ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ಹಣ ಅಕ್ರಮವಾಗಿ ವರ್ಗಾವಣೆ ಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ರಾಜ್ಯ ಸರ್ಕಾರ ಎಸ್ಐಟಿಯನ್ನು ರಚನೆ ಮಾಡಿದೆ. ಅಲ್ಲದೆ ಈ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸುವುದಿಲ್ಲ ಎಂದು ಕೂಡ ಹೇಳಿತು.ಆದರೆ ಇದೀಗ ಸಿಬಿಐ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದು, ಈ ಕುರಿತಂತೆ ಗೃಹ ಸಚಿವ ಜಿ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.
ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಸಿಬಿಐಗೆ ಬ್ಯಾಂಕ್ನವರು ಪತ್ರ ಬರೆದಿದ್ದರು. ಮೂರು ಕೋಟಿ ರೂಪಾಯಿ ಮೊತ್ತಕ್ಕಿಂತ ಹಚ್ಚಿನ ಹಗರಣ ಆಗಿದ್ದರೆ ಸ್ವಯಂಪ್ರೇರಿತ ಕೇಸ್ ದಾಖಲಿಸಬಹುದು ಅಂತ ಕಾನೂನು ಇದೆ. ಅದರಂತೆ ಸಿಬಿಐ ಕೇಸ್ ತೆಗೆದುಕೊಂಡಿದೆ. ರಾಜ್ಯ ಸರ್ಕಾರ ಎಲ್ಲ ರೀತಿಯ ಸಹಕಾರ ಕೋಡಲಿದೆ ಎಂದರು.
ಸರ್ಕಾರದ ಇಲಾಖೆಗಳ ತನಿಖೆ ಮಾಡುವ ಬಗ್ಗೆ ನಿರ್ಧಾರ ಕೈಗೊಂಡಿಲ್ಲ. ಸಿಬಿಐ ಪತ್ರ ಬರೆದ ಮೇಲೆ ತೀರ್ಮಾನ ಮಾಡಬೇಕು. ಸರ್ಕಾರಕ್ಕೆ ಪತ್ರ ಬರೆದ ಮೇಲೆ ಸಚಿವರ ತನಿಖೆ ಬಗ್ಗೆ ನಿರ್ಧಾರ ಮಾಡುತ್ತೇವೆ. ಸಚಿವರನ್ನು ಕರೆದು ಸಿಬಿಐ ತನಿಖೆ ಮಾಡಬಹುದು. ಅಗತ್ಯ ಬಂದರೆ ಕೇಸ್ ಅನ್ನು ಸಿಬಿಐಗೆ ನಾವೇ ಕೋಡುತ್ತೇವೆ. ಮೊದಲು ಅವರು ಪತ್ರ ಬರೆಯಲಿ. ನಾವು ಕ್ಯಾಬಿನೆಟ್ನಲ್ಲಿ ನಿರ್ಧಾರ ಮಾಡುತ್ತೇವೆ ಎಂದು ಪರಮೇಶ್ವರ್ ಹೇಳಿದರು.
ರಾಜ್ಯದಲ್ಲಿ 20 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆ ಇಟ್ಟುಕೊಂಡಿದ್ದೆವು ಆದರೆ ನಾವು ನಿರೀಕ್ಷೆ ಮಾಡಿದಷ್ಟು ಕೇತ್ರಗಳನ್ನು ಗೆಲ್ಲಲು ಆಗಲಿಲ್ಲ. ನಮ್ಮ ಲೆಕ್ಕಾಚಾರ ಉಲ್ಟಾ ಆಗಿದೆ ಆದರೆ ಮತ ಪ್ರಮಾಣದಲ್ಲಿ ಹೆಚ್ಚಳವಾಗಿದೆ.ಕಳೆದ ಬಾರಿ ಒಂದು ಸ್ಥಾನ ಗೆದ್ದಿದ್ದೆವು ಈ ಬಾರಿ 9 ಕ್ಷೇತ್ರಗಳನ್ನು ಗೆದ್ದಿದ್ದೇವೆ ನಾವು ಅಧಿಕಾರಕ್ಕೆ ಬಂದು ಒಂದು ವರ್ಷ ಆಗಿದೆ ರಾಜ್ಯದಲ್ಲಿ ನಿರೀಕ್ಷೆ ಮಾಡಿದಷ್ಟು ಸ್ಥಾನ ಬಂದಿಲ್ಲ ಎಂದು ಬೆಂಗಳೂರಿನಲ್ಲಿ ಗೃಹ ಸಚಿವ ಜಿ ಪರಮೇಶ್ವರ್ ಹೇಳಿಕೆ ನೀಡಿದರು.