ಬೆಂಗಳೂರು :  ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್  ನಿವಾಸಕ್ಕೆ ಸಿಬಿಐ (CBI) ಅಧಿಕಾರಿಗಳು ಇಂದು ಧಿಡೀರ್ ದಾಳಿ ನಡೆಸಿದ್ದಾರೆ.

ಕನಕಪುರ, ದೊಡ್ಡ ಆಲಹಳ್ಳಿ ಸಂತೆ ಕೋಡಿಹಳ್ಳಿಯಲ್ಲಿರುವ ಡಿಕೆ ಶಿವಕುಮಾರ್ ( D.K Shivakumar) ನಿವಾಸಕ್ಕೆ ಸಿಬಿಐ ಅಧಿಕಾರಿಗಳು ಭೇಟಿ ನೀಡಿದ್ದು, ಸುಮಾರು 1 ಗಂಟೆ ಡಿಕೆಶಿ ನಿವಾಸದಲ್ಲಿ ಆಸ್ತಿ ಪಾಸ್ತಿಗಳ ಬಗ್ಗೆ ಪರಿಶೀಲನೆ ನಡೆಸಿ ಕೆಲವು ಮಹತ್ವದ ದಾಖಲೆಗಳ ಬಗ್ಗೆ ಮಾಹಿತಿ ಕಲೆ ಹಾಕಿದ್ದಾರೆ ಎಂದು ತಿಳಿದು ಬಂದಿದೆ.  ಮನೆ ಹಾಗೂ ಜಮೀನು ಇನ್ನಿತರ ಸ್ಥಳಗಳಿಗೆ ತೆರಳಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.

ಕೇಂದ್ರ ತನಿಖಾ ದಳದ (ಸಿಬಿಐ) ಅಧಿಕಾರಿಗಳು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಕನಕಪುರ, ದೊಡ್ಡಆಲಹಳ್ಳಿ, ಸಂತೆ ಕೋಡಿಹಳ್ಳಿ ಮನೆ, ಜಮೀನು ಮತ್ತಿತರರ ಸ್ಥಳಗಳಿಗೆ ಬುಧವಾರ ತೆರಳಿ ಆಸ್ತಿ-ಪಾಸ್ತಿ ಮತ್ತು ಅದಕ್ಕೆ ಸಂಬಂಧಪಟ್ಟ ದಾಖಲೆಗಳನ್ನು ಪರಿಶೀಲನೆ ನಡೆಸಿದರು. ಸಿಬಿಐ ಅಧಿಕಾರಿಗಳು ಕನಕಪುರ ತಹಶೀಲ್ದಾರ್ ಹಾಗೂ ಪೋಲೀಸರ ಜತೆಗೆ ತೆರಳಿದ್ದರು.

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಜಾರಿ ನಿರ್ದೇಶನಾಲಯ (.ಡಿ) ವಿಚಾರಣೆಗೆ ಹಾಜರಾಗಿದ್ದರು. ಆದಾಯಕ್ಕಿಂತ ಹೆಚ್ಚು ಆಸ್ತಿ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಇಡಿ ನೋಟಿಸ್ ನೀಡಿತ್ತು, ಇಡಿ ವಿಚಾರಣೆ ಬಳಿಕ ಡಿಕೆಶಿಗೆ ಸಿಬಿಐ ಮತ್ತೆ ಶಾಕ್ ನೀಡಿದೆ.

 

ಮೈಸೂರು ದಸರಾದಲ್ಲಿ ಪುಸ್ತಕ ಪ್ರದರ್ಶನಕ್ಕೆ ಕೊಕ್‌: ರಾಜ್ಯ ಬಿಜೆಪಿ ಸರ್ಕಾರಕ್ಕೆ ಹೆಚ್.ಡಿ.ಕುಮಾರಸ್ವಾಮಿ ತರಾಟೆ

BIGG NEWS : ‘ಉರಿ ಸರ್ಜಿಕಲ್ ಸ್ಟ್ರೈಕ್’ ವಾರ್ಷಿಕೋತ್ಸವ ; ‘2016ರ ಕಾರ್ಯಾಚರಣೆ’ ಹೇಗೆ ನಡೆಸಲಾಯ್ತು.? ಇಲ್ಲಿದೆ ಮಾಹಿತಿ

Share.
Exit mobile version