ನವದೆಹಲಿ: ಎತ್ತಿನಹೊಳೆ ಯೋಜನೆಗೆ ಹಾಸನ ಮತ್ತು ತುಮಕೂರು ಜಿಲ್ಲೆಗಳ 277 ಎಕರೆ (111 ಹೆಕ್ಟೇರ್) ಅರಣ್ಯ ಪ್ರದೇಶದ ಬಳಕೆಗೆ ಕೇಂದ್ರವು ಷರತ್ತುಬದ್ಧ ಅನುಮತಿ ನೀಡಿದೆ. ಮಾಜಿ ಪ್ರಧಾನಿಗಳಾದ ಹೆಚ್.ಡಿ. ದೇವೇಗೌಡರು ಇದೇ ಮಾರ್ಚ್ 9ರಂದು ರಾಜ್ಯಸಭೆಯಲ್ಲಿ ಈ ಬಗ್ಗೆ ಪ್ರಸ್ತಾಪಿಸಿ ಕೇಂದ್ರ ಸರ್ಕಾರದ ಮಧ್ಯ ಪ್ರವೇಶಕ್ಕೆ ಮನವಿ ಮಾಡಿದ್ದರು. ಎರಡು ಜಿಲ್ಲೆಗಳಲ್ಲಿ ಎತ್ತಿನಹೊಳೆ ಯೋಜನೆಗೆ ಅರಣ್ಯ ಭೂಮಿ ಬಳಕೆಗೆ ಕೇಂದ್ರ ಪರಿಸರ ಸಚಿವಾಲಯದ ಅರಣ್ಯ ಸಲಹಾ ಸಮಿತಿ ಷರತ್ತುಬದ್ಧ ಒಪ್ಪಿಗೆ ನೀಡಿದ್ದು, ದೇವೇಗೌಡರ ಪಯತ್ನದ ಫಲವಾಗಿ ಇದು ಸಾಧ್ಯವಾಗಿದೆ ಎಂದು ಮೂಲಗಳು ತಿಳಿಸಿವೆ.
ಎತ್ತಿನಹೊಳೆ ಯೋಜನೆಯ ವಿಳಂಬಕ್ಕೆ ಕಾರಣಗಳೇನು ಎಂಬ ಬಗ್ಗೆ ಇದೇ ಮಾರ್ಚ್ 9ರಂದು ದೇವೇಗೌಡರು ರಾಜ್ಯಸಭೆಯಲ್ಲಿ ಪ್ರಸ್ತಾಪ ಮಾಡಿದ್ದರು. ರಾಜ್ಯ ಕಾಂಗ್ರೆಸ್ ಸರ್ಕಾರದ ತಪ್ಪುಗಳಿಂದಾಗಿಯೇ ಈ ಯೋಜನೆ ವಿಳಂಬವಾಗಲು ಕಾರಣ ಎಂದು ಕಳವಳ ವ್ಯಕ್ತಪಡಿಸಿದ್ದರು.
ರಾಜ್ಯ ಸರ್ಕಾರವು ತನ್ನ ತಪ್ಪುಗಳನ್ನು ಮರೆ ಮಾಚಿಕೊಳ್ಳಲು ವಿನಾಕಾರಣ ಕೇಂದ್ರ ಸರ್ಕಾರದ ಮೇಲೆ ಸತತ ಆರೋಪಗಳನ್ನು ಮಾಡುತ್ತಿದೆ. ಯೋಜನೆಯ ವಿಳಂಬದಿಂದ ನುಣಚಿಕೊಳ್ಳುತ್ತಿದೆ. ಹೀಗಾಗಿ ಕೇಂದ್ರ ಸರ್ಕಾರವು ಮಧ್ಯ ಪ್ರವೇಶಿಸಿ ಕ್ರಮ ವಹಿಸಬೇಕು ಎಂದು ಮಾಜಿ ಪ್ರಧಾನಿಗಳು ರಾಜ್ಯಸಭೆಯಲ್ಲಿ ಮನವಿ ಮಾಡಿದ್ದರು.
ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ನೀರು ಹರಿಸುವುದಾಗಿ ಎತ್ತಿನಹೊಳೆ ಯೋಜನೆಯನ್ನು ರೂಪಿಸಲಾಯಿತು. ಆ ಜಿಲ್ಲೆಗಳಿಗೆ ನೀರು ಹರಿಸುವುದು ಹಾಗಿರಲಿ, ಸಕಲೇಶಪುರಕ್ಕೆ ಹತ್ತಿರದಲ್ಲಿರುವ ಹಾಸನದಲ್ಲಿರುವ ಅರಸೀಕೆರೆಗೆ ಕೂಡ ನೀರು ಬಂದಿಲ್ಲ. ಅಲ್ಲದೆ, ಯೋಜನೆಗಳನ್ನು ಅನುಷ್ಠಾನ ಮಾಡುವ ನಿಟ್ಟಿನಲ್ಲಿ ಅನೇಕ ಉಲ್ಲಂಘನೆಗಳನ್ನು ಮಾಡಿದ್ದು, ಇದನ್ನು ಕೇಂದ್ರ ಸರಕಾರ ಗಮನಿಸಿ ಸರಿಪಡಿಸಬೇಕು ಎಂದು ದೇವೇಗೌಡರು ಕೋರಿದ್ದರು.
ಆ ದಿನ ರಾಜ್ಯಸಭೆಯಲ್ಲಿ ಹಾಜರಿದ್ದ ಕೇಂದ್ರ ಅರಣ್ಯ ಮತ್ತು ಜೀವಿಶಾಸ್ತ್ರ ಖಾತೆ ಸಚಿವರಾದ ಭೂಪೇಂದ್ರ ಯಾದವ್ ಅವರು ಮಾಜಿ ಪ್ರಧಾನಿಗಳ ಮನವಿ ಸ್ಪಂದಿಸಿದ್ದರು. ಅಲ್ಲದೆ, ಈಬಗ್ಗೆ ಸಚಿವರನ್ನು ಭೇಟಿಯಾಗಿ ಎತ್ತಿನಹೊಳೆ ಬಗ್ಗೆ ಚರ್ಚೆ ನಡೆಸಿದ್ದರು.
BREAKING : ಎಲ್ಲಾ ಗ್ರಾಹಕರಿಗೆ ‘eKYC, ಆಧಾರ್ ದೃಢೀಕರಣ’ ಅಗತ್ಯವಿಲ್ಲ ; ಕೇಂದ್ರ ಸರ್ಕಾರ ಸ್ಪಷ್ಟನೆ
BMTCಗೆ ರಾಷ್ಟ್ರ ಮಟ್ಟದ ‘ತ್ರಿವಳಿ’ ಪ್ರಶಸ್ತಿ ಗರಿ: ‘ನ್ಯಾಷನಲ್ ಮೊಬೈಲಿಟಿ ಅವಾರ್ಡ್ಸ್-2026’ ಗೌರವ








