ಬೆಂಗಳೂರು : ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಕಳೆಗಟ್ಟಿದ್ದು ಅದರಲ್ಲೂ ಚಿಕ್ಕ ಮಕ್ಕಳಿಗೆ ಗಣೇಶ ಹಬ್ಬ ಅಂದರೆ ಅಚ್ಚುಮೆಚ್ಚು. ಇದೀಗ ಬೆಂಗಳೂರಿನ ಕೆಆರ್ ಮಾರುಕಟ್ಟೆಯಲ್ಲಿ ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಹೂವು ಹಣ್ಣು ಹಾಗೂ ಪೂಜಾ ಸಾಮಗ್ರಿಗಳ ಖರೀದಿ ಭರಾಟೆಯು ಜೋರಾಗಿದೆ. ಕೆ.ಆರ್ ಮಾರುಕಟ್ಟೆಯಲ್ಲಿ ಕಾಲಿಡಲು ಆಗದೆ ಜನಜಂಗುಳಿಯಿಂದ ಕೂಡಿದೆ.
ಹೌದು ಗೌರಿ ಗಣೇಶ ಹಬ್ಬ ಹಿನ್ನೆಲೆ ಬೆಳ್ಳಂ ಬೆಳಗ್ಗೆ ಖರೀದಿ ಭರಾಟೆ ಜೋರಾಗಿದೆ ಬೆಂಗಳೂರಿನ ಕೆ.ಆರ್ ಮಾರುಕಟ್ಟೆಯಲ್ಲಿ ಜನರು ಖರೀದಿ ಭರಾಟೆಯಲ್ಲಿ ತೊಡಗಿದ್ದಾರೆ. ಹೂವು ಹಣ್ಣು ಹಾಗು ಪೂಜಾ ಸಾಮಗ್ರಿಗಳನ್ನು ಜನರು ಮುಗಿಬಿದ್ದು ಖರೀದಿಸುತ್ತಿದ್ದಾರೆ. ಹಬ್ಬ ಹಿನ್ನೆಲೆಯಲ್ಲಿ ಹೂವು ಹಣ್ಣುಗಳ ಬೆಲೆ ಏರಿಕೆ ನಡುವೆಯೂ ಕೂಡ ಜನರ ಖರೀದಿ ಭರಾಟೆ ಜೋರಾಗಿದೆ.