ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಎಸ್ಐಟಿ ಅಧಿಕಾರಿಗಳ ಬೆನ್ನಲ್ಲೇ, ಸಿಬಿಐ ಕೂಡ ತನಿಖೆಗೆ ಇಳಿಯೋ ಸಾಧ್ಯತೆ ಇದೆ. ಅಲ್ಲದೇ ಸಿಬಿಐನಿಂದ ಪ್ರಜ್ವಲ್ ರೇವಣ್ಣ ವಿರುದ್ಧ ಬ್ಲೂ ಕಾರ್ನರ್ ನೋಟಿಸ್ ಜಾರಿ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಇಂದು ಪ್ರಜ್ವಲ್ ರೇವಣ್ಣ ವಿರುದ್ಧದ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಸಿಎಂ ಸಿದ್ಧರಾಮ್ಯಯ ಎಸ್ಐಟಿ ಅಧಿಕಾರಿಗಳ ನೇತೃತ್ವದಲ್ಲಿ ಮಹತ್ವದ ಸಭೆಯನ್ನು ನಡೆಸಿದರು.
ಇಂದಿನ ಸಿಎಂ ನೇತೃತ್ವದ ಸಭೆಯಲ್ಲಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಸಿಬಿಐ ಬ್ಲೂ ಕಾರ್ನರ್ ನೋಟಿಸ್ ಹೊರಡಿಸುವ ಸಾಧ್ಯತೆ ಇದೆ ಎಂದು ವಿಶೇಷ ತನಿಖಾ ತಂಡ (ಎಸ್ಐಟಿ) ಸಿದ್ದರಾಮಯ್ಯ ಅವರಿಗೆ ತಿಳಿಸಿದೆ.
ಪ್ರಜ್ವಲ್ ರೇವಣ್ಣ ಅವರ ತಂದೆ ಎಚ್.ಡಿ.ರೇವಣ್ಣ ವಿರುದ್ಧ ಎಸ್ಐಟಿ ಎರಡನೇ ಲುಕ್ಔಟ್ ನೋಟಿಸ್ ಹೊರಡಿಸಿದೆ. ಪ್ರಜ್ವಲ್ ಮತ್ತು ಅವರ ತಂದೆಯ ವಿರುದ್ಧ ಇನ್ನೂ ಎರಡು ಎಫ್ಐಆರ್ಗಳು ದಾಖಲಾದ ನಂತರ ಅವರಿಗೆ ಮತ್ತಷ್ಟು ಸಂಕಷ್ಟ ಎದುರಾದಂತೆ ಆಗಿದೆ.
ಏತನ್ಮಧ್ಯೆ, ಕಾಂಗ್ರೆಸ್ ಹಿರಿಯ ಮುಖಂಡ ರಾಹುಲ್ ಗಾಂಧಿ ಅವರು ರೇವಣ್ಣ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣದ ಸಂತ್ರಸ್ತರಿಗೆ ಬೆಂಬಲ ವ್ಯಕ್ತಪಡಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. “ಅವನನ್ನು ಸಹೋದರ ಮತ್ತು ಮಗನಂತೆ ನೋಡಿದ ಅನೇಕರನ್ನು ಅತ್ಯಂತ ಹಿಂಸಾತ್ಮಕ ರೀತಿಯಲ್ಲಿ ಕ್ರೂರವಾಗಿ ಥಳಿಸಲಾಯಿತು. ಅವರ ಘನತೆಯನ್ನು ಕಸಿದುಕೊಳ್ಳಲಾಯಿತು. ನಮ್ಮ ತಾಯಂದಿರು ಮತ್ತು ಸಹೋದರಿಯರ ಮೇಲೆ ಅತ್ಯಾಚಾರ ಎಸಗಿದರೆ ಕಠಿಣ ಶಿಕ್ಷೆ ವಿಧಿಸಬೇಕು” ಎಂದು ಬರೆದಿದ್ದಾರೆ.
ರಾಜ್ಯದಲ್ಲಿ ಬಿಸಿಲಿನ ಬೇಗೆಗೆ ಸಾಂಕ್ರಾಮಿಕ ರೋಗಗಳ ಹೆಚ್ಚಳ ; ಅಗತ್ಯ ಕ್ರಮವಹಿಸಲು ಸೂಚನೆ