ನವದೆಹಲಿ: ಕೇಂದ್ರ ಸರ್ಕಾರದಿಂದ ಜಿಎಸ್ಟಿ ಬಾಕಿ ಹಣವನ್ನು ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಿಗೆ ಬಿಡುಗಡೆ ಮಾಡಲಾಗಿದೆ. ಈ ಮೂಲಕ ಬಾಕಿ ಹಣವನ್ನು ಬಿಡುಗಡೆ ಮಾಡಿದೆ.
ಉತ್ತರ ಪ್ರದೇಶಕ್ಕೆ 31,962 ಕೋಟಿಯನ್ನು ಬಿಡುಗಡೆ ಮಾಡಿದ್ದರೇ, ಬಿಹಾರಕ್ಕೆ 17,921 ಕೋಟಿ, ಮಧ್ಯಪ್ರದೇಶಕ್ಕೆ 13,987 ಕೋಟಿ, ಪಶ್ಚಿಮ ಬಂಗಾಳಕ್ಕೆ 13,404 ಕೋಟಿ, ತಮಿಳುನಾಡಿಗೆ 7,268 ಕೋಟಿ, ಆಂಧ್ರಪ್ರದೇಶಕ್ಕೆ 7,211 ಕೋಟಿ ಹಾಗೂ ಕರ್ನಾಟಕಕ್ಕೆ 6,498 ಕೋಟಿ ತೆರಿಗೆ ಪಾಲು ಬಿಡುಗಡೆ ಮಾಡಿದೆ.
ಆದೇ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ತೆರಿಗೆ ಪಾಲು ಬಿಡುಗಡೆಯಲ್ಲೂ ಅನ್ಯಾಯ ಮಾಡಿದೆ ಎಂಬುದಾಗಿ ಮಾಜಿ ಸಂಸದ ಡಿಕೆ ಸುರೇಶ್ ಕಿಡಿಕಾರಿದ್ದಾರೆ. ನಾವು ಭಾರತಾಂಬೆಯ ಮಕ್ಕಳು. ಕೇಂದ್ರ ಸರ್ಕಾರ ಈಗ ಮತ್ತೆ ಅನ್ಯಾಯ ಮಾಡಿ ಕೂಗು ಏಳಿಸುವಂತೆ ಮಾಡಿದೆ. ಹೀಗೆ ಕೂಗು ಏಳಿಸಬೇಡಿ. ನಮ್ಮನ್ನು ದೂರ ಮಾಡುವ ಪ್ರಯತ್ನ ಮಾಡಬೇಡಿ ಎಂಬುದಾಗಿ ಕಿಡಿಕಾರಿದ್ದಾರೆ.
ಪ್ರತ್ಯೇಕ ದಕ್ಷಿಣ ಭಾರತದ ಕೂಗು ನನ್ನ ಕೂಗಲ್ಲ. ತಮಿಳುನಾಡಿನಲ್ಲಿ ಬಹಳ ಹಿಂದೆಯೇ ಇತ್ತು ಎಂಬುದಾಗಿ ಮೈಸೂರಿನಲ್ಲಿ ಮಾಜಿ ಸಂಸದ ಡಿ.ಕೆ ಸುರೇಶ್ ತಿಳಿಸಿದ್ದಾರೆ.
BREAKING : ಭಾರತದ ಮೊಟ್ಟ ಮೊದಲ ‘ಭಯೋತ್ಪಾದಕ’ ನಾಥೂರಾಮ್ ಗೋಡ್ಸೆ : MLC ಬಿಕೆ ಹರಿಪ್ರಸಾದ್ ಹೇಳಿಕೆ