ಬೆಂಗಳೂರು: ನಗರದಲ್ಲಿರುವಂತ ರಾಜರಾಜೇಶ್ವರಿ ನಗರದಲ್ಲಿರುವಂತ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಶಿಕ್ಷಣ ಸಂಸ್ಥೆಗಳ ಮೇಲೆ ಇಂದು ದಿಢೀರ್ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದರು. ಇದೀಗ ದಾಳಿಯ ನಂತ್ರ ವಿವಿಧ ದಾಖಲೆ ಪತ್ರಗಳು, ಆಸ್ತಿಯ ಮೌಲ್ಯಮಾಪನ ನಡೆಸಿದ ನಂತ್ರ, ವಾಪಸ್ ಆಗಿರೋದಾಗಿ ತಿಳಿದು ಬಂದಿದೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಮಾಲೀಕತ್ವದ ಶಿಕ್ಷಣ ಸಂಸ್ಥೆಗಳ ಮೇಲೆ ಸಿಬಿಐ ದಾಳಿ ನಡೆಸಿತ್ತು. ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ನ್ಯಾಶನಲ್ ಎಜುಕೇಶನ್ ಫೌಂಡೇಶನ್ ಮೇಲೆ ದಾಳಿ ನಡೆಸಿತ್ತು. ಅಧಿಕಾರಿಗಳು ಪ್ರಮುಖ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿತ್ತು. ಈಗ ಡಿಕೆಶಿ ಮಾಲೀಕತ್ವದ ಶಿಕ್ಷಣ ಸಂಸ್ಥೆಯ ಫೈನಾನ್ಸ್ ಡಿಪಾರ್ಟ್ ಮೆಂಟ್ ನಲ್ಲಿ ದಾಖಲೆಯನ್ನು ಪರಿಶೀಲಿಸಿದ ನಂತ್ರ, ಸಿಬಿಐ ಅಧಿಕಾರಿಗಳು ವಾಪಾಸ್ ಆಗಿರೋದಾಗಿ ತಿಳಿದು ಬಂದಿದೆ.
ಅಡಿಕೆ ಬೆಳೆಗಾರರ ಪರ ಕೋರ್ಟ್ ನಲ್ಲಿ ಬಿಜೆಪಿ ಸರ್ಕಾರ ಅರ್ಜಿ ಸಲ್ಲಿಸುವುದೇ.? – ಪ್ರಿಯಾಂಕ್ ಖರ್ಗೆ ಪ್ರಶ್ನೆ
ಈ ಹಿಂದೆ ಕೂಡ ಡಿ ಕೆ ಶಿವಕುಮಾರ್ ಅವರ ಮನೆ ಮೇಲೆ ಇಡಿ, ಆದಾಯ ತೆರಿಗೆ ಅಧಿಕಾರಿಗಳು, ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದು, ಅದಕ್ಕೆ ಸಂಬಂಧಪಟ್ಟಂತೆ ಅವರನ್ನು ಸದ್ಯ ವಿಚಾರಣೆ ನಡೆಸುತ್ತಿದೆ. ಡಿಕೆ ಶಿವಕುಮಾರ್ ಅವರು ಸಂಸ್ಥೆಯ ಚೇರ್ಮನ್ ಆಗಿದ್ದು, ಅವರ ಮಗಳಾದ ಐಶ್ವರ್ಯ ಅವರು ಕಾರ್ಯದರ್ಶಿಯಾಗಿ ಆಗಿದ್ದಾರೆ. ಇಂದು ಮಧ್ಯಾಹ್ನ ಎರಡು ಗಂಟೆ ಸುಮಾರಿಗೆ ದಾಳಿ ನಡೆದಿದೆ ಎನ್ನುವ ಮಾಹಿತಿ ಪ್ರಾಥಮಿಕ ಸುದ್ದಿ ಮೂಲಗಳಿಂದ ತಿಳಿದು ಬಂದಿದೆ. ಎರಡು ದಿನಗಳ ಹಿಂದೆ ಮಾಧ್ಯಮಗಳ ಜೊತೆಗೆ ಸುದ್ದಿಗಾರರ ಜೊತೆಗೆ ಕೊಪ್ಪಳದಲ್ಲಿ ಮಾತನಾಡುತ್ತ ಚುನಾವಣೆ ಹಿನ್ನಲೆಯಲ್ಲಿ ನನಗೆ ಸೇರಿದಂಥೆ ಹಲವರಿಗೆ ತೊಂದ್ರೆ ಕೊಡುತ್ತಿದೆ ಅಂತ ಬೇಸರ ವ್ಯಕ್ತಪಡಿಸಿದ್ದಾರೆ.
ಇನ್ನೂ ದಾಳಿ ಬಗ್ಗೆ ಮಾಧ್ಯಮಗಳ ಜೊತೆಗೆ ಮಾತನಾಡಿರುವ ಡಿಕೆ ಶಿವಕುಮಾರ್ ಅವರು, ಇಂದು ದಾಳಿ ವೇಳೆಯಲ್ಲಿ ನಮ್ಮ ಟ್ರಸ್ಟಿಗಳನ್ನು ಭೇಟಿ ಮಾಡಿ, ಕೆಲವು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ನನ್ನ ವಕೀಲರಿಗೆ ಕೂಡ ನಾನು ನೀಡಿರುವ ಹಣಕ್ಕೆ ಸಂಬಂಧಪಟ್ಟಂತೆ ನೋಟಿಸ್ ನೀಡಿದ್ದಾರೆ. ಇದಲ್ಲದೇ ನಮ್ಮ ಊರಿಗೆ ತೆರಳಿ ಅಲ್ಲಿರುವ ಜಮೀನು ಹಾಗೂ ಮನೆಯನ್ನು ಸುತ್ತು ಹಾಕಿ ತಹಶಿಲ್ದಾರ್ ಅವರಿಂದ ಮಾಹಿತಿಯನ್ನು ಪಡೆದುಕೊಂಡಿದ್ದಾರೆ. ನನ್ನ ವಿರುದ್ದ ಕೇಸ್ಗಳು ನಡೆಯುತ್ತಿದ್ದು, ಎಲ್ಲಾ ಕಡೆಯಿಂದ ನನಗೆ ತೊಂದ್ರೆ ನೀಡುತ್ತಿದ್ದಾರೆ ಅಂತ ಕಿಡಿಕಾರಿದರು. ಇದಲ್ಲದೇ ನನಗೆ ಯಾವುದೇ ಭಯವಿಲ್ಲ, ನಾನು ತಪ್ಪು ಮಾಡಿಲ್ಲ. ಹೆಚ್ ವಿಶ್ವನಾಥ್ ಬಗ್ಗೆ ಇತ್ತೀಚಿವೆ ಹಣಕಾಸಿನ ಬಗ್ಗೆ ರಾಜರೋಶವಾಗಿ ಹೇಳಿದ್ದರು ಕೂಡ ಯಾರು ಈ ಬಗ್ಗೆ ಮಾತನಾಡಿಲ್ಲ. ಇದಲ್ಲದೇ ವಿರೋಧಿಗಳನ್ನು ಮಟ್ಟ ಹಾಕುವ ನಿಟ್ಟಿನಲ್ಲಿ ಮುಂದಾಗಿದ್ದು, ಈ ಬಗ್ಗೆ ನ್ಯಾಯಾಲಯ ಜನತೆಗಳ ಜೊತೆಗೆ ನಾವು ಹೋಗುತ್ತೆವೆ ಅಂತ ಹೇಳಿದರು.