ಬೆಂಗಳೂರು: ಸೋಷಿಯಲ್ ಮೀಡಿಯಾದಲ್ಲಿ ದೂರುದಾರನ ಬಗ್ಗೆ ನಕಲಿ ದಾಖಲೆ, ಧ್ವನಿ ಕ್ಲಿಪ್ ಅಪ್ ಲೋಡ್ ಮಾಡಿ ಅಪಪ್ರಚಾರ ಮಾಡಿದ್ದರ ಹಿನ್ನಲೆಯಲ್ಲಿ ಮುಡಾ ಪ್ರಕರಣದ ದೂರುದಾರ ಹಾಗೂ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಇಂದು ಪತ್ರಿಕಾ ಪ್ರಕಟಣೆಯಲ್ಲಿ ಸಿಸಿಬಿಯಿಂದ ಮಾಹಿತಿ ಹಂಚಿಕೊಂಡಿದ್ದು, ದೂರದಾರರಾದ ಡಿ.ಬಿ ನಟೇಶ್ ಕೆಎಎಸ್ ಹಿರಿಯ ಅಧಿಕಾರಿ ಹಾಗೂ ಈ ಹಿಂದೆ MUDA ಆಯುಕ್ತರು ನೀಡಿದ ದೂರಿನ ಮೇರೆಗೆ, ಮೈಸೂರು ನಿವಾಸಿ ಸ್ನೇಹಮಯಿ ಕೃಷ್ಣ ಎಂಬವರು ತಮ್ಮ ಫೇಸ್‌ಬುಕ್ ಖಾತೆಯ ಮೂಲಕ ದೂರದಾರರ ಫೋಟೋ ಹಾಗೂ ನಕಲಿ ದಾಖಲೆಗಳನ್ನು ಹಾಗೂ ಧ್ವನಿ ಕ್ಲಿಪ್ ಅನ್ನು ಸೃಷ್ಟಿಸಿ ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ನಡೆಸಿ ದೂರದಾರರನ್ನು ಗುರಿಯಾಗಿಸಿ ಕಿರುಕುಳ ನೀಡುತ್ತಿರುವ ಕುರಿತು ಬೆಂಗಳೂರು ನಗರ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದಿನಾಂಕ:18.02.2026 ರಂದು ಪ್ರಕರಣ ದಾಖಲಾಗಿ ತನಿಖೆ ಕೈಗೊಳ್ಳಲಾಗಿದೆ ಎಂದಿದೆ.
ತನಿಖೆ ವೇಳೆ ತನಿಖಾಧಿಕಾರಿಗಳು ದೂರದಾರರಿಂದ ಹಾಗೂ ಸಾಮಾಜಿಕ ಜಾಲತಾಣದಿಂದ ಸಾಕ್ಷ್ಯಧಾರಗಳನ್ನು ಸಂಗ್ರಹಿಸಿ ಫೇಸ್‌ಬುಕ್‌ನಲ್ಲಿ ಅಪ್‌ಲೋಡ್ ಮಾಡಿದ್ದ ಧ್ವನಿ ಕ್ಲಿಪ್ ಕುರಿತು ತನಿಖೆ ನಡೆಸಿದ್ದಾರೆ. ಮಾನ್ಯ ನ್ಯಾಯಾಲಯದಿಂದ ಶೋಧನಾ ವಾರಂಟ್ ಪಡೆದು ಆರೋಪಿಯ ಮನೆಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳ ಶೋಧ ಕಾರ್ಯ ನಡೆಸಲಾಗಿದೆ. ಇದಲ್ಲದೆ, ಈ ಪ್ರಕರಣದ ಆರೋಪಿ ಸ್ನೇಹಮಯಿ ಕೃಷ್ಣ ಮೈಸೂರು ಅವರಿಗೆ ನೋಟಿಸ್ ಜಾರಿ ಮಾಡಿ ಆರೋಪಿಯನ್ನು ಠಾಣೆಗೆ ಹಾಜರುಪಡಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂಬುದಾಗಿ ಸಿಸಿಬಿ ತಿಳಿಸಿದೆ.

ಏಪ್ರಿಲ್ 2026ರಿಂದ ಫೇಸ್‌ಬುಕ್ ಮೆಸೆಂಜರ್ ವೆಬ್‌ಸೈಟ್ ಸ್ಥಗಿತಕ್ಕೆ ಮೆಟಾ ನಿರ್ಧಾರ | Facebook Messenger
ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಈ ವರ್ಷದಿಂದಲೇ LKG, UKG ತರಗತಿ ಆರಂಭ: ಉಚಿತ ಅಭ್ಯಾಸ ಪುಸ್ತಕ ವಿತರಣೆ








