ನವದೆಹಲಿ: 2016 ರ ಸರ್ಜಿಕಲ್ ಸ್ಟ್ರೈಕ್ ಮತ್ತು ಹೆಚ್ಚಿನ ಕಾರ್ಯಾಚರಣೆಗಳನ್ನು ಸಂಘಟಿಸಿದ ಜನರಲ್ ಬಿಪಿನ್ ಲಕ್ಷ್ಮಣ್ ಸಿಂಗ್ ರಾವತ್, ( PVSM, UYSM, AVSM, YSM, SM, VSM, ADC) ಅವರು ಬುಧವಾರ ಹೆಲಿಕಾಪ್ಟರ್ ಅಪಘಾತದಲ್ಲಿ ನಿಧನರಾಗಿದ್ದಾರೆ.
ಮ್ಯಾನ್ಮಾರ್ ಪೂರ್ವದಲ್ಲಿನ ಗಡಿಯುದ್ದಕ್ಕೂ ಇದ್ದ ಅಲ್ಲಿನ ಉಗ್ರಗಾಮಿ ಶಿಬಿರಗಳ ಮೇಲೆ ದಾಳಿ ನಡೆಸಲು ಮಾಸ್ಟರ್ ಮೈಂಡ್ ಆಗಿ CDS ಜನರಲ್ ಬಿಪಿನ್ ರಾವತ್ ಕೆಲಸ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯಲ್ಲಿ ಭದ್ರತೆ ಕುರಿತ ಸಂಪುಟ ಸಮಿತಿ (ಸಿಸಿಎಸ್) ಅಧ್ಯಕ್ಷತೆ ವಹಿಸಿದ್ದು, ಘಟನೆ ಸಂಬಂಧ ಮಾಹಿತಿಯನ್ನು ಪಡೆದುಕೊಳ್ಳುತ್ತಿದ್ದಾರೆ. ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಕೊಯಮತ್ತೂರು ವಿಮಾನ ನಿಲ್ದಾಣ ತಲುಪಿದ್ದಾರೆ. ರಸ್ತೆ ಮಾರ್ಗವಾಗಿ ಕುನ್ನೂರಿಗೆ ತೆರಳಲಿದ್ದಾರೆ. ಜನರಲ್ ಬಿಪಿನ್ ರಾವತ್ ಮತ್ತು ಅವರ ಪತ್ನಿಯ ಕುಟುಂಬಕ್ಕೆ ನಾನು ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. , ಈ ಸಂಕಷ್ಟದ ಸಮಯದಲ್ಲಿ ಅವರ ಕುಟುಂಬದ ಜೊತೆಗೆ ಇದ್ದೇವೆ ಅಂತ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ. ಜನರಲ್ ಬಿಪಿನ್ ರಾವತ್ ಒಬ್ಬ ಅತ್ಯುತ್ತಮ ಸೈನಿಕ. ನಿಜವಾದ ದೇಶಭಕ್ತ, ಅವರು ನಮ್ಮ ಸಶಸ್ತ್ರ ಪಡೆಗಳು ಮತ್ತು ಭದ್ರತಾ ಉಪಕರಣಗಳನ್ನು ಆಧುನೀಕರಿಸುವಲ್ಲಿ ಮಹತ್ತರವಾಗಿ ಕೊಡುಗೆ ನೀಡಿದ್ದಾರೆ. ಕಾರ್ಯತಂತ್ರದ ವಿಷಯಗಳ ಬಗ್ಗೆ ಅವರ ಒಳನೋಟಗಳು ಮತ್ತು ದೃಷ್ಟಿಕೋನಗಳು ಅಸಾಧಾರಣವಾಗಿವೆ. ಅವರ ಅಗಲಿಕೆ ನನಗೆ ಅತೀವ ದುಃಖ ತಂದಿದೆ. ಓಂ ಶಾಂತಿ. ಅಂತ ಪ್ರಧಾನಿ ನರೇಂದ್ರ ಮೋದಿಯವರು ಟ್ವಿಟ್ ಮಾಡಿ ಕಂಬನಿ ಮಿಡಿದಿದ್ದಾರೆ.
Gen Bipin Rawat was an outstanding soldier. A true patriot, he greatly contributed to modernising our armed forces and security apparatus. His insights and perspectives on strategic matters were exceptional. His passing away has saddened me deeply. Om Shanti. pic.twitter.com/YOuQvFT7Et
— Narendra Modi (@narendramodi) December 8, 2021
ಭಾರತದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಟ್ವಿಟರ್‌ನಲ್ಲಿ ಸಂತಾಪ ಸೂಚಿಸಿದ್ದಾರೆ. ಅವರು ಬರೆದಿದ್ದಾರೆ: “ಜನರಲ್ ಬಿಪಿನ್ ರಾವತ್ ಮತ್ತು ಅವರ ಪತ್ನಿ ಮಧುಲಿಕಾ ಜಿ ಅವರ ಅಕಾಲಿಕ ನಿಧನದಿಂದ ನಾನು ಆಘಾತಕ್ಕೊಳಗಾಗಿದ್ದೇನೆ ಮತ್ತು ದುಃಖಿತನಾಗಿದ್ದೇನೆ. ರಾಷ್ಟ್ರವು ತನ್ನ ವೀರ ಪುತ್ರರಲ್ಲಿ ಒಬ್ಬನನ್ನು ಕಳೆದುಕೊಂಡಿದೆ. ಮಾತೃಭೂಮಿಗೆ ಅವರ ನಾಲ್ಕು ದಶಕಗಳ ನಿಸ್ವಾರ್ಥ ಸೇವೆಯು ಅಸಾಧಾರಣ ಶೌರ್ಯದಿಂದ ಗುರುತಿಸಲ್ಪಟ್ಟಿದೆ. ವೀರತನ. ಅವರ ಕುಟುಂಬಕ್ಕೆ ನನ್ನ ಸಂತಾಪಗಳು ಹೇಳಿದ್ದಾರೆ.