ಬೆಂಗಳೂರು: ಸಿ.ಟಿ ರವಿಯವರು ತಮ್ಮ ತಪ್ಪನ್ನು ಮರೆಮಾಚಲು ಈ ರೀತಿ ಮಾಡುತ್ತಿದ್ದು, ಅವರ ಪ್ರಕರಣವನ್ನು ಸಿಐಡಿ ತನಿಖೆ ಮಾಡುತ್ತಿದೆ. ತನಿಖಾ ವರದಿ ಬಂದ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಅಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕಾಂಗ್ರೆಸ್ ಅಧಿವೇಶನದಿಂದ ಪಕ್ಷದಲ್ಲಿ ಬದಲಾವಣೆ ಪರ್ವ ಆರಂಭವಾಗುವುದೇ ಎಂಬ ಪರ್ತಕರ್ತರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಬದಲಾವಣೆ ನಿರಂತರವಾದ ಪ್ರಕ್ರಿಯೆ. ನೂರು ವರ್ಷಗಳ ಹಿಂದಿದ್ದ ಪರಿಸ್ಥಿತಿ ಈಗಿಲ್ಲ. ರಾಜಕೀಯ ಬದಲಾವಣೆ ಹಾಗೂ ಬೆಳವಣಿಗೆಗಳು ಆಗುತ್ತಿರುತ್ತವೆ ಎಂದರು.
ತನ್ನ ತಪ್ಪು ಮರೆಮಾಚಲು ರಾಜ್ಯಪಾಲರಿಗೆ ದೂರು
ಸರ್ಕಾರದ ವಿರುದ್ದ ರಾಜ್ಯಪಾಲರಿಗೆ ಶಾಸಕ ಸಿ.ಟಿ.ರವಿಯವರು ದೂರು ನೀಡಿರುವ ಬಗ್ಗೆ ಪ್ರತಿಕ್ರಿಯೆ ನಿಡಿ, ಸಿ.ಟಿ.ರವಿಯವರು ತಮ್ಮ ತಪ್ಪನ್ನು ಮರೆಮಾಚಲು ಈ ರೀತಿ ಮಾಡುತ್ತಿದ್ದು, ಅವರ ಪ್ರಕರಣವನ್ನು ಸಿಐಡಿ ತನಿಖೆ ಮಾಡುತ್ತಿದೆ. ತನಿಖಾ ವರದಿ ಬಂದ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.
ಠಾಣೆಯೊಳಗೆ ಬಿಜೆಪಿ ಸಭೆಗೆ ಅವಕಾಶ ನೀಡಿದ್ದು ತಪ್ಪು
ಸಿ.ಟಿ.ರವಿ ಪ್ರಕರಣ ಸಂಬಂಧ ಒಬ್ಬ ಪೊಲೀಸ್ ಅಧಿಕಾರಿಯನ್ನು ಅಮಾನತ್ತು ಮಾಡಿರುವ ಬಗ್ಗೆ ಪ್ರತಿಕ್ರಯಿಸಿ, ಪೊಲೀಸ್ ಠಾಣೆಯಲ್ಲಿ ಬಿಜೆಪಿ ಪಕ್ಷದ ಸಭೆ ನಡೆಸಲು ಅವಕಾಶ ಕೊಟ್ಟ ಕಾರಣಕ್ಕಾಗಿ ಅಧಿಕಾರಿಯನ್ನು ಅಮಾನತ್ತುಗೊಳಿಸಲಾಗಿದೆ. ಪೊಲೀಸ್ ಠಾಣೆಯೊಂದರಲ್ಲಿ ರಾಜಕೀಯ ಪಕ್ಷದ ಸಭೆ ನಡೆಸಲು ಅವಕಾಶ ನೀಡಿದ್ದು ತಪ್ಪು. ಸಿ.ಟಿ.ರವಿಯವರಿಗೆ ರಕ್ಷಣೆ ನೀಡುವ ಉದ್ದೇಶದಿಂದ ಅವರನ್ನು ಬೇರೆಡೆಗಳಿಗೆ ಕರೊದೊಯ್ಯಲಾಗಿತ್ತು ಎಂದು ಬೆಳಗಾವಿಯ ಪೊಲೀಸ್ ಕಮೀಷನರ್ ರವರು ಸಹ ಸ್ಪಷ್ಟಪಡಿಸಿರುವುದಾಗಿ ತಿಳಿಸಿದರು.
ಪೊಲೀಸ್ ತನಿಖೆ
ಶಾಸಕ ಮುನಿರತ್ನ ರವರಿಗೆ ಮೊಟ್ಟೆ ಎಸೆದ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಿ, ಶಾಸಕರಿಗೆ ಮೊಟ್ಟೆ ಎಸದವರು ಯಾರು ಹಾಗೂ ಯಾವ ಪಕ್ಷಕ್ಕೆ ಸೇರಿದವರು ಎಂಬ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ. ಈ ಬಗ್ಗೆ ಪೊಲೀಸರು ತನಿಖೆ ಮಾಡಲಿದ್ದಾರೆ ಎಂದರು.
ವರ್ಷಪೂರ್ತಿ ರಾಜ್ಯದೆಲ್ಲೆಡೆ ‘ಮಹಾತ್ಮಾ ಗಾಂಧಿ ವಿಚಾರಧಾರೆ ಪ್ರಚಾರ’ ಕಾರ್ಯಕ್ಕೆ ಏರ್ಪಾಡು: ಸಿಎಂ ಸಿದ್ದರಾಮಯ್ಯ