ಬೆಂಗಳೂರು: ನಗರದ ಮೂರು ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ ಎನ್ನಲಾಗಿರುವಂತ ಮತದಾರರ ಪಟ್ಟಿ ಪರಿಷ್ಕರಣೆ ಅಕ್ರಮ ಸಂಬಂಧ ಕೇಂದ್ರ ಚುನಾವಣಾ ಆಯೋಗದಿಂದ ಅಧಿಕಾರಿಗಳನ್ನು ಅಮಾನತುಗೊಳಿಸಿ ಕ್ರಮ ಕೈಗೊಳ್ಳಲಾಗಿತ್ತು. ಈ ಸಂಬಂಧ ಆಕ್ಷೇಪಣೆ ಸಲ್ಲಿಸಲು ಸಾರ್ವಜನಿಕರಿಗೆ ಅವಕಾಶ ನೀಡಲಾಗಿತ್ತು. ಇದೀಗ ಆಕ್ಷೇಪಣೆಗಾಗಿ ನೀಡಲಾಗಿದ್ದಂತ ದಿನಾಂಕವನ್ನು ಡಿ.24ರವರೆಗೆ ವಿಸ್ತರಣೆ ಮಾಡಲಾಗಿದೆ.
ನನ್ನ ಜೀವನದಲ್ಲಿ ರೌಡಿಗಳ ಪರಿಚಯವೇ ಇಲ್ಲ, ಅದರ ಅವಶ್ಯಕತೆಯೂ ನನಗಿಲ್ಲ – ಸಚಿವ ವಿ.ಸೋವಣ್ಣ
ಈ ಸಂಬಂಧ ಕೇಂದ್ರ ಚುನಾವಣಾ ಆಯೋಗದಿಂದ ಅಧಿಕೃತ ಪ್ರಕಟಣೆ ಹೊರಡಿಸಲಾಗಿದೆ. ಬಿಬಿಎಂಪಿಯ ಮತದಾರರ ಪಟ್ಟಿ ಪರಿಷ್ಕರಣೆ ಸಂಬಂಧ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸುವ ಅವಧಿಯನ್ನು ಡಿಸೆಂಬರ್ 24, 2022ರವರೆಗೆ ವಿಸ್ತರಿಸಿರುವುದಾಗಿ ತಿಳಿಸಿದೆ.
BREAKING NEWS: ಬೆಂಗಳೂರಿನಲ್ಲಿ ಚಿರತೆ ಪ್ರತ್ಯಕ್ಷ: ಆತಂಕದಲ್ಲಿ ಜನರು, ಶಾಲಾ ವಿದ್ಯಾರ್ಥಿಗಳು
ಮೂರು ಕ್ಷೇತ್ರಗಳ ಮತದಾರರ ಪಟ್ಟಿಯ ಪರಿಷ್ಕರಣೆ ಸಂಬಂಧ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಬಹುದಾಗಿದೆ. ಈ ಬಳಿಕ ಆಕ್ಷೇಪಣೆಗಳನ್ನು ಪರಿಷ್ಕರಿಸಿ, ಅವುಗಳನ್ನು ಸರಿಪಡಿಸಿದ ನಂತ್ರ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸುವುದಾಗಿ ಹೇಳಿದೆ.
‘ಭೂಗಳ್ಳ’ರಿಗೆ ‘ನಗರಾಭಿವೃದ್ಧಿ ಇಲಾಖೆ’ ಅಧಿಕಾರಿಗಳೇ ಸಪೋರ್ಟ್: ‘ಕ್ರಿಮಿನಲ್ ಕೇಸ್’ ದಾಖಲಿಸಲು ‘ರಮೇಶ್ ಬಾಬು’ ಒತ್ತಾಯ