Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ಜನತೆಗೆ ಮತ್ತೊಂದು ಗುಡ್‌ನ್ಯೂಸ್ : ಮನೆ ಬಾಗಿಲಿಗೆ ಬರಲಿದೆ ಪೌತಿ ಖಾತೆ

12/02/2026 6:21 PM

BREAKING: ವಿಮಾನಗಳಲ್ಲಿ ಇಯರ್‌ಫೋನ್‌ಗಳನ್ನು ಬಳಸದೆ ಜೋರಾಗಿ ಹಾಡು ಹಾಕಿದ್ರೆ ದಂಡ ವಿಧಿಸಬಹುದು: ಕೇಂದ್ರ ಸರ್ಕಾರ

12/02/2026 6:14 PM

ವಿಮಾನಗಳಲ್ಲಿ ಇಯರ್ಫೋನ್ ಬಳಸದೇ ಜೋರಾಗಿ ಮ್ಯೂಸಿಕ್ ಕೇಳುವ ಪ್ರಯಾಣಿಕರಿಗೆ ದಂಡ ; ಕೇಂದ್ರ ಸರ್ಕಾರ

12/02/2026 6:14 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕಾವೇರಿ 5ನೇ ಹಂತದ ಯೋಜನೆಯಿಂದ ಬೆಂಗಳೂರಿನ 50 ಲಕ್ಷ ಜನರಿಗೆ ಅನುಕೂಲ : DCM ಡಿ.ಕೆ. ಶಿವಕುಮಾರ್
KARNATAKA

ಕಾವೇರಿ 5ನೇ ಹಂತದ ಯೋಜನೆಯಿಂದ ಬೆಂಗಳೂರಿನ 50 ಲಕ್ಷ ಜನರಿಗೆ ಅನುಕೂಲ : DCM ಡಿ.ಕೆ. ಶಿವಕುಮಾರ್

By kannadanewsnow5712/10/2024 1:04 PM

ಬೆಂಗಳೂರು : “ಕಾವೇರಿ ಐದನೇ ಹಂತದ ಕುಡಿಯುವ ನೀರಿನ ಯೋಜನೆಯಿಂದ ಬೆಂಗಳೂರಿನ 50 ಲಕ್ಷ ಜನರಿಗೆ ಅನುಕೂಲವಾಗಲಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಸದಾಶಿವನಗರ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಶನಿವಾರ ಈ ವಿಚಾರ ತಿಳಿಸಿದರು. “ಅಕ್ಟೊಬರ್ 16ರಂದು ಬೆಂಗಳೂರಿಗೆ ಬಹಳ ವಿಶೇಷವಾದ ದಿನ. ಕಾವೇರಿ ಕುಡಿಯುವ ನೀರಿನ ಐದನೇ ಹಂತದ ಯೋಜನೆ ಜಾರಿಯಾಗುತ್ತಿದೆ. ಇಷ್ಟು ದಿನ ಬೆಂಗಳೂರಿಗೆ ನಾಲ್ಕು ಹಂತಗಳ ಯೋಜನೆಯಲ್ಲಿ ಕುಡಿಯುವ ನೀರನ್ನು ಪೂರೈಸಲಾಗುತ್ತಿತ್ತು. ಈ ಯೋಜನೆ ಜಾರಿಗೆ ಇದ್ದ ಅಡಚಣೆ ನಿವಾರಿಸಿಕೊಂಡು ಬಂದಿದ್ದು, ಕಾಮಗಾರಿಯ ವೀಕ್ಷಣೆ ಮಾಡಿಕೊಂಡು ಬಂದಿದ್ದೇನೆ. ಇದೇ 16 ರಂದು ತೊರೆಕಾಡನಹಳ್ಳಿಯಲ್ಲಿ ಯೋಜನೆಗೆ ಚಾಲನೆ ನೀಡಲಾಗುವುದು. ನಂತರ ಬೆಂಗಳೂರಿನ ಮನೆ ಮನೆಗೆ ಕಾವೇರಿ ಪೂರೈಸಲಾಗುವುದು” ಎಂದು ತಿಳಿಸಿದರು.

ಕೇಂದ್ರದ ಅನ್ಯಾಯದ ವಿರುದ್ಧ ಹೋರಾಟ:

ಕೇಂದ್ರ ಸರ್ಕಾರದ ತೆರಿಗೆ ಹಂಚಿಕೆ ಬಗ್ಗೆ ಕೇಳಿದಾಗ, “ತೆರಿಗೆ ಪಾಲು ಹಂಚಿಕೆಯಲ್ಲಿ ಕರ್ನಾಟಕಕ್ಕೆ ಬಹಳ ಅನ್ಯಾಯ ಮಾಡಲಾಗುತ್ತಿದೆ. ಉತ್ತರ ಪ್ರದೇಶ, ಉತ್ತರ ಭಾರತದ ರಾಜ್ಯಗಳು ಹಾಗೂ ಆಂಧ್ರಪ್ರದೇಶಕ್ಕಿಂತ ನಮಗೆ ಬಹಳ ಕಡಿಮೆ ಅನುದಾನ ಸಿಕ್ಕಿದೆ. ಆಂಧ್ರ ಪ್ರದೇಶದಿಂದ ಹೆಚ್ಚು ತೆರಿಗೆ ಹೋಗುವುದೇ ಇಲ್ಲ. ಅವರಿಗಿಂತ ನಮಗೆ ಕಡಿಮೆ ಪಾಲು ಸಿಗುತ್ತಿದೆ. ಇದರ ವಿರುದ್ಧ ಮುಂದಿನ ದಿನಗಳಲ್ಲಿ “ನಮ್ಮ ತೆರಿಗೆ ನಮ್ಮ ಹಕ್ಕು” ಹೋರಾಟ ಮಾಡುತ್ತೇವೆ. ಈ ಅನ್ಯಾಯದ ಬಗ್ಗೆ ಕೇಂದ್ರ ಸಚಿವರು ಹಾಗೂ ಬಿಜೆಪಿ ಸಂಸದರು ಯಾಕೆ ಧ್ವನಿ ಎತ್ತಿಲ್ಲ? ನಮ್ಮ ರಾಜ್ಯದಿಂದ ಆಯ್ಕೆಯಾಗಿರುವ ನಿರ್ಮಲಾ ಸೀತರಾಮನ್ ಅವರು ಹಣಕಾಸು ಮಂತ್ರಿಯಾಗಿ, ನಮ್ಮ ರಾಜ್ಯದ 3-4 ಕೇಂದ್ರ ಸಚಿವರಿದ್ದರೂ ಅವರು ನಮ್ಮ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ನೋಡಿಕೊಂಡು ಕೂತಿದ್ದಾರಲ್ಲಾ ಇದು ನಿಜಕ್ಕೂ ಆಘಾತಕಾರಿ. ಮನಮೋಹನ್ ಸಿಂಗ್ ಕಾಲದಲ್ಲಿ ಎಷ್ಟು ಬಂದಿತ್ತು, ಈಗ ಎಷ್ಟು ಬಂದಿದೆ ಎಂಬುದನ್ನು ವಿಧಾನಸಭೆಯಲ್ಲಿ ಚರ್ಚೆ ಮಾಡೋಣ, ಈಗ ನಮ್ಮ ಹೋರಾಟಕ್ಕೆ ಬಿಜೆಪಿ ನಾಯಕರು ಕೈ ಜೋಡಿಸಲಿ” ಎಂದು ತಿಳಿಸಿದರು.

ಜಾಹೀರಾತು ವಿಚಾರವಾಗಿ ಬಿಜೆಪಿ ಟೀಕೆ ಬಗ್ಗೆ ಕೇಳಿದಾಗ, “ನಮಗೆ ಬಂದಿರುವ ಮಾಹಿತಿಯನ್ನು ನಮ್ಮದೇ ಆದ ಭಾವನೆ ಮೂಲಕ ಜನರಿಗೆ ತಿಳಿಸಿದ್ದೇವೆ. ಉಳಿದ ವಿಚಾರವನ್ನು ವಿಧಾನಸಭೆಯಲ್ಲಿ ಚರ್ಚೆ ಮಾಡೋಣ” ಎಂದು ತಿಳಿಸಿದರು.

ತಾಯಿ ಆಶೀರ್ವಾದದಿಂದ ಮಳೆಯಾಗಿ ಅಣೆಕಟ್ಟು ತುಂಬಿವೆ:

“ಮೈಸೂರು ದಸರಾ ಕಾರ್ಯಕ್ರಮವನ್ನು ಬಹಳ ವಿಜೃಂಭಣೆಯಿಂದ ಆಚರಣೆ ಮಾಡಲಾಗುತ್ತಿದೆ. ನಾಡದೇವಿ ತಾಯಿ ಚಾಮುಂಡೇಶ್ವರಿ ಆಶೀರ್ವಾದದಿಂದ ನಾಡಿನಲ್ಲಿ ಉತ್ತಮ ಮಳೆಯಾಗಿದೆ. ನೀರಿಗಾಗಿ ಜನರು ಹಾಗೂ ತಮಿಳುನಾಡು ವಿರುದ್ಧದ ಹೋರಾಟ ನಿಂತಿದೆ. ರಾಜ್ಯದ ಎಲ್ಲಾ ಅಣೆಕಟ್ಟುಗಳು ತುಂಬಿವೆ.

ತಾಯಿ ಆಶೀರ್ವಾದದಿಂದ ನಾವು ಕೇವಲ ಆರು ದಿನಗಳಲ್ಲಿ ತುಂಗಭದ್ರಾ ಅಣೆಕಟ್ಟಿನ ಗೇಟ್ ದುರಸ್ತಿ ಮಾಡಿದ್ದೇವೆ. ಮತ್ತೆ ಅಣೆಕಟ್ಟು ತುಂಬಿ ಬಾಗಿನ ಅರ್ಪಣೆ ಮಾಡಿದ್ದೇವೆ.

ದೀಪಾಲಂಕಾರ 10-12 ದಿನಗಳ ಕಾಲ ವಿಸ್ತರಣೆ:

ಮೈಸೂರು ದಸರಾಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮೈಸೂರಿನ ವಿದ್ಯುತ್ ದೀಪಾಲಂಕಾರವನ್ನು 10-12 ದಿನಗಳವರೆಗೆ ವಿಸ್ತರಣೆ ಮಾಡಲಾಗಿದೆ. ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ಈ ವ್ಯವಸ್ಥೆ ಮಾಡಲಾಗಿದೆ. ನಾನು ಇಂಧನ ಸಚಿವನಾಗಿದ್ದಾಗ ಮಾಡಿದ್ದಕ್ಕಿಂತ ಈ ಬಾರಿ ಅತ್ಯುತ್ತಮವಾಗಿ ದೀಪಾಲಂಕಾರ ಮಾಡಲಾಗಿದೆ. ಅಲ್ಲದೆ ಒಂದೂವರೆ ಸಾವಿರ ಡ್ರೋನ್ ಗಳ ಶೋ ವ್ಯವಸ್ಥೆ ಮಾಡಲಾಗಿದೆ. ಸಾಂಸ್ಕೃತಿಕ ನಾಡಿನಲ್ಲಿ ನಮ್ಮ ಜನ ನಮ್ಮ ಸಂಸ್ಕೃತಿಯನ್ನು ಕಣ್ತುಂಬಿಕೊಂಡು ಆನಂದಿಸಲಿ ಎಂದು ಈ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಕಳೆದ ಹತ್ತು ದಿನಗಳಲ್ಲಿ ಇಳಯರಾಜ, ಎ.ಆರ್ ರೆಹಮಾನ್ ಅವರ ಕಾರ್ಯಕ್ರಮಗಳಿಗೆ ಎರಡೂವರೆ ಲಕ್ಷ ಜನ ಸೇರಿದ್ದರು. ಈ ಸಂದರ್ಭದಲ್ಲಿ ನಾಡಿನ ಜನ ನೆಮ್ಮದಿ, ಶಾಂತಿಯಿಂದ ಬದುಕಲಿ ಎಂದು ಪ್ರಾರ್ಥನೆ ಮಾಡುತ್ತೇನೆ.

ನಾಡಿನ ವಿವಿಧ ಭಾಗಗಳಲ್ಲೂ ದಸರಾ ಕಾರ್ಯಕ್ರಮವನ್ನು ಬಹಳ ಸಂಭ್ರಮದಿಂದ ಆಚರಣೆ ಮಾಡಲಾಗುತ್ತಿದೆ. ಮಡಿಕೇರಿಯಲ್ಲಿ ಮೈಸೂರಿಗಿಂತಲೂ ಹೆಚ್ಚಿನ ಹಣ ವ್ಯಯ ಮಾಡಿ ಸ್ತಬ್ಧಚಿತ್ರಗಳನ್ನು ಮಾಡಿದ್ದಾರೆ. ಇದನ್ನು ನೋಡಿ ನನಗೆ ಅಚ್ಚರಿಯಾಯಿತು” ಎಂದು ತಿಳಿಸಿದರು.

Cauvery Phase 5 Project to benefit 50 lakh people of Bengaluru: DCM D.K. Shivakumar ಕಾವೇರಿ 5ನೇ ಹಂತದ ಯೋಜನೆಯಿಂದ ಬೆಂಗಳೂರಿನ 50 ಲಕ್ಷ ಜನರಿಗೆ ಅನುಕೂಲ : DCM ಡಿ.ಕೆ. ಶಿವಕುಮಾರ್
Share. Facebook Twitter LinkedIn WhatsApp Email

Related Posts

ರಾಜ್ಯದ ಜನತೆಗೆ ಮತ್ತೊಂದು ಗುಡ್‌ನ್ಯೂಸ್ : ಮನೆ ಬಾಗಿಲಿಗೆ ಬರಲಿದೆ ಪೌತಿ ಖಾತೆ

12/02/2026 6:21 PM4 Mins Read

ರೈಲ್ವೆ ಪ್ರಯಾಣಿಕರ ಗಮನಕ್ಕೆ: ಈ ರೈಲುಗಳ ಸಂಚಾರದಲ್ಲಿ ಬದಲಾವಣೆ

12/02/2026 6:01 PM1 Min Read

GOOD NEWS: ರಾಜ್ಯದಲ್ಲಿ ‘FAR ನಿರ್ಬಂಧ’ ಸಡಿಲ, ಕೈಗಾರಿಕಾ ಚಟುವಟಿಕೆಗೆ ಆನೆಬಲ: ಸಚಿವ ಎಂ.ಬಿ.ಪಾಟೀಲ

12/02/2026 5:56 PM3 Mins Read
Recent News

ರಾಜ್ಯದ ಜನತೆಗೆ ಮತ್ತೊಂದು ಗುಡ್‌ನ್ಯೂಸ್ : ಮನೆ ಬಾಗಿಲಿಗೆ ಬರಲಿದೆ ಪೌತಿ ಖಾತೆ

12/02/2026 6:21 PM

BREAKING: ವಿಮಾನಗಳಲ್ಲಿ ಇಯರ್‌ಫೋನ್‌ಗಳನ್ನು ಬಳಸದೆ ಜೋರಾಗಿ ಹಾಡು ಹಾಕಿದ್ರೆ ದಂಡ ವಿಧಿಸಬಹುದು: ಕೇಂದ್ರ ಸರ್ಕಾರ

12/02/2026 6:14 PM

ವಿಮಾನಗಳಲ್ಲಿ ಇಯರ್ಫೋನ್ ಬಳಸದೇ ಜೋರಾಗಿ ಮ್ಯೂಸಿಕ್ ಕೇಳುವ ಪ್ರಯಾಣಿಕರಿಗೆ ದಂಡ ; ಕೇಂದ್ರ ಸರ್ಕಾರ

12/02/2026 6:14 PM

ರೈಲ್ವೆ ಪ್ರಯಾಣಿಕರ ಗಮನಕ್ಕೆ: ಈ ರೈಲುಗಳ ಸಂಚಾರದಲ್ಲಿ ಬದಲಾವಣೆ

12/02/2026 6:01 PM
State News
KARNATAKA

ರಾಜ್ಯದ ಜನತೆಗೆ ಮತ್ತೊಂದು ಗುಡ್‌ನ್ಯೂಸ್ : ಮನೆ ಬಾಗಿಲಿಗೆ ಬರಲಿದೆ ಪೌತಿ ಖಾತೆ

By kannadanewsnow0912/02/2026 6:21 PM KARNATAKA 4 Mins Read

ಶಿವಮೊಗ್ಗ : ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿ, ಗ್ರಾಮ ಸೇವಕರು ಮನೆ ಬಾಗಿಲಿಗೆ ಬಂದು ಮೃತ ವ್ಯಕ್ತಿಗಳ ಹೆಸರಿನಲ್ಲಿರುವ…

ರೈಲ್ವೆ ಪ್ರಯಾಣಿಕರ ಗಮನಕ್ಕೆ: ಈ ರೈಲುಗಳ ಸಂಚಾರದಲ್ಲಿ ಬದಲಾವಣೆ

12/02/2026 6:01 PM

GOOD NEWS: ರಾಜ್ಯದಲ್ಲಿ ‘FAR ನಿರ್ಬಂಧ’ ಸಡಿಲ, ಕೈಗಾರಿಕಾ ಚಟುವಟಿಕೆಗೆ ಆನೆಬಲ: ಸಚಿವ ಎಂ.ಬಿ.ಪಾಟೀಲ

12/02/2026 5:56 PM

SSLC, ದ್ವಿತೀಯ PUC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪರೀಕ್ಷೆ-1ಕ್ಕೆ ‘BMTC’ ಬಸ್ಸಿನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ

12/02/2026 5:50 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.