State – Kannada News Now


State

State

ಬೆಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ಜಾಲದ ನಂಟು ಆರೋಪದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟಿ ರಾಗಿಣಿ, ಸಂಜನಾಳ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ.

ಇಂದು ನಟಿ ರಾಗಿಣಿ, ಸಂಜನಾಳ ಜಾಮೀನು ಅರ್ಜಿ ವಿಚಾರಣೆ ಸಿಟಿ ಸಿವಿಲ್ ಆವರಣದ ಎನ್ ಡಿಪಿಎಸ್ ವಿಶೇಷ ನ್ಯಾಯಾಲಯದಲ್ಲಿ ನಡೆಯಲಿದ್ದು, ಇಂದು ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದಾರೆ.

ಕಳೆದ ವಿಚಾರಣೆ ವೇಳೆ ರಾಗಿಣಿ ಅರ್ಜಿಗೆ ರಾಗಿಣಿ ಪರ ವಕೀಲರು ವಾದ ಮಂಡಿಸಿದ್ದರು. ಸಿಸಿಬಿ ಕೂಡ ಇದಕ್ಕೆ ಆಕ್ಷೇಪಣೆ ಸಲ್ಲಿಕೆ ಮಾಡಿತ್ತು. ಹಾಗೆಯೇ ಸಂಜನಾ ಅರ್ಜಿಗೆ ಆಕ್ಷೇಪಣೆ ಸಲ್ಲಿಕೆ ಮಾಡಲು ಸಮಯಾವಕಾಶ ಕೇಳಿದ ಹಿನ್ನೆಲೆ ಇಂದು ಅರ್ಜಿಗೆ ಸಿಸಿಬಿ ಆಕ್ಷೇಪಣೆ ಸಲ್ಲಿಕೆ ಮಾಡಲಿದೆ ಎನ್ನಲಾಗಿದೆ.

State

ಬೆಂಗಳೂರು :  ಕರ್ನಾಟಕದಲ್ಲಿ ಶಾಲಾ-ಕಾಲೇಜು ಆರಂಭದ ಬಗ್ಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಸ್ಪಷ್ಟನೆ ನೀಡಿದ್ದು, ರಾಜ್ಯದಲ್ಲಿ ಸದ್ಯಕ್ಕೆ ಶಾಲಾ-ಕಾಲೇಜು ಆರಂಭ  ಇಲ್ಲ ಎಂದು ಹೇಳಿದ್ದಾರೆ.

ಪ್ರಧಾನಿ ಮೋದಿ ಸಭೆ ಬಳಿಕ ಮಾತನಾಡಿದ ಸಚಿವ ಡಾ,ಕೆ ಸುಧಾಕರ್ ಕೊರೊನಾ ಸೋಂಕು ವ್ಯಾಪಕವಾಗಿ ಹೆಚ್ಚಳವಾಗುತ್ತಿರುವ ಈ ಸಂದರ್ಭದಲ್ಲಿ ಸದ್ಯಕ್ಕೆ ಶಾಲಾ ಕಾಲೇಜು ಆರಂಭವಾಗುವುದಿಲ್ಲ, ಶಾಲಾ ಕಾಲೇಜು ಆರಂಭದ ಬಗ್ಗೆ ಚರ್ಚೆ ನಡೆದಿಲ್ಲ, ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಗೊಂದಲ ಬೇಡ ಎಂದು ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ.

ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ ಅಂತ್ಯದವರೆಗೂ ಪ್ರಾಥಮಿಕ, ಪ್ರೌಢ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ವಿದ್ಯಾರ್ಥಿಗಳು ಹೋಗುವಂತಿಲ್ಲ ಎಂದು ರಾಜ್ಯ ಸರ್ಕಾರ ಇತ್ತೀಚೆಗೆ ಸ್ಪಷ್ಟಪಡಿಸಿತ್ತು.

ರಾಜ್ಯದಲ್ಲಿ ಕೊರೊನಾ ವೈರಸ್ ಕಡಿಮೆಯಾಗದ ಕಾರಣ, ಈಗಿನ ಪರಿಸ್ಥಿತಿಯಲ್ಲಿ ಶಾಲೆಗಳಿಗೆ ವಿದ್ಯಾರ್ಥಿಗಳು ಬರುವುದು ಕ್ಷೇಮಕರವಲ್ಲ. ಹೀಗಾಗಿ ಸೆಪ್ಟೆಂಬರ್ 2020 ಅಂತ್ಯದವರೆಗೆ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳನ್ನು ಶಾಲೆ-ಕಾಲೇಜುಗಳಿಗೆ ಭೇಟಿ ನೀಡಲು ಅನುಮತಿ ನೀಡದಿರಲು ತೀರ್ಮಾನಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ತೀರ್ಮಾನಿಸಿತ್ತು.

State

ಬೆಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ವಶದಲ್ಲಿರುವ ಆರೋಪಿ ಶ್ರೀನಿವಾಸ್ ಸುಬ್ರಮಣ್ಯಂ ಅಲಿಯಾಸ್ ಶ್ರೀಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.

ಶ್ರೀನಿವಾಸ್ ನನ್ನು ಆರೋಗ್ಯ ತಪಾಸಣೆಗೆ ಒಳಪಡಿಸಲಾಗಿತ್ತು. ಈ ವೇಳೆ ಆರೋಪಿಗೆ ಕೊರೊನಾ ವೈರಸ್ ಪಾಸಿಟಿವ್ ಬಂದಿದೆ. ಈ ಹಿನ್ನೆಲೆಯಲ್ಲಿ ಆರೋಪಿ ಶ್ರೀಯನ್ನು ಕೋರಮಂಗಲದ ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆನೀಡಲಾಗುತ್ತಿದೆ.

State

ಬೆಂಗಳೂರು : ಕರ್ನಾಟಕ ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆಗಳ (ತಿದ್ದುಪಡಿ) ವಿಧೇಯಯಕ್ಕೆ ವಿಧಾನಪರಿಷತ್ ಅಂಗೀಕಾರ ನೀಡಿದ್ದು, ರಾಜ್ಯದಲ್ಲಿ ಇನ್ಮುಂದೆ ಮಹಿಳೆಯರು ರಾತ್ರಿ ಪಾಳಿಯಲ್ಲಿ ಕೆಲಸ ಮಾಡಲು ಅವಕಾಶ ಕಲ್ಪಿಸಿದೆ.

ಹೌದು, ವಿಧಾನಸಭೆಯಿಂದ ಅಂಗೀಕಾರ ರೂಪದಲ್ಲಿದ್ದ ಈ ವಿದೇಯಕಕ್ಕೆ ವಿಧಾನಪರಿಷತ್ ಸಹ ಒಪ್ಪಿಗೆ ನೀಡಿದ್ದು, ಸ್ವ ಇಚ್ಛೆ ಹೊಂದಿದ ಮಹಿಳೆಯರು ರಾತ್ರಿ ಪಾಳಿ ಕೆಲಸ ಮಾಡುವುದು ಕಾನೂನುಬದ್ಧವಾಗಲಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಸಚಿವ ಶಿವರಾಂ ಹೆಬ್ಬಾರ್, ಸೂಕ್ತ ಭದ್ರತೆ, ಸೌಲಭ್ಯ ಕಲ್ಪಿಸಿ ಮಹಿಳೆಯರಿಗೆ ರಾತ್ರಿ ಪಾಳಿಯಲ್ಲಿ ಕೆಲಸ ಮಾಡಲು ಅವಕಾಶ ಕಲ್ಪಿಸಲಾಗಿದೆ. ಪ್ರಮುಖವಾಗಿ ಮಹಿಳಾ ಉದ್ಯೋಗಿಗೆ ನಿವಾಸದಿಂದ ಕೆಲಸದ ಸ್ಥಳಕ್ಕೆ ಮತ್ತು ಹಿಂದಿರುಗಲು ಉಚಿತ ಸಾರಿಗೆ ಸೌಲಭ್ಯ ಮತ್ತು ಹೆಚ್ಚಿನ ಭದ್ರತೆ ಒದಗಿಸಬೇಕು ಎಂದು ಹೇಳಿದರು.

State

ಚಿತ್ರದುರ್ಗ : ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ಅವರು ನಕಲಿ ಜಾತಿ ಪ್ರಮಾಣ ಪತ್ರ ಸಲ್ಲಿಸಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ. ಹೀಗಾಗಿ ಅವರನ್ನು ಸಂಪುಟದಿಂದ ಕೈಬಿಟ್ಟು, ಶಾಸಕ ಸ್ಥಾನದಿಂದ ವಜಾಗೊಳಿಸಬೇಕು ಎಂದು ಮಾಜಿ ಸಚಿವ ಹೆಚ್. ಆಂಜನೇಯ ಒತ್ತಾಯಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಭು ಚವ್ಹಾಣ್ ಅವರು ಮೂಲತಃ ಮಹಾರಾಷ್ಟ್ರದವರಾಗಿದ್ದು, ಅಲ್ಲಿಯೇ ಓದಿದ ವಿದ್ಯಾಭ್ಯಾಸದ ಪ್ರಮಾಣ ಪತ್ರಗಳೆಲ್ಲವೂ ಅಲ್ಲಿಯವೇ ಆಗಿವೆ. ಮಹಾರಾಷ್ಟ್ರದಲ್ಲಿ ಲಂಬಾಣಿ ಸಮುದಾಯ ಪ. ಪಂಗಡ ಪಟ್ಟಿಯಲ್ಲಿದ್ದು, ಕರ್ನಾಟಕದಲ್ಲಿ ಪರಿಶಿಷ್ಟ ಜಾತಿಗೆ ಸೇರಿದೆ. ಅಧಿಕಾರಿಗಳ ಮೇಲೆ ತಮ್ಮ ಪ್ರಭಾವ ಬೀರಿ ಪ. ಜಾತಿ ಪ್ರಮಾಣ ಪತ್ರ ಪಡೆದು ಮೀಸಲು ಕ್ಷೇತ್ರದಿಂದ ಗೆದ್ದಿದ್ದಾರೆ ಎಂದು ಆರೋಪಿಸಿದರು.

ಜಾತಿ ಪ್ರಮಾಣ ಪತ್ರಕ್ಕೆ ಸಂಬಂಧಿಸಿದಂತೆ ದಾಖಲೆಗಳನ್ನು ಸಲ್ಲಿಕೆ ಮಾಡುವಂತೆ ನೋಟಿಸ್ ಜಾರಿ ಮಾಡಿದ ಜಿಲ್ಲಾಧಿಕಾರಿಯನ್ನು ವರ್ಗಾವಣೆ ಮಾಡಲಾಗಿದೆ. ಹಣ, ಅಧಿಕಾರ ಹಾಗೂ ತೋಳ್ಬಲದಿಂದ ಮೀಸಲಾತಿ ಕಬಳಿಸುವ ಹುನ್ನಾರ ನಡೆಯುತ್ತಿದೆ ಎಂದು ಹೇಳಿದರು.

State

ಬೆಂಗಳೂರು : ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿರುವ ಉಪನ್ಯಾಸಕರಿಗೆ, ಬಾಕಿ ವೇತನವನ್ನು ಶೀಘ್ರದಲ್ಲಿಯೇ ಬಿಡುಗಡೆ ಮಾಡಲಾಗುತ್ತದೆ ಎಂಬುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಘೋಷಿಸಿದ್ದಾರೆ.

ವಿಧಾನಪರಿಷತ್ ನಲ್ಲಿ ಸದಸ್ಯರೊಬ್ಬರ ಪ್ರಶ್ನೆಗೆ ಉತ್ತರಿಸಿ ಮಾತನಾಡಿದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು, ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 14,447 ಅತಿಥಿ ಉಪನ್ಯಾಸಕರಿಗೆ ಲಾಕ್ ಡೌನ್ ಕಾರಣದಿಂದ ಕಾಲೇಜು ಮುಚ್ಚಿ ಮಾರ್ಚ್ ತಿಂಗಳವರೆಗೆ ಮಾತ್ರವೇ ವೇತನ ನೀಡಲಾಗಿತ್ತು. ಇದೀಗ ಏಪ್ರಿಲ್ ನಿಂದ ಆಗಸ್ಟ್ ವರೆಗೆ ವೇತನ ಬಿಡುಗಡೆ ಮಾಡಲು ಆರ್ಥಿಕ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿರುವುದಾಗಿ ತಿಳಿಸಿದರು.

ಈ ಹಿನ್ನಲೆಯಲ್ಲಿ ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 14,447 ಉಪನ್ಯಾಸಕರಿಗೆ ಶೀಘ್ರದಲ್ಲಿಯೇ ಬಾಕಿ ವೇತನ ಸಿಗಲಿದೆ. ಈ ಮೂಲಕ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ.

State

ಬೆಂಗಳೂರು : ಸಮಾನ ವೇತನ, ಸೇವಾ ಭದ್ರತೆ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆರೋಗ್ಯ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರು ಇಂದಿನಿಂದ ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ.

ಗುತ್ತಿಗೆ ಆರೋಗ್ಯ ಸಿಬ್ಬಂದಿ ಈ ಹಿಂದೆ ಪ್ರತಿಭಟನೆ ನಡೆಸಿದ್ದ ಸಂದರ್ಭದಲ್ಲಿ ಬೇಡಿಕೆಗಳ ಪರಿಶೀಲನೆ ನಡೆಸಿ ವರದಿ ಸಲ್ಲಿಸಲು ಸರ್ಕಾರ ಪ್ರತ್ಯೇಕ ಸಮಿತಿ ರಚಿಸಿತ್ತು. ಆದರೆ, ಸಮಿತಿ ಈವರೆಗೂ ವರದಿ ನೀಡದ ಕಾರಣ ಇದೀಗ ಮತ್ತೆ ಪ್ರತಿಭಟನೆಗೆ ಆರೋಗ್ಯ ಸಿಬ್ಬಂದಿಗಳು ಮುಂದಾಗಿವೆ.

ಕೊರೊನಾ ಸಂದರ್ಭದಲ್ಲಿ ಹೆಚ್ಚುವರಿ ಭತ್ಯೆ ನೀಡಲು ಮುಂದಾಗಿದೆ. ಆದರೆ, ಈ ಭತ್ಯೆ ಎಲ್ಲಾ ಸಿಬ್ಬಂದಿಗೂ ಸಿಗುವುದಿಲ್ಲ. ನಮ್ಮ ಸೇವೆ ಕಾಯಂಗೊಳಿಸಿ, ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು ಎಂದು ಆರೋಗ್ಯ ಇಲಾಖೆ ಸಿಬ್ಬಂದಿಗಳು ಒತ್ತಾಯಿಸಿದ್ದಾರೆ.

State

ಬೆಂಗಳೂರು : ರಾಜ್ಯ ಸರ್ಕಾರವು ಆಶಾ ಕಾರ್ಯಕರ್ತೆಯರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಮಾಸಿಕ 12 ಸಾವಿರ ರೂ. ಗೌರವ ಧನ ನೀಡುವ ಕುರಿತಂತೆ ಸಚಿವ ಶ್ರೀರಾಮುಲು ಭರವಸೆ ನೀಡಿದ್ದಾರೆ.

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬುಧವಾರ ಆರಂಭಿಸಿದ ರಾಜ್ಯಮಟ್ಟದ ಪ್ರತಿಭಟನೆಯನ್ನು ಆಶಾ ಕಾರ್ಯಕರ್ತರು ಕೈಬಿಟ್ಟಿದ್ದಾರೆ.

ಶ್ರೀರಾಮುಲು ಅವರು ಸಂಘದ ಮುಖಂಡರೊಂದಿಗೆ ಚರ್ಚಿಸಿ ಪ್ರಮುಖ ಬೇಡಿಕೆಗಳನ್ನು ಪೂರ್ಣಗೊಳಿಸುವ ಭರವಸೆ ನೀಡಿದ್ದಾರೆ. ಬಾಕಿ ಇರುವ ಜುಲೈ ತಿಂಗಳ ವೇತನವನ್ನು ಬಿಡುಗಡೆ ಮಾಡಲು ಒಪ್ಪಿಕೊಂಡಿದ್ದು, ಮಾಸಿಕ 12 ಸಾವಿರ ರೂ. ಗೌರವಧನ ನೀಡುವ ಬಗ್ಗೆ  ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಇದೇ ಶುಕ್ರವಾಅರ ಮುಖಂಡರೊಂದಿಗೆ ಸಭೆ ಆಯೋಜಿಸುವುದಾಗಿ ಹೇಳಿದ್ದಾರೆ.

State

ನವದೆಹಲಿ : ಕೇಂದ್ರ ಸಚಿವ ಸುರೇಶ್ ಅಂಗಡಿ ಅವರು ಕೊರೊನಾ ವೈರಸ್ ಗೆ ನಿಧನರಾಗಿದ್ದು, ಸುರೇಶ್ ಅಂಗಡಿ ಅಂತ್ಯಕ್ರಿಯೆ ಬಹುತೇಕ ದೆಹಲಿಯಲ್ಲೇ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.

ಕರ್ನಾಟಕ ಸರ್ಕಾರ ಸುರೇಶ್ ಅಂಗಡಿ ಅವರ ಪಾರ್ಥಿವ ಶರೀರವನ್ನು ಬೆಳಗಾವಿಗೆ ಕರೆತರಲು ವ್ಯವಸ್ಥೆ ಮಾಡಿದ್ದರೂ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿಲ್ಲ ಎನ್ನಲಾಗಿದ್ದು, ಈ ಹಿನ್ನೆಲೆಯಲ್ಲಿ ದೆಹಲಿಯ ಲೋದಿ ಗಾರ್ಡನ್ ರಸ್ತೆಯಲ್ಲಿರುವ ಚಿತಾರದಲ್ಲೇ ಅಂತ್ಯಸಂಸ್ಕಾರ ನಡೆಸಲು ಉದ್ದೇಶಿಸಲಾಗಿದೆ.

ಕೋವಿಡ್ ನಿಯಮಾವಳಿ ಪ್ರಕಾರ ವ್ಯಕ್ತಿ ಮೃತಪಟ್ಟ ಸ್ಥಳದಲ್ಲೇ ಅಂತ್ಯಕ್ರಿಯೆ ನಡೆಸಬೇಕು. ಈ ಹಿನ್ನೆಲೆಯಲ್ಲಿ ನಿಯಮಾವಳಿ ಪ್ರಕಾರ ಕೆಲವೇ ಕೆಲವು ಗಣ್ಯರ ಸಮ್ಮುಖದಲ್ಲಿ ಅಂತ್ಯಸಂಸ್ಕಾರ ನಡೆಯುವ ನಿರೀಕ್ಷೆ ಇದೆ.

State

ಬೆಂಗಳೂರು : ರಾಜ್ಯ ಸರ್ಕಾರವು ಕನ್ನಡಿಗರಿಗೆ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದ್ದು, ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶವನ್ನು ಹೆಚ್ಚಿಸಲು ಆಂಧ್ರಪ್ರದೇಶ ಮಾದರಿಯನ್ನು ರಾಜ್ಯದಲ್ಲಿ ಅಳವಡಿಸಲು ಚಿಂತಿಸಲಾಗಿದೆ.

ಈ ಕುರಿತು ಮಾಹಿತಿ ನೀಡಿರುವ ಸಚಿವ ಮಾಧುಸ್ವಾಮಿ, ಸಿ ಮತ್ತು ಡಿ ದರ್ಜೆ ಹುದ್ದೆಗಳಲ್ಲಿ ಕನ್ನಡಿಗರಿಗೆ ಹೆಚ್ಚಿನ ಆದ್ಯತೆ ನೀಡುವ ಬಗ್ಗೆ ಸರ್ಕಾರದಿಂದ ಶೀಘ್ರದಲ್ಲಿಯೇ ಆದೇಶ ಹೊರಡಿಸಲಾಗುವುದು ಎಂದರು.

ಈ ಹಿಂದಿನ ಬಜೆಟ್ ನಲ್ಲಿ ಸರ್ಕಾರದಿಂದ ಸೌಲಭ್ಯ ಪಡೆಯುವ ಖಾಸಗಿ ಸಂಸ್ಥೆಗಳಲ್ಲಿನ ಸಿ ಮತ್ತು ಡಿ ವೃಂದದ ಹುದ್ದೆಗಳಿಗೆ ಶೇ. 100 ಕನ್ನಡಿಗರನ್ನು ನೇಮಕ ಮಾಡಿಕೊಳ್ಳಬೇಕೆಂದು ಪ್ರಸ್ತಾಪಿಸಲಾಗಿದೆ. ಆದರೆ ಅದು ಸಮರ್ಪಕವಾಗಿ ಜಾರಿಯಾಗುತ್ತಿಲ್ಲ. ಎ ಮತ್ತು ಬಿ ವೃಂದದಲ್ಲೂ ಆದ್ಯತೆ ಮೇರೆಗೆ ಕನ್ನಡಿಗರಿಗೆ ಹೆಚ್ಚಿನ ಪ್ರಾಶಸ್ತ್ರಯ ನೀಡಬೇಕೆಂಬ ನಿಯಮ ಜಾರಿಗೊಳಿಸಲು ಚರ್ಚಿಸಲಾಗುತ್ತಿದ್ದು, ಶೀಘ್ರದಲ್ಲೇ ಅಂತಿಮ ಆದೇಶ ಹೊರಡಿಸಲಾಗುವುದು ಎಂದು ತಿಳಿಸಿದರು.