ಹೈದರಾಬಾದ್: ದೆಹಲಿ ಅಬಕಾರಿ ನೀತಿ ಪ್ರಕರಣದ ತನಿಖೆ ನಡೆಸುತ್ತಿರುವ ಕೇಂದ್ರೀಯ ತನಿಖಾ ದಳ (ಸಿಬಿಐ) ಅಧಿಕಾರಿಗಳು ಇಂದು ಹೈದರಾಬಾದ್ ಮೂಲದ ಉದ್ಯಮಿ ಬೋನಪಲ್ಲಿ ಅಭಿಷೇಕ್ ಎಂಬುವರನ್ನು ಬಂಧಿಸಿದ್ದಾರೆ.
ದೆಹಲಿಯ ಜಿಎನ್ಸಿಟಿಡಿಯ ಅಬಕಾರಿ ನೀತಿಯ ರಚನೆ ಮತ್ತು ಅನುಷ್ಠಾನದಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಪ್ರಕರಣದ ತನಿಖೆಯಲ್ಲಿ ಅಭಿಷೇಕ್ ಬೋಯಿನ್ಪಲ್ಲಿಯನ್ನು ಬಂಧಿಸಲಾಗಿದೆ ಎಂದು ಸಿಬಿಐ ಅಧಿಕಾರಿಗಳು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಆರೋಪಿಯನ್ನು ಸಕ್ಷಮ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು.
ದೆಹಲಿ ಮದ್ಯ ಹಗರಣ ಪ್ರಕರಣದಲ್ಲಿ ಸಿಬಿಐನಿಂದ ಇದು ಎರಡನೇ ಬಂಧನವಾಗಿದೆ. ಇದಕ್ಕೂ ಮೊದಲು ಮುಂಬೈನಲ್ಲಿ ಆಮ್ ಆದ್ಮಿ ಪಕ್ಷದ ಮಾಜಿ ನಾಯಕ ಮತ್ತು ಉದ್ಯಮಿ ವಿಜಯ್ ನಾಯರ್ ಅವರನ್ನು ಏಜೆನ್ಸಿ ಬಂಧಿಸಿತ್ತು.
BIG ALERT: ಉದ್ಯೋಗದ ಹೆಸರಿನಲ್ಲಿ ವಂಚನೆಯಿಂದ ಪಾರಾಗಲು ಈ ವಿಧಾನಗಳನ್ನು ಅನುಸರಿಸಿ
ವಾಟ್ಸಾಪ್ ಬಳಕೆದಾರರಿಗೆ ಸಿಹಿ ಸುದ್ದಿ: ಶೀಘ್ರದಲ್ಲೇ ವಾಟ್ಸಾಪ್ ಗ್ರೂಪ್ ಸದ್ಯಸರ ಸಂಖ್ಯೆ 1024ಕ್ಕೆ ಹೆಚ್ಚಳ
ಕೇಂದ್ರ ಸರ್ಕಾರದಿಂದ ಪಿಂಚಣಿದಾರರಿಗೆ ಸಿಹಿ ಸುದ್ದಿ: ತುಟ್ಟಿಭತ್ಯೆ 34 ರಿಂದ 38 ಕ್ಕೆ ಹೆಚ್ಚಿಸಿ ಅಧಿಕೃತ ಆದೇಶ