ಬೆಂಗಳೂರು: ಸರ್ಕಾರಿ ಕಚೇರಿಗಳಲ್ಲಿ ( Government Office ) “ಲಂಚ ಕೊಡಬೇಕಾಗಿಲ್ಲ” ಎಂಬ ಬೋರ್ಡ್ ಅಳವಡಿಸುವ ಮೊದಲು ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಕಡ್ಡಾಯವಾಗಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಿ ಎಂಬುದಾಗಿ ವಿಪಕ್ಷ ನಾಯಕ ಸಿದ್ಧರಾಮಯ್ಯ ( Siddaramaiah ) ಆಗ್ರಹಿಸಿದ್ದಾರೆ.
BIG BREAKING NEWS: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಜೆ.ಪಿ ನಡ್ಡಾ 2ನೇ ಅವಧಿಗೆ ಮುಂದುವರಿಕೆ | JP Nadda
ಈ ಕುರಿತಂತೆ ಸರಣಿ ಟ್ವಿಟ್ ಮಾಡಿರುವಂತ ಅವರು, “ನನಗೆ ಲಂಚ ಕೊಡಬೇಕಾಗಿಲ್ಲ, ನಾನು ಭ್ರಷ್ಟ ಅಧಿಕಾರಿಯಾಗಲಾರೆ” ಎಂದು ಸರ್ಕಾರಿ ಕಚೇರಿಗಳಲ್ಲಿ ರಾಜ್ಯ ಬಿಜೆಪಿ ಸರ್ಕಾರ ಬೋರ್ಡ್ ಹಾಕಿಸುತ್ತಂತೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ, ಮೊದಲು ನಿಮ್ಮ ಮತ್ತು ಸಚಿವರ ಕಚೇರಿಗಳು ಹಾಗೂ ಮನೆ ಮುಂದೆ ಈ ಬೋರ್ಡ್ ಹಾಕಿಸಿ ಎಂದು ಹೇಳಿದ್ದಾರೆ.
“ನನಗೆ ಲಂಚ ಕೊಡಬೇಕಾಗಿಲ್ಲ, ನಾನು ಭ್ರಷ್ಟ ಅಧಿಕಾರಿಯಾಗಲಾರೆ” ಎಂದು ಸರ್ಕಾರಿ ಕಚೇರಿಗಳಲ್ಲಿ ರಾಜ್ಯ @BJP4Karnataka ಸರ್ಕಾರ ಬೋರ್ಡ್ ಹಾಕಿಸುತ್ತಂತೆ, ಮುಖ್ಯಮಂತ್ರಿ @BSBommai ಅವರೇ, ಮೊದಲು ನಿಮ್ಮ ಮತ್ತು ಸಚಿವರ ಕಚೇರಿಗಳು ಹಾಗೂ ಮನೆ ಮುಂದೆ ಈ ಬೋರ್ಡ್ ಹಾಕಿಸಿ. 1/5 #40PercentSarkara pic.twitter.com/ymZWb6j5DH
— Siddaramaiah (@siddaramaiah) September 26, 2022
ಸರ್ಕಾರಿ ಗುತ್ತಿಗೆದಾರರು ಲಂಚದ ಆರೋಪ ಮಾಡಿರುವುದು ಸಚಿವರ ಮೇಲೆ, ಅಧಿಕಾರಿಗಳ ಮೇಲೆ ಅಲ್ಲ. ಅಧಿಕಾರಿಗಳನ್ನು ತೋರಿಸಿ ಲಂಚ/ಕಮಿಷನ್ ಆರೋಪದಿಂದ ತಪ್ಪಿಸಿಕೊಳ್ಳುವ ಪ್ರಯತ್ನ ಬೇಡ. ಲಂಚಾವತಾರ ನಾಟಕದಲ್ಲಿ ಅಧಿಕಾರಿಗಳದ್ದು ಪೋಷಕ ಪಾತ್ರ, ಬಿಜೆಪಿ ಸರ್ಕಾರದ ಇಲಾಖಾ ಸಚಿವರದ್ದೇ ಮುಖ್ಯ ಪಾತ್ರ ಎಂದು ಹೇಳಿದ್ದಾರೆ.
ಸರ್ಕಾರಿ ಗುತ್ತಿಗೆದಾರರು ಲಂಚದ ಆರೋಪ ಮಾಡಿರುವುದು ಸಚಿವರ ಮೇಲೆ, ಅಧಿಕಾರಿಗಳ ಮೇಲೆ ಅಲ್ಲ. ಅಧಿಕಾರಿಗಳನ್ನು ತೋರಿಸಿ ಲಂಚ/ಕಮಿಷನ್ ಆರೋಪದಿಂದ ತಪ್ಪಿಸಿಕೊಳ್ಳುವ ಪ್ರಯತ್ನ ಬೇಡ. ಲಂಚಾವತಾರ ನಾಟಕದಲ್ಲಿ ಅಧಿಕಾರಿಗಳದ್ದು ಪೋಷಕ ಪಾತ್ರ, @BJP4Karnataka ಸರ್ಕಾರದ ಇಲಾಖಾ ಸಚಿವರದ್ದೇ ಮುಖ್ಯ ಪಾತ್ರ.
2/5#40PercentSarkara pic.twitter.com/hl5Lb1zEDq— Siddaramaiah (@siddaramaiah) September 26, 2022
ಸಚಿವರಿಂದ ರಕ್ಷಣೆಯ ಅಭಯ ಇಲ್ಲದೆ ಯಾವ ಅಧಿಕಾರಿಯೂ ಲಂಚಕ್ಕೆ ಕೈಯೊಡ್ಡುವ ಸಾಹಸ ಮಾಡುವುದಿಲ್ಲ. ಸಚಿವರು ಪ್ರಾಮಾಣಿಕವಾಗಿದ್ದಾಗ ಸರ್ಕಾರಿ ಅಧಿಕಾರಿಗಳು ಕೂಡಾ ಪ್ರಾಮಾಣಿಕವಾಗಿರುತ್ತಾರೆ. ಸಚಿವರು ಭ್ರಷ್ಟರಾದಾಗ “ಯಥಾ ರಾಜಾ ತಥಾ ಪ್ರಜಾ” ಅಷ್ಟೆ ಎಂದಿದ್ದಾರೆ.
ಸಚಿವರಿಂದ ರಕ್ಷಣೆಯ ಅಭಯ ಇಲ್ಲದೆ ಯಾವ ಅಧಿಕಾರಿಯೂ ಲಂಚಕ್ಕೆ ಕೈಯೊಡ್ಡುವ ಸಾಹಸ ಮಾಡುವುದಿಲ್ಲ. ಸಚಿವರು ಪ್ರಾಮಾಣಿಕವಾಗಿದ್ದಾಗ ಸರ್ಕಾರಿ ಅಧಿಕಾರಿಗಳು ಕೂಡಾ ಪ್ರಾಮಾಣಿಕವಾಗಿರುತ್ತಾರೆ. ಸಚಿವರು ಭ್ರಷ್ಟರಾದಾಗ "ಯಥಾ ರಾಜಾ ತಥಾ ಪ್ರಜಾ" ಅಷ್ಟೆ. @BJP4Karnataka
3/5#40PercentSarkara pic.twitter.com/m3W6ShaK8w— Siddaramaiah (@siddaramaiah) September 26, 2022
ಸನ್ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ, ಈ ಬೋರ್ಡ್ ಬರೆಸಿ ಹಾಕುವ ನಾಟಕಗಳನ್ನೆಲ್ಲ ನಿಲ್ಲಿಸಿ. ಮೊದಲು 40% ಕಮಿಷನ್ ಆರೋಪವೂ ಸೇರಿದಂತೆ ಸಚಿವರುಗಳ ಮೇಲಿನ ಭ್ರಷ್ಟಾಚಾರದ ಆರೋಪಗಳ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶ ಹೊರಡಿಸಿ ಎಂದು ಆಗ್ರಹಿಸಿದ್ದಾರೆ.
ಸನ್ಮಾನ್ಯ ಮುಖ್ಯಮಂತ್ರಿ @BSBommai ಅವರೇ, ಈ ಬೋರ್ಡ್ ಬರೆಸಿ ಹಾಕುವ ನಾಟಕಗಳನ್ನೆಲ್ಲ ನಿಲ್ಲಿಸಿ. ಮೊದಲು 40% ಕಮಿಷನ್ ಆರೋಪವೂ ಸೇರಿದಂತೆ ಸಚಿವರುಗಳ ಮೇಲಿನ ಭ್ರಷ್ಟಾಚಾರದ ಆರೋಪಗಳ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶ ಹೊರಡಿಸಿ. @BJP4Karnataka
4/5#40PercentSarkara pic.twitter.com/Nbyr38tCxV— Siddaramaiah (@siddaramaiah) September 26, 2022
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ, ಸರ್ಕಾರಿ ಕಚೇರಿಗಳಲ್ಲಿ “ಲಂಚ ಕೊಡಬೇಕಾಗಿಲ್ಲ” ಎಂಬ ಬೋರ್ಡ್ ಅಳವಡಿಸುವ ಮೊದಲು ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಕಡ್ಡಾಯವಾಗಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಿ. ನೊಂದ ಜನರು ದೂರು ಕೊಟ್ಟರೆ ಭ್ರಷ್ಟ ಅಧಿಕಾರಿಗಳ ವಿರುದ್ಧ ತಕ್ಷಣ ಕ್ರಮಕೈಗೊಳ್ಳಿ ಎಂದು ಒತ್ತಾಯಿಸಿದ್ದಾರೆ.
ಮುಖ್ಯಮಂತ್ರಿ @BSBommai ಅವರೇ, ಸರ್ಕಾರಿ ಕಚೇರಿಗಳಲ್ಲಿ “ಲಂಚ ಕೊಡಬೇಕಾಗಿಲ್ಲ" ಎಂಬ ಬೋರ್ಡ್ ಅಳವಡಿಸುವ ಮೊದಲು ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಕಡ್ಡಾಯವಾಗಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಿ. ನೊಂದ ಜನರು ದೂರು ಕೊಟ್ಟರೆ ಭ್ರಷ್ಟ ಅಧಿಕಾರಿಗಳ ವಿರುದ್ಧ ತಕ್ಷಣ ಕ್ರಮಕೈಗೊಳ್ಳಿ.
5/5#40PercentSarkara pic.twitter.com/vZzKPEe5dB— Siddaramaiah (@siddaramaiah) September 26, 2022