ಬೆಂಗಳೂರು : ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಲೋಕಾಯುಕ್ತ ಅಧಿಕಾರಿಗಳು ಇನ್ನು ವಿಚಾರಣೆಗೆ ಹಾಜರಾಗಿ ಎಂದು ನೋಟಿಸ್ ನೀಡಿದ್ದರು.ಈ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್ ಅವರು ಇಂದು ಲೋಕಾಯುಕ್ತ ಅಧಿಕಾರಿಗಳ ಎದುರು ವಿಚಾರಣೆಗೆ ಹಾಜರಾಗಿದ್ದರು. ಸತತ ಮೂರು ಗಂಟೆಗಳ ಬಳಿಕ ಇದೀಗ ಲೋಕಾಯುಕ್ತ ಅಧಿಕಾರಿಗಳ ವಿಚಾರಣೆ ಅಂತ್ಯವಾಗಿದೆ.
ವಿಚಾರಣೆ ಅಂತ್ಯವಾದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿಚಾರಣೆಗೆ ಬರಲು ಲೋಕಾಯುಕ್ತ ಅಧಿಕಾರಿಗಳು ಸಮನ್ಸ್ ಕೊಟ್ಟಿದ್ದರು. ಕೃಷ್ಣಾ ನದಿಗೆ ಬಾಗಿನ ಅರ್ಪಿಸಲು ಹೋಗಿದ್ದರಿಂದ ಬರಲಿಕ್ಕೆ ಆಗಲಿಲ್ಲ. ಹೀಗಾಗಿ ಇಂದು ವಿಚಾರಣೆಗೆ ಹಾಜರಾಗಿದ್ದೇನೆ ಎಂದು ಅವರು ತಿಳಿಸಿದರು.
ಕೆಲವು ದಾಖಲೆಗಳನ್ನು ಕೇಳಿದ್ದಾರೆ, ಕೊಡುತ್ತೇನೆ ಅಂತ ಹೇಳಿದ್ದೇನೆ. ಎರಡು ಮೂರು ಗಂಟೆಗಳ ಕಾಲ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ.ವಿಚಾರಣೆ ನಡೆಸಲು ಮತ್ತೆ ನೋಟಿಸ್ ಕೊಡುವುದಾಗಿ ಹೇಳಿದ್ದಾರೆ. ಲೋಕಾಯುಕ್ತ ಪೊಲೀಸರಿಗಿಂತ ಸಿಬಿಐ ಅಧಿಕಾರಿಗಳೇ ಪರವಾಗಿಲ್ಲಾ ಎಂದು ಅವರು ಇದೆ ವೇಳೆ ತಿಳಿಸಿದರು.
ಏನೇನೋ ಪ್ರಶ್ನೆಗಳನ್ನು ಕೇಳಿ ಹಿಂಸೆ ಕೊಡುತ್ತಿದ್ದಾರೆ. ಸಿಬಿಐ ಅಧಿಕಾರಿಗಳು ಒಂದು ಬಾರಿಯೂ ವಿಚಾರಣೆಗೆ ಕರೆಯಲಿಲ್ಲ. ಲೋಕಾಯುಕ್ತ ಪೊಲೀಸರು ಸಾಕಷ್ಟು ಮಾಹಿತಿಯನ್ನು ಕೇಳಿದ್ದಾರೆ. ಯಾವ್ಯಾವ ದಾಖಲೆಗಳನ್ನು ಕೊಟ್ಟಿದ್ದಾರೆ ಅಂತ ಹೇಳೋಕೆ ಆಗಲ್ಲ ಎಂದು ಲೋಕಾಯುಕ್ತ ವಿಚಾರಣೆ ಬಳಿಕ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ನೀಡಿದರು