ಬೆಂಗಳೂರು : ಜನವರಿ 26ರಂದು ಕೆಂಪುಕೋಟೆಯಲ್ಲಿ ನಡೆಯುವ ಗಣರಾಜ್ಯೋತ್ಸವ ದಿನದಂದು ಕರ್ನಾಟಕದ ಸ್ತಬ್ಧ ಚಿತ್ರ ಪ್ರದರ್ಶನಕ್ಕೆ ಕೇಂದ್ರ ಸರ್ಕಾರ ನಿರಾಕರಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಪ್ರತಿಕ್ರಿಯೆ ನೀಡಿ ಬೇರೆ ರಾಜ್ಯಗಳಿಗೂ ಕೂಡ ಸ್ತಬ್ಧ ಚಿತ್ರ ಪ್ರದರ್ಶನಕ್ಕೆ ಅವಕಾಶ ಸಿಗಲಿ ಎಂದು ಕೇಂದ್ರ ಈ ನಿರ್ಧಾರ ತೆಗೆದುಕೊಂಡಿದೆ ಎಂದು ತಿಳಿಸಿದರು.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಣರಾಜ್ಯೋತ್ಸವ ಪರೇಡ್ ನಲ್ಲಿ ರಾಜ್ಯದ ಟ್ಯಾಬ್ಲೋ ಕಡೆಗಣನೇ ವಿಚಾರವಾಗಿ ಪ್ರತಿಕ್ರಿಯಿಸಿ, ಈ ನಾಡಿನ ನೆಲ ಜಲದ ಬಗ್ಗೆ ಕಾಳಜಿ ಇಲ್ಲ.ಬೆಳಗಾವಿ ಕುರಿತ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆಗೆ ಮೊದಲು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಉತ್ತರ ಕೊಡಲಿ ಎಂದು ಬೆಂಗಳೂರಿನಲ್ಲಿ ಬಿಜೆಪಿ ಬಿವೈ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.
ಕರ್ನಾಟಕದ ಶಬ್ದ ಚಿತ್ರ ಪ್ರದರ್ಶನ ನಿರಾಕರಣೆ ವಿಚಾರದಲ್ಲಿ ಕೇಂದ್ರಕ್ಕೆ ಯಾವುದೇ ದುರುದ್ದೇಶ ಇಲ್ಲ. ಕರ್ನಾಟಕ ಗೋವಾ ಸೇರಿ ಕೆಲವು ರಾಜ್ಯಗಳಿಗೆ ಅವಕಾಶ ಸಿಕ್ಕಿಲ್ಲ.ಬೇರೆ ರಾಜ್ಯಗಳಿಗೆ ಅವಕಾಶ ಸಿಗಲಿ ಅಂತ ಅಷ್ಟೇ ಈ ರೀತಿ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅವರು ಸ್ಪಷ್ಟನೇ ನೀಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಬರ ರೈತರ ಬಗ್ಗೆ ಮೊಸಳೆ ಕಣ್ಣೀರು ಮಾತ್ರ ಹಾಕುತ್ತಿದ್ದಾರೆ.ಎಲ್ಲದರಲ್ಲೂ ರಾಜ್ಯ ಸರ್ಕಾರ ರಾಜಕಾರಣ ಮಾಡುವುದು ಸರಿಯಲ್ಲ ಎಂದು ಬಿಜೆಪಿ ಬಿವೈ ವಿಜಯೇಂದ್ರ ಕಾಂಗ್ರೆಸ್ ಪಕ್ಷ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಳಿ ನಡೆಸಿದ್ದಾರೆ.