ದಕ್ಷಿಣಕನ್ನಡ : ಇತ್ತೀಚಿಗೆ ರಾಜ್ಯದಲ್ಲಿ ಅಕ್ರಮವಾಗಿ ಮಾದಕ ವಸ್ತುಗಳ ಮಾರಾಟ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಪೊಲೀಸರು ಕೂಡ ಇಂತಹ ಅಕ್ರಮ ಚಟುವಟಿಕೆಗಳ ಮೇಲೆ ಕಣ್ಣಿಟ್ಟಿದು ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಕೋಟೆಕಾರ್ ಬೀರಿ ಬಳಿ ಡ್ರಗ್ಸ್ ಮಾರುತ್ತಿದ್ದ ಇಬ್ಬರನ್ನ ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಉಳ್ಳಾಲದ ಮೊಹಮ್ಮದ್ ಇಶಾನ್, ಜಾಫರ್ ಸಾಧಿಕ್ ಬಂಧಿತ ಆರೋಪಿಗಳು ಎನ್ನಲಾಗಿದೆ. ಇನ್ನು ಬಂಧಿತ ಆರೋಪಿಗಳಲ್ಲಿ ಒಬ್ಬನಾದ ಜಾಫರ್ ಎಂಬಾತನ ವಿರುದ್ಧ ಹಲ್ಲೆ ಮತ್ತು ಕೊಲೆ ಯತ್ನ ಸೇರಿ ಒಟ್ಟು 9 ಕೇಸ್ಗಳು ದಾಖಲಾಗಿತ್ತು. ಇನ್ನು ಆರೋಪಿ ಮೊಹಮ್ಮದ್ ಇಶಾನ್ ವಿರುದ್ಧವು ಈ ಹಿಂದೆ MDMA ಮಾದಕವಸ್ತು ಮಾರಾಟ ಪ್ರಕರಣ ದಾಖಲಾಗಿದೆ. ಈ ಹಿನ್ನಲೆ ಇಂದು ಖಚಿತ ಮಾಹಿತಿ ಪಡೆದು ದಾಳಿ ಮಾಡಿದಾಗ ಮಾದಕ ವಸ್ತುಗಳು ಪತ್ತೆಯಾಗಿವೆ.
ಇನ್ನು ಬಂಧಿತರ ಬಳಿ ಇದ್ದ 9 ಲಕ್ಷ ಮೌಲ್ಯದ 407 ಗ್ರಾಂ. ತೂಕದ MDMA ಮಾದಕವಸ್ತು, ಕಾರು, ಮೊಬೈಲ್, ನಗದು ಸೇರಿ 16,13,800 ಲಕ್ಷ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಇನ್ನು ಈ ಆರೋಪಿಗಳು ಬೆಂಗಳೂರಿನಿಂದ ಡ್ರಗ್ಸ್ ಖರೀದಿಸಿ ತಂದು, ಕಾಲೇಜು ವಿದ್ಯಾರ್ಥಿಗಳನ್ನು ಗುರಿಯಾಗಿಸಿ ಡ್ರಗ್ಸ್ ಮಾರುತ್ತಿದ್ದರು.