ತುಮಕೂರು : ತುಮಕೂರು ನಗರದ ರೈಲು ನಿಲ್ದಾಣಕ್ಕೆ ಡಾ. ಶಿವಕುಮಾರ ಸ್ವಾಮೀಜಿ ಹೆಸರು ಮತ್ತು ಕ್ಯಾತ್ಸಂದ್ರ ನಿಲ್ದಾಣಕ್ಕೆ ಸಿದ್ದಗಂಗಾ ನಿಲ್ದಾಣ ಎಂದು ಹೆಸರಿಡಲು ಕೇಂದ್ರ ಸರ್ಕಾರ ಸಮ್ಮಿತಿ ನೀಡಿದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತುಮಕೂರು ರೈಲ್ವೆ ನಿಲ್ದಾಣಕ್ಕೆ ಶಿವಕುಮಾರ ಸ್ವಾಮೀಜಿ ಹೆಸರಿಡಲು ಹಾಗೂ ಕ್ಯಾತ್ಸಂದ್ರ ನಿಲ್ದಾಣಕ್ಕೆ ಸಿದ್ದಗಂಗಾ ನಿಲ್ದಾಣ ಎಂದು ಹೆಸರಿಡುವಂತೆ ಪತ್ರಗಳು ಬಂದಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವಅಮಿತ್ ಶಾ ಜೊತೆಗೆ ಚರ್ಚಿಸಿದ್ದು, ಅವರು ಸಮ್ಮತಿ ನೀಡಿದ್ದಾರೆ ಎಂದು ಹೇಳಿದ್ದಾರೆ.
ಇನ್ನು ರಾಜ್ಯದ 16 ರೈಲ್ವೆ ನಿಲ್ದಾಣಗಳನ್ನು ಅಮೃತ್ ಭಾರತ್ ಯೋಜನೆಯಡಿ 2000 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದ್ದು, ಶೀಘ್ರವೇ ಕೆಲಸ ಆರಂಭವಾಗಲಿದೆ ಎಂದು ತಿಳಿಸಿದ್ದಾರೆ.