ಬೆಂಗಳೂರು: ಈಗಾಗಲೇ ಇಡಿ ಅಧಿಕಾರಿಗಳ ದಾಳಿಯ ( ED Officer Raid ) ಬಳಿಕ ವಿಚಾರಣೆ ಎದುರಿಸುತ್ತಿರುವಂತ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ಇಂದು ದಾಳಿ ( CBI Raid ) ನಡೆಸಿದ್ದಾರೆ. ಈ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ( KPCC President DK Shivakumar ) ಬಿಗ್ ಶಾಕ್ ನೀಡಿದ್ದಾರೆ.

ಕೇಂದ್ರ ತನಿಖಾ ದಳದ (ಸಿಬಿಐ) ಅಧಿಕಾರಿಗಳು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಕನಕಪುರ, ದೊಡ್ಡಆಲಹಳ್ಳಿ, ಸಂತೆ ಕೋಡಿಹಳ್ಳಿ ಮನೆ, ಜಮೀನು ಮತ್ತಿತರರ ಸ್ಥಳಗಳಿಗೆ ಬುಧವಾರ ತೆರಳಿ ಆಸ್ತಿ-ಪಾಸ್ತಿ ಮತ್ತು ಅದಕ್ಕೆ ಸಂಬಂಧಪಟ್ಟ ದಾಖಲೆಗಳನ್ನು ಪರಿಶೀಲನೆ ನಡೆಸಿದರು. ಸಿಬಿಐ ಅಧಿಕಾರಿಗಳು ಕನಕಪುರ ತಹಶೀಲ್ದಾರ್ ಹಾಗೂ ಪೋಲೀಸರ ಜತೆಗೆ ತೆರಳಿದ್ದಾರೆ.

Share.
Exit mobile version