ಕ್ರಮ ಸಂಖ್ಯೆ 8(ಸಿ)ರಲ್ಲಿ ನಮೂದಿಸಲಾಗಿರುವ ಯಾವುದಾದರು ಗುರುತಿನ ಚೀಟಿಯನ್ನು ಪ್ರತ್ಯೇಕವಾಗಿ (Soft Copy – less than 250 KB) ಸ್ಕ್ಯಾನ್ ಮಾಡಿಟ್ಟುಕೊಂಡಿರಬೇಕು. ನಂತರ ಅರ್ಜಿದಾರನ ಹೆಸರು, ಜಾತಿ, ಪ್ರವರ್ಗ, ಮೀಸಲಾತಿಗಳ ವಿವರ, ಹುಟ್ಟಿದ ದಿನಾಂಕ, ವಿದ್ಯಾರ್ಹತೆ ಮತ್ತು ಇತ್ಯಾದಿ ವಿವರಗಳನ್ನು ಭರ್ತಿ ಮಾಡಿ ಕೊನೆಯದಾಗಿ ಸ್ಕಾö್ಯನ್ ಮಾಡಿಟ್ಟುಕೊಂಡಿರುವ ಭಾವಚಿತ್ರ, ಸಹಿ ಮತ್ತು ಗುರುತಿನ ಚೀಟಿಯನ್ನು ಕಂಪ್ಯೂಟರ್ ಮುಖೇನ ಅಪ್ಲೋಡ್ (Upload) ಮಾಡಬೇಕು. ಇಲ್ಲವಾದಲ್ಲಿ ಅಂತಹ ಅರ್ಜಿದಾರರು ಆನ್ಲೈನ್ನಲ್ಲಿ ಅರ್ಜಿಯನ್ನು ತುಂಬಿ ಮುಂದುವರೆಯಲು ಸಾಧ್ಯವಾಗುವುದಿಲ್ಲ. ಅರ್ಜಿದಾರ ನೀಡಿರುವ ವಿವರಗಳು ಎಲ್ಲಾ ರೀತಿಯಿಂದಲೂ ಸಮರ್ಪಕವಾಗಿದ್ದಲ್ಲಿ ಮಾತ್ರ ಚಲನ್ ಮುದ್ರಿಸಬಹುದು. ಚಲನ್ ಮುದ್ರಿಸಲು ಜನರೇಟ್ ಚಲನ್ ಬಟನ್ ಮೇಲೆ ಕ್ಲಿಕ್ ಮಾಡಿದಾಗ ತ್ರಿಪ್ರತಿ (Triplicate)) ಬ್ಯಾಂಕ್ ಚಲನ್ ಸೃಜನೆಯಾಗುತ್ತದೆ. ಆ ಚಲನ್ನಲ್ಲಿ ಅರ್ಜಿಯ ಸಂಖ್ಯೆಯೊಂದಿಗೆ ಆಯ್ಕೆ ಮಾಡಿರುವ ಘಟಕ, ನಿಮ್ಮ ಭಾವಚಿತ್ರ, ಪ್ರವರ್ಗ, ಮೀಸಲಾತಿಗಳ ವಿವರ ಮತ್ತು ಪಾವತಿಸಬೇಕಾಗಿರುವ ನಿಗದಿತ ಶುಲ್ಕಗಳ ವಿವರಗಳು ಇರುತ್ತವೆ. ಆ ಚಲನ್ ಪ್ರತಿಯನ್ನು ಮುದ್ರಿಸಿ/ಪ್ರಿಂಟ್ ಮಾಡಿಕೊಳ್ಳತಕ್ಕದ್ದು. ನಂತರ ಅರ್ಜಿದಾರ ಮುದ್ರಿಸಿಕೊಳ್ಳಲಾದ ಚಲನ್ನಲ್ಲಿ ನಮೂದಾಗಿರುವ ಒಟ್ಟು ಶುಲ್ಕವನ್ನು ಸ್ಥಳೀಯ ಅಂಚೆ ಕಛೇರಿಗಳಲ್ಲಿ ಅಥವಾ ಹೆಚ್.ಡಿ.ಎಫ್.ಸಿ ಬ್ಯಾಂಕಿನ ಅಧಿಕೃತ ಶಾಖೆಗಳಲ್ಲಿ ಆನ್ಲೈನ್ / ನಗದು ರೂಪದಲ್ಲಿ ಪಾವತಿಸಿ ನಂತರ ಚಲನ್ನ ‘ಅಭ್ಯರ್ಥಿ ಪ್ರತಿ’ಯನ್ನು ಇಟ್ಟುಕೊಂಡಿರತಕ್ಕದ್ದು.
ಅಭ್ಯರ್ಥಿಯು ಶುಲ್ಕ ಪಾವತಿಸಿದ ಎರಡು ದಿನಗಳ ನಂತರ ಪುನಃ ಇಲಾಖೆಯ ಅಧಿಕೃತ ವೆಬ್ಸೈಟ್ https://recruitment.ksp.gov.in ಅನ್ನು ಕ್ಲಿಕ್ ಮಾಡಿ, ತಮ್ಮ ಅರ್ಜಿ ಸಂಖ್ಯೆ ಮತ್ತು ಜನ್ಮ ದಿನಾಂಕ ನಮೂದಿಸಿದ ನಂತರ ಅರ್ಜಿ ತೆರೆಯುತ್ತದೆ ಹಾಗೂ ಅಭ್ಯರ್ಥಿಯು ಭರ್ತಿ ಮಾಡಿರುವ ಎಲ್ಲಾ ವಿವರಗಳನ್ನು ಒಳಗೊಂಡAತೆ ಅರ್ಜಿಯು ಸೃಜನೆಯಾಗುತ್ತದೆ, ಸದರಿ ಅರ್ಜಿಯ ಪ್ರತಿಯನ್ನು ಪ್ರಿಂಟ್ ಮಾಡಿಟ್ಟುಕೊಳ್ಳತಕ್ಕದ್ದು. ಅರ್ಜಿ ಪ್ರತಿ ಮತ್ತು ಅರ್ಜಿ ಸಂಖ್ಯೆಯು ಮುಂದಿನ ನೇಮಕಾತಿ ಪ್ರಕ್ರಿಯೆಯ ಎಲ್ಲಾ ಹಂತಗಳಿಗೆ ಅವಶ್ಯಕವಾಗಿರುತ್ತದೆ.
ಪ್ರಮುಖ ದಿನಾಂಕಗಳ ಮಾಹಿತಿ:
· ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 01.04.2021 ಬೆಳಿಗ್ಗೆ 10.00 ಗಂಟೆಗೆ
· ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 03.05.2021 ಸಂಜೆ 06.00 ಗಂಟೆಗೆ
· ಶುಲ್ಕವನ್ನು ಅಧಿಕೃತ ಬ್ಯಾಂಕ್ ಅಥವಾ ಅಂಚೆ ಕಛೇರಿಗಳ ವೇಳೆಯಲ್ಲಿ ಪಾವತಿಸಲು ಕೊನೆಯ ದಿನಾಂಕ: 05.05.2021.
ಸೂಚನೆ:
· ಪೊಲೀಸ್ ಇಲಾಖೆಯ ಅಧಿಕೃತ ವೆಬ್ಸೈಟ್ನಲ್ಲಿ ನೀಡಲಾಗಿರುವ ಅರ್ಜಿಯನ್ನು ನಿಗದಿತ ದಿನಾಂಕದೊಳಗೆ ಭರ್ತಿ
ಮಾಡಿ ಸಲ್ಲಿಸಿರುವಂತ ಅರ್ಜಿಯನ್ನು ಮಾತ್ರ ಪರಿಗಣಿಸಲಾಗುವುದು.
· ತಪ್ಪು ಮಾಹಿತಿಗಳನ್ನು ನೀಡಿ ಅರ್ಜಿ ಸಲ್ಲಿಸಿದ್ದಲ್ಲಿ ಅಂತಹವರ ವಿರುದ್ಧ ಕಾನೂನಿನನ್ವಯ ನೇಮಕಾತಿ ಸಮಿತಿಯು ಸೂಕ್ತ
ಕ್ರಮ ಕೈಗೊಳ್ಳುವುದು.
· ಆನ್ಲೈನ್ ಮೂಲಕ ಅರ್ಜಿಯನ್ನು ಭರ್ತಿಮಾಡುವ ಸಂದರ್ಭದಲ್ಲಿ ಸಮಸ್ಯೆ ಎದುರಾದಲ್ಲಿ ಸಹಾಯವಾಣಿ ((Help line) 080-22943346 ಅನ್ನು ಸಂಪರ್ಕಿಸಿ ಅಗತ್ಯ ಮಾಹಿತಿ ಪಡೆದು ಅರ್ಜಿ ಸಲ್ಲಿಸಬಹುದು. ಹಾಗೂ ತಾಂತ್ರಿಕ ತೊಂದರೆ ಎದುರಾದಲ್ಲಿ ಅದನ್ನು ಅದನ್ನು ಸ್ಥಗಿತಗೊಳಿಸಿ ಮತ್ತೊಮ್ಮೆ ಅಧಿಕೃತ ವೆಬ್ಸೈಟ್ನಲ್ಲಿ ನೀಡಲಾಗಿರುವ ಅರ್ಜಿಯನ್ನು ಭರ್ತಿ ಮಾಡಲು ತಿಳಿಸಲಾಗಿದೆ.
ಟಿಪ್ಪಣಿ: ಈ ಕೆಳಗೆ ನಮೂದಿಸಿರುವ ಖಾಲಿ ಹುದ್ದೆಗಳ ಸಂಖ್ಯೆಯು ತಾತ್ಕಾಲಿಕವಾಗಿದ್ದು, ಅನಿವಾರ್ಯ ಸಂದರ್ಭದಲ್ಲಿ ಬದಲಾವಣೆಗೆ
ಒಳಪಟ್ಟಿರುತ್ತದೆ. ಪೊಲೀಸ್ ಸಬ್ಇನ್ಸ್ಪೆಕ್ಟರ್ (ಸಿವಿಲ್) (ಪುರುಷ ಮತ್ತು ಮಹಿಳಾ ಹಾಗೂ ಸೇವೆಯಲ್ಲಿರುವವರು) (ಮಿಕ್ಕುಳಿದ ವೃಂದದ) ಮತ್ತು ಕಲ್ಯಾಣ-ಕರ್ನಾಟಕ ಪ್ರದೇಶದ (ಸ್ಥಳೀಯ ವೃಂದದ) ಪೊಲೀಸ್ ಸಬ್ಇನ್ಸ್ಪೆಕ್ಟರ್ (ಸಿವಿಲ್) (ಪುರುಷ ಮತ್ತು ಮಹಿಳಾ ಹಾಗೂ ಸೇವೆಯಲ್ಲಿರುವವರು) ಖಾಲಿ ಹುದ್ದೆಗಳ ವಿವರ ಈ ಕೆಳಕಂಡತಿದೆ.

ಟಿಪ್ಪಣಿ:
1. ಮೇಲ್ಕಂಡ ಹುದ್ದೆಗಳಿಗೆ ಪೊಲೀಸ್ ಆಯುಕ್ತರ / ವಲಯ ಕಛೇರಿಗಳು ನೀಡಿರುವ ವರ್ಗೀಕರಣವನ್ನು ಅನುಬಂಧ-‘ಎ’ ನಲ್ಲಿ ಮತ್ತು ಕ್ರೂಢೀಕೃತ ವರ್ಗೀಕರಣವನ್ನು ಅನುಬಂಧ-‘ಬಿ’ನಲ್ಲಿ ಈ ಅಧಿಸೂಚನೆಯ ಕೊನೆಯಲ್ಲಿ ನೀಡಲಾಗಿರುತ್ತದೆ.
2. ಮೇಲ್ಕಂಡAತೆ ವರ್ಗೀಕರಣದಲ್ಲಿ ನಮೂದಿಸಲಾಗಿರುವ 8*+1*ಹುದ್ದೆಗಳನ್ನು ಪ್ರತಿಭಾನ್ವಿತ ಕ್ರೀಡಾಪಟುಗಳಿಗಾಗಿ ಮೀಸಲಿರಿಸಲಾಗಿದ್ದು, ಪ್ರಸ್ತುತ ವೃಂದ ಮತ್ತು ನೇಮಕಾತಿಯ ಅಂತಿಮ ನಿಯಮಗಳು ಪ್ರಕಟವಾಗಿರದ ಕಾರಣ ಸದರಿ ಹುದ್ದೆಗಳಿಗೆ ಪ್ರತ್ಯೇಕವಾದ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿ ನೇಮಕಾತಿ ಪ್ರಕ್ರಿಯೆಯನ್ನು ಕೈಗೊಳ್ಳಲಾಗುವುದು.
4. ಅರ್ಹತಾ ಷರತ್ತುಗಳು:
ಎ) ಭಾರತೀಯ ನಾಗರಿಕನಾಗಿರತಕ್ಕದ್ದು.
ಬಿ) ಒಬ್ಬ ಜೀವಂತ ಪತ್ನಿಗಿಂತ ಹೆಚ್ಚು ಮಂದಿ ಪತ್ನಿಯರನ್ನು ಹೊಂದಿರುವ ಪುರುಷ ಅಭ್ಯರ್ಥಿ ಮತ್ತು ಈಗಾಗಲೇ ಇನ್ನೊಬ್ಬ ಹೆಂಡತಿ ಇರುವ ವ್ಯಕ್ತಿಯನ್ನು ಮದುವೆಯಾಗಿರುವ, ಮಹಿಳಾ ಅಭ್ಯರ್ಥಿಯು ಸರ್ಕಾರದಿಂದ ಪೂರ್ವಾನುಮತಿಯನ್ನು ಪಡೆಯದೇ ನೇಮಕಾತಿಗೆ ಅರ್ಹರಾಗುವುದಿಲ್ಲ.
ಸಿ) ಅಭ್ಯರ್ಥಿಯು ಮಾನಸಿಕವಾಗಿ ಮತ್ತು ದೈಹಿಕವಾಗಿ ಆರೋಗ್ಯವಂತರಾಗಿರಬೇಕು ಮತ್ತು ಅವರ ನೇಮಕಾತಿಯ ಕರ್ತವ್ಯಗಳ ದಕ್ಷ ನಿರ್ವಹಣೆಗೆ ಆತಂಕವನ್ನು ಉಂಟು ಮಾಡುವ ಸಂಭವ ಇರುವ ಯಾವುದೇ ದೈಹಿಕ ನ್ಯೂನತೆಯಿಂದ ಮುಕ್ತರಾಗಿರಬೇಕು.
5. ವಯೋಮಿತಿ :
ಅರ್ಜಿಯನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದAದು ಅಂದರೆ 03.05.2021 ಕ್ಕೆ ಅಭ್ಯರ್ಥಿಗೆ
ಕನಿಷ್ಟ 21 ವರ್ಷ ವಯಸ್ಸಾಗಿರಬೇಕು. ಈ ಕೆಳಕಂಡ ಗರಿಷ್ಠ ವಯೋಮಿತಿಯನ್ನು ಮೀರಿರಬಾರದು.
ಎ) ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ 32 ವರ್ಷಗಳು.
ಬಿ) ಇತರೆ ಅಭ್ಯರ್ಥಿಗಳಿಗೆ 30 ವರ್ಷಗಳು.
ಸೇವಾನಿರತ ಅಭ್ಯರ್ಥಿಗಳಿಗೆ:
ಎ) ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ 40 ವರ್ಷಗಳು.
ಬಿ) ಇತರೆ ಅಭ್ಯರ್ಥಿಗಳಿಗೆ 35 ವರ್ಷಗಳು.
* ಸೇವಾನಿರತ ಅಭ್ಯರ್ಥಿ:
ಪೊಲೀಸ್ ಇಲಾಖೆಯ ಯಾವುದೇ ವೃಂದದಲ್ಲಿ ಸಹಾಯಕ ಪೊಲೀಸ್ ಸಬ್ಇನ್ಸ್ಪೆಕ್ಟರ್ / ಹೆಡ್ ಕಾನ್ಸ್ಟೇಬಲ್ / ಪೊಲೀಸ್ ಕಾನ್ಸ್ಟೇಬಲ್ ಆಗಿ ಕನಿಷ್ಟ 5 ವರ್ಷಗಳ ಸೇವೆಯನ್ನು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ಅಂದರೆ 03.05.2021ಕ್ಕೆ ಪೂರ್ಣಗೊಳಿಸಿರಬೇಕು ಹಾಗೂ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಪೊಲೀಸ್ ಇಲಾಖೆಯಲ್ಲಿನ ಮೇಲ್ಕಂಡ ವೃಂದಗಳಲ್ಲಿ ಸೇವೆ ಸಲ್ಲಿಸುತ್ತಿರಬೇಕು.
ವಿದ್ಯಾರ್ಹತೆ: ಯು.ಜಿ.ಸಿ. ಇಂದ ಮಾನ್ಯತೆ ಪಡೆದಿರುವ ಅಂಗೀಕೃತ ವಿಶ್ವವಿದ್ಯಾಲಯದಲ್ಲಿ ಪದವಿ ಅಥವಾ ತತ್ಸಮಾನ ಪದವಿಯನ್ನು ನಿಗದಿಪಡಿಸಿರುವ ಕೊನೆಯ ದಿನಾಂಕ,ಅಂದರೆ 03.05.2021ಕ್ಕೆ ಹೊಂದಿರಬೇಕು . ( ಮಾಜಿ ಸೈನಿಕ ಅಭ್ಯರ್ಥಿಗಳು ಸೈನ್ಯದಲ್ಲಿ ನೀಡಿದ ಪದವಿ ಪ್ರಮಾಣ ಪತ್ರವನ್ನು ದಿನಾಂಕ: 03.05.2021 ರೊಳಗೆ ಪಡೆದಿದ್ದರೆ ಅಂತಹ ಅಭ್ಯರ್ಥಿಗಳ ಅಭ್ಯರ್ಥಿತನವನ್ನು ಪರಿಗಣಿಸಲಾಗುವುದು). ಸರ್ಕಾರದ ಸುತ್ತೋಲೆ ಸಂಖ್ಯೆ:ಸಿಆಸುಇ 81 ಸೇವನೆ 2017, ದಿನಾಂಕ: 27.02.2018 ರನ್ವಯ ಪದವಿ ವಿದ್ಯಾರ್ಹತೆಯ ತತ್ಸಮಾನ ವಿದ್ಯಾರ್ಹತೆಗಳನ್ನು ಕೆಳಗಿನಂತೆ ಸ್ಪಷ್ಟಪಡಿಸಲಾಗಿರುತ್ತದೆ.
1) ಯುಜಿಸಿಯಿಂದ ಮಾನ್ಯತೆ ಹೊಂದಿರುವ ಪರಿಗಣಿತ ವಿಶ್ವವಿದ್ಯಾಲಯಗಳು, ಖಾಸಗಿ/ಡೀಮ್ಡ್ ಹಾಗೂ ಹೊರರಾಜ್ಯದ ವಿಶ್ವವಿದ್ಯಾಲಯಗಳಿಂದ ಪಡೆದ ಪದವಿಗಳು. ಆದರೆ ವಿಶ್ವವಿದ್ಯಾಲಯಗಳ ಪದವಿಯ ತತ್ಸಮಾನದ (Equivalence of Degree) ಬಗ್ಗೆ ಶಿಕ್ಷಣಕ್ಕೆ ಸಂಬಂಧಿಸಿದಂತೆ , ಆಯಾ ವಿಶ್ವವಿದ್ಯಾಲಯ ಮತ್ತು ಉದ್ಯೋಗಕ್ಕೆ ಸಂಬಂಧಿಸಂದಂತೆ ಉದ್ಯೋಗ ನೀಡುವ ಪ್ರಾಧಿಕಾರ ತೀರ್ಮಾನ ತೆಗೆದುಕೊಳ್ಳಬೇಕಾಗಿರುತ್ತದೆ.
2) ಅಂಚೆ ಮತ್ತು ದೂರ ಶಿಕ್ಷಣದ ಮುಖಾಂತರ ಪಡೆದಿರುವ ಪದವಿಗಳು. ಆದರೆ, ನಿಯಮಬಾಹಿರವಾಗಿ ಕೆಲವು ವಿಶ್ವವಿದ್ಯಾಲಯಗಳು ಯು.ಜಿ.ಸಿ.ಯ ಅನುಮೋದನೆ ಇಲ್ಲದೆ ನಡೆಸುತ್ತಿರುವ ಅಂಚೆ ಮತ್ತು ದೂರ ಶಿಕ್ಷಣದ ಕೋರ್ಸುಗಳನ್ನು ಹಾಗೂ ಅಂಚೆ ಮತ್ತು ದೂರ ಶಿಕ್ಷಣದ ಮುಖಾಂತರ ಪಡೆದ ತಾಂತ್ರಿಕ ಪದವಿಗಳನ್ನು ನೇಮಕಾತಿಗೆ ಪರಿಗಣಿಸುವಂತಿಲ್ಲ.
ಹೆಚ್ಚಿನ ಮಾಹಿತಿಗಾಗಿಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಮಾಹಿತಿ ಪಡೆದುಕೊಳ್ಳಿ
PSI-Postspdf file kannadanewsnow
