ನವದೆಹಲಿ:ಕಾವೇರಿ ಹೆಚ್ಚುವರಿ ನೀರನ್ನು ತಿರುಗಿಸುವ ಸೌತ್ ವೆಲ್ಲಾರ್ ಯೋಜನೆಯನ್ನು ಕಾರ್ಯಗತಗೊಳಿಸದಂತೆ ತಮಿಳುನಾಡಿಗೆ ತಡೆ ನೀಡುವಂತೆ ಕರ್ನಾಟಕ ಸಲ್ಲಿಸಿದ್ದ ಮಧ್ಯಂತರ ಅರ್ಜಿಯ ವಿಚಾರಣೆಯಿಂದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅರವಿಂದ್ ಕುಮಾರ್ ಸೋಮವಾರ ಹಿಂದೆ ಸರಿದಿದ್ದಾರೆ.
ನ್ಯಾಯಮೂರ್ತಿ ಕುಮಾರ್ ಕರ್ನಾಟಕದವರು.
ನ್ಯಾಯಮೂರ್ತಿ ಕುಮಾರ್ ಅವರು ಪ್ರಕರಣದ ವಿಚಾರಣೆಯಿಂದ ಹೊರಗುಳಿದ ಕಾರಣ, ನ್ಯಾಯಮೂರ್ತಿ ಪಿ.ಎಸ್.ನರಸಿಂಹ ಅವರನ್ನೊಳಗೊಂಡ ಪೀಠ, ಈ ವಿಷಯವನ್ನು ಮತ್ತೊಂದು ಸೂಕ್ತ ಪೀಠದ ಮುಂದೆ ಪಟ್ಟಿ ಮಾಡುವಂತೆ ಮುಖ್ಯ ನ್ಯಾಯಮೂರ್ತಿಗಳ ಮುಂದೆ ಇರಿಸುವಂತೆ ಸೂಚಿಸಿತು.
ಕರ್ನಾಟಕ ಸರ್ಕಾರದ ಪರವಾಗಿ ಹಿರಿಯ ವಕೀಲರಾದ ಶ್ಯಾಮ್ ದಿವಾನ್ ಮತ್ತು ಮೋಹನ್ ಕಾತರಕಿ ವಾದ ಮಂಡಿಸಿದರು.
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಹಲವು ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿದೆ.