ಶಿವಮೊಗ್ಗ: ಬಿಜೆಪಿ, ಬಡವರು, ರೈತರ, ಮಹಿಳೆಯರ ವಿರುದ್ಧವಾಗಿರುವ ಸರ್ಕಾರ. ಆದ್ದರಿಂದಲೇ ಅವರ ಸಮಸ್ಯೆಗಳನ್ನು ಬಗೆಹರಿಸಲು ಮುಂದಾಗಿಲ್ಲ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಗುಡುಗಿದ್ದಾರೆ.

ಇಂದು ಶಿವಮೊಗ್ಗದಲ್ಲಿನ ಪ್ರಜಾಧ್ವನಿ ಸಮಾವೇಶದಲ್ಲಿ ಮಾತನಾಡಿದಂತ ಅವರು, 10 ವರ್ಷಗಳಲ್ಲಿ ಮೋದಿ ನೀಡಿದ್ದ ಭರವಸೆಗಳನ್ನು ಈಡೇರಿಸಿಲ್ಲ. 15 ಲಕ್ಷ ಕಪ್ಪು ಹಣ ತರಲಿಲ್ಲ, 2 ಕೋಟಿ ಉದ್ಯೋಗ ಸೃಷ್ಟಿಸಲಿಲ್ಲ, ಅಗತ್ಯ ವಸ್ತುಗಳ ಬೆಲೆ ಕಡಿಮೆ ಮಾಡಲಿಲ್ಲ. ಅಚ್ಚೇ ದಿನ್ ಬರಲಿಲ್ಲ. ದೇಶ ಹಾಗೂ ರಾಜ್ಯದ ಜನ ಬೆಲೆಯೇರಿಕೆ, ಹಣದುಬ್ಬರ ಜಾಸ್ತಿಯಾದ್ದರಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ರೈತರು ಸಾಲ ಮನ್ನಾ ಮಾಡಿ, ನ್ಯಾಯಯುತ ಬೆಲೆ ಕೊಡಿ, ಎಂ.ಎಸ್.ಪಿ ಗೆ ಕಾನೂನು ರೂಪಿಸಿ ಎಂದು ಹೋರಾಟ ಮಾಡಿದರೂ ನರೇಂದ್ರ ಮೋದಿ ಜಗ್ಗಲಿಲ್ಲ ಎಂದರು.

ಶಕ್ತಿ, ಗೃಹಲಕ್ಷ್ಮೀ, ಗೃಹಜ್ಯೋತಿ, ಅನ್ನಭಾಗ್ಯ ಹಾಗೂ ಯುವನಿಧಿ ಯೋಜನೆಗಳನ್ನು ಎಂಟು ತಿಂಗಳೊಳಗೆ ಜಾರಿಗೆ ತಂದಿದ್ದೇವೆ. ಶಕ್ತಿ ಯೋಜನೆಯಡಿ ಪ್ರಯಾಣಿಸಿದ್ದ ಅರಸೀಕೆರೆಯ ಹೆಣ್ಣುಮಗಳೊಬ್ಬಳು ಟಿಕೆಟ್‍ಗಳ ಹಾರ ಹಾಕಿದ್ದನ್ನು ಮುಖ್ಯಮಂತ್ರಿಗಳು ಸ್ಮರಿಸಿದರು.

ಅಂತೆಯೇ ಕೊಪ್ಪಳದ ಮಹಿಳೆಯೊಬ್ಬಳು ಗೃಹಲಕ್ಷ್ಮೀ ಯೋಜನೆಯ ಹಣ ಹಾಗೂ ಗೃಹಜ್ಯೋತಿ ಯೋಜನೆಯಿಂದ ಉಳಿತಾಯವಾದ ಮೊತ್ತದಲ್ಲಿ ಚಿನ್ನದುಂಗುರವನ್ನು ಖರೀದಿಸಿರುವುದನ್ನೂ ಮುಖ್ಯಮಂತ್ರಿಗಳು ಉಲ್ಲೇಖಿಸಿದರು.

ಬಡವರಿಗೆ ಶಕ್ತಿ ತುಂಬುವ ಕೆಲಸವನ್ನು ನಮ್ಮ ಸರ್ಕಾರ ಮಾಡಿದೆ ಎಂದರು.

ಕಾಂಗ್ರೆಸ್ ಪಕ್ಷ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಪ್ರಣಾಳಿಕೆಯಲ್ಲಿ ಘೋಷಿಸಿರುವ ಗ್ಯಾರಂಟಿಗಳನ್ನು ಜಾರಿಗೆ ತರಲಾಗುವುದು. ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿ ಕಾಂಗ್ರೆಸ್ ಹಾಗೂ ಸರ್ಕಾರಕ್ಕೆ ಶಕ್ತಿ ತುಂಬಬೇಕು ಎಂದರು.

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ನಮ್ಮ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ ಎಂಬ ನಂಬಿಕೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮಂತ್ರಿಗಳೆ ನಿಮ್ಮ ಒಂದು ವರ್ಷದ ಸಾಧನೆ ಏನು?: ಬಸವರಾಜ ಬೊಮ್ಮಾಯಿ ಪ್ರಶ್ನೆ

Prajwal Revanna: ಪ್ರಜ್ವಲ್ ರೇವಣ್ಣ ವೀಡಿಯೋ ಬಿಡುಗಡೆಗೆ ಕ್ಷಣಗಣನೆ, 8AM: ಏ.8ರಂದೇ ‘ಫೇಸ್ ಬುಕ್’ನಲ್ಲಿ ‘ನವೀನ್ ಗೌಡ ಪೋಸ್ಟ್’

Share.
Exit mobile version