ಬೆಂಗಳೂರು: ನಗರದಲ್ಲಿ ಬೇಸಿಗೆ ಆರಂಭದ ಬೆನ್ನಲ್ಲೇ, ನೀರಿನ ಸಮಸ್ಯೆ ಎದುರಾಗಿದ್ದು, ಜನರು ನೀರಿಗಾಗಿ ಪರದಾಡುವಂತಾಗಿದೆ. ಇದರ ನಡುವೆ ಜಲಮಂಡಳಿಯಿಂದ ತುರ್ತು ನಿರ್ವಹಣಾ ಕಾಮಗಾರಿಯ ಹಿನ್ನಲೆಯಲ್ಲಿ ಇಂದು ಮತ್ತು ನಾಳೆ ಸುಮಾರು ಅರ್ಧ ಬೆಂಗಳೂರಿಗೆ ಕಾವೇರಿ ನೀರು ಪೂರೈಕೆ ಸ್ಥಗಿತಗೊಳಿಸುತ್ತಿದೆ.
ಕೊಳವೆಬಾವಿಗಳಲ್ಲಿ ನೀರಿನ ಕೊರತೆ ಸೇರಿದಂತೆ ಇನ್ನಿತರ ಕಾರಣಗಳಇಂದಾಗಿ ನಗರದಲ್ಲಿ ನೀರಿನ ಸಮಸ್ಯೆ ಉಲ್ಬಣಗೊಂಡಿದೆ. ಅದರಲ್ಲೂ ಯಲಹಂಕ, ಮಹದೇವಪುರ, ಕೆಆರ್ ಪುರ ಸೇರಿದಂತೆ ಹಲವು ಭಾಗಗಳಲ್ಲಿ ನೀರಿನ ವ್ಯತ್ಯಯ ಉಂಟಾಗಲಿದೆ.
ಜನರು ಟ್ಯಾಂಕರ್ ನೀರಿನ ಮೊರೆ ಹೋಗುತ್ತಿದ್ದಾರೆ. ಅದರ ನಡುವೆಯೇ ಮಂಗಳವಾರದ ಇಂದು ಹಾಗೂ ನಾಳೆಯ ಬುಧವಾರದಂದು ಜಲಮಂಡಳಿ ಕಾವೇರಿ 2 ಮತ್ತು 4ನೇ ಹಂತದ ವ್ಯಾಪ್ತಿಯ ಬಡವಾಣೆಗಳಿಗೆ ನೀರಿನ ಪೂರೈಕೆ ಸ್ಥಗಿತಗೊಳಿಸಲಾಗುತ್ತಿದೆ.
ಈ ದಿನಗಳಲ್ಲಿ ಕಾವೇರಿ 2 ಮತ್ತು 4ನೇ ಹಂತದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಾಗೂ ಲೆಕ್ಕಕ್ಕೆ ಸಿಗದ ನೀರಿನ ಪ್ರಮಾಣದ ಮಾಹಿತಿ ಪಡೆಯಲು ಬಲ್ಕ್ ಮೀಟರ್ ಅಳವಡಿಸಲಾಗುತ್ತಿದೆ. ಈ ಹಿನ್ನಲೆಯಲ್ಲಿ ಬೆಂಗಳೂರಿನ ಅರ್ಧಕ್ಕೂ ಹೆಚ್ಚಿನ ಬಡವಾಣೆಯಲ್ಲಿ ಇಂದು ಬೆಳಿಗ್ಗೆ 6 ಗಂಟೆಯಿಂದ ಬುಧವಾರ ಬೆಳಿಗ್ಗೆ 6 ಗಂಟೆಯವರೆಗೆ ಕಾವೇರಿ ನೀರು ಪೂರೈಕೆ ಸಂಪೂರ್ಣ ಸ್ಥಗಿತಗೊಳ್ಳಲಿದೆ.
ಇಂದು ಕರ್ನಾಟಕ ರಾಜ್ಯಸಭೆಯ 4 ಸ್ಥಾನಗಳಿಗೆ ಮತದಾನ: ಕಾಂಗ್ರೆಸ್ 3, ಬಿಜೆಪಿ 1 ಸ್ಥಾನ ಗೆಲುವು ಖಚಿತ