ಬೆಂಗಳೂರು: ರಾಜ್ಯದಲ್ಲಿ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ನಡೆಯುತ್ತಿದೆ. ಅಕ್ಟೋಬರ್.19ರ ಇಂದು ಮುಕ್ತಾಯಗೊಂಡಿತ್ತು. ಇಂತಹ ಸಮೀಕ್ಷೆಯನ್ನು ಅಕ್ಟೋಬರ್.31ರವರೆಗೆ ರಾಜ್ಯಾಧ್ಯಂತ ವಿಸ್ತರಣೆ ಮಾಡಲಾಗಿದೆ.
ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಜಾತಿಗಣತಿ ಸಮೀಕ್ಷೆಯ ಪ್ರಗತಿ ಪರಿಶೀಲನೆ ಸಭೆ ನಡೆಯಿತು. ಈ ಸಭೆಯಲ್ಲಿ ಮೂರು ಜಿಲ್ಲೆಗಳಲ್ಲಿ ಸಮೀಕ್ಷೆ ಕುಂಟಿತಗೊಂಡಿದೆ. ಕೆಲವು ಜಿಲ್ಲೆಗಳಲ್ಲಿ ಶೇ.99ರಷ್ಟು ಸಮೀಕ್ಷೆ ಪೂರ್ಣಗೊಂಡಿದೆ ಎಂಬುದಾಗಿ ಅಧಿಕಾರಿಗಳು ಸಿಎಂ ಸಿದ್ಧರಾಮಯ್ಯ ಅವರಿಗೆ ಮಾಹಿತಿ ನೀಡಿದರು.
ಈ ಹಿನ್ನಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯಾಧ್ಯಂತ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯನ್ನು ವಿಸ್ತರಣೆ ಮಾಡುವಂತ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಶಿಕ್ಷಕರನ್ನು ಹೊರತುಪಡಿಸಿ ಉಳಿದ ಇಲಾಖೆಯ ಸಿಬ್ಬಂದಿಗಳನ್ನು ಬಳಸಿಕೊಂಡು ಸಮೀಕ್ಷೆ ಮುಂದುವರೆಸಲು ನಿರ್ಧರಿಸಲಾಗಿದೆ. ಹೀಗಾಗಿ ಸರ್ಕಾರಿ, ಅನುದಾನಿತ ಶಾಲಾ ಶಿಕ್ಷಕರಿಗೆ ಜಾತಿಗಣತಿ ಸಮೀಕ್ಷೆಯಿಂದ ಬಿಡುಗಡೆ ಮಾಡಲಾಗಿದೆ.
ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಫಲಿತಾಂಶ ಪ್ರಕಟ: ಭಾರೀ ಮತಗಳ ಅಂತರದಿಂದ ಲಕ್ಷ್ಮಣ್ ಸವದಿ ಗೆಲುವು
ಗುಂಡಿ ಮುಚ್ಚುವ ಬದಲು ಕಿರಣ್ ಮುಜುಂದಾರ್ ಶಾರನ್ನು ಟೀಕಿಸುವುದು ನಿರರ್ಥಕ: HDK