ದಕ್ಷಿಣಕನ್ನಡ : ಇತ್ತೀಚಿಗೆ ರಾಜ್ಯದಲ್ಲಿ ಅಕ್ರಮವಾಗಿ ಮಾದಕ ವಸ್ತುಗಳ ಮಾರಾಟ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಪೊಲೀಸರು ಕೂಡ ಇಂತಹ ಅಕ್ರಮ ಚಟುವಟಿಕೆಗಳ ಮೇಲೆ ಕಣ್ಣಿಟ್ಟಿದು ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಕೋಟೆಕಾರ್​ ಬೀರಿ ಬಳಿ ಡ್ರಗ್ಸ್ ಮಾರುತ್ತಿದ್ದ ಇಬ್ಬರನ್ನ ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಉಳ್ಳಾಲದ ಮೊಹಮ್ಮದ್​​ ಇಶಾನ್​​, ಜಾಫರ್​ ಸಾಧಿಕ್​​ ಬಂಧಿತ ಆರೋಪಿಗಳು ಎನ್ನಲಾಗಿದೆ. ಇನ್ನು ಬಂಧಿತ ಆರೋಪಿಗಳಲ್ಲಿ ಒಬ್ಬನಾದ ಜಾಫರ್ ಎಂಬಾತನ ವಿರುದ್ಧ ಹಲ್ಲೆ ಮತ್ತು ಕೊಲೆ ಯತ್ನ ಸೇರಿ ಒಟ್ಟು 9 ಕೇಸ್​ಗಳು ದಾಖಲಾಗಿತ್ತು. ಇನ್ನು ಆರೋಪಿ ಮೊಹಮ್ಮದ್‌ ಇಶಾನ್ ವಿರುದ್ಧವು ಈ ಹಿಂದೆ MDMA ಮಾದಕವಸ್ತು ಮಾರಾಟ ಪ್ರಕರಣ ದಾಖಲಾಗಿದೆ. ಈ ಹಿನ್ನಲೆ ಇಂದು ಖಚಿತ ಮಾಹಿತಿ ಪಡೆದು ದಾಳಿ ಮಾಡಿದಾಗ ಮಾದಕ ವಸ್ತುಗಳು ಪತ್ತೆಯಾಗಿವೆ.

ಇನ್ನು ಬಂಧಿತರ ಬಳಿ ಇದ್ದ 9 ಲಕ್ಷ ಮೌಲ್ಯದ 407 ಗ್ರಾಂ. ತೂಕದ MDMA ಮಾದಕವಸ್ತು, ಕಾರು, ಮೊಬೈಲ್​, ನಗದು ಸೇರಿ 16,13,800 ಲಕ್ಷ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಇನ್ನು ಈ ಆರೋಪಿಗಳು ಬೆಂಗಳೂರಿನಿಂದ ಡ್ರಗ್ಸ್​​​​ ಖರೀದಿಸಿ ತಂದು, ಕಾಲೇಜು ವಿದ್ಯಾರ್ಥಿಗಳನ್ನು ಗುರಿಯಾಗಿಸಿ ಡ್ರಗ್ಸ್ ಮಾರುತ್ತಿದ್ದರು.

Share.
Exit mobile version