ಮಂಗಳೂರು: ಕಳೆದ ಕೆಲ ದಿನಗಳಿಂದ ಮಂಗಳೂರಿನ ಸುರತ್ಕಲ್ ಬಳಿಯಲ್ಲಿನ ಟೋಲ್ ಸಂಗ್ರಹ ವಿರೋಧಿಸಿ ನಡೆಯುತ್ತಿದ್ದಂತ ಹೋರಾಟಕ್ಕೆ ಕೊನೆಗೂ ಇಂದು ಜಯ ಸಿಕ್ಕಿದೆ. ಕೇಂದ್ರ ಸರ್ಕಾರದಿಂದ ಸುರತ್ಕಲ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿನ ಟೋಲ್ ಸಂಗ್ರಹವನ್ನು ರದ್ದುಗೊಳಿಸಲಾಗಿದೆ.
ಗುಂಡಿಗಳ ಮೇಲೆ ಸಂಪತ್ತಿನ ಗೋಪುರ ಕಟ್ಟುವ ಈ ಬಿಜೆಪಿ ಸರಕಾರಕ್ಕೆ ಆತ್ಮಸಾಕ್ಷಿಯೇ ಇಲ್ಲ- HDK ಕಿಡಿ
ಈ ಕುರಿತಂತೆ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಬಿಜೆಪಿಯ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರು, ಮಂಗಳೂರಿನ ಸುರತ್ಕಲ್ ಸಮೀಪದ ಟೋಲ್ ಸಂಗ್ರಹ ಕೇಂದ್ರ ರದ್ದಾಗಿದ್ದು, ನಮ್ಮ ಮನವಿಗೆ ಸೂಕ್ತವಾಗಿ ಸ್ಪಂದಿಸಿದ ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಾಗರಿಕರ ಪರವಾಗಿ ಧನ್ಯವಾದಗಳು. ಟೋಲ್ ರದ್ದು ಮಾಡುವ ಭರವಸೆಯನ್ನು ಈ ಮೊದಲೇ ಕೇಂದ್ರ ಸಚಿವರು ನೀಡಿದ್ದು, ಈಗ ತಾಂತ್ರಿಕ ಅಂಶ ಪೂರೈಸಲಾಗಿದೆ ಎಂದು ಹೇಳಿದ್ದಾರೆ.
ಮಂಗಳೂರಿನ ಸುರತ್ಕಲ್ ಸಮೀಪದ ಟೋಲ್ ಸಂಗ್ರಹ ಕೇಂದ್ರ ರದ್ದಾಗಿದ್ದು, ನಮ್ಮ ಮನವಿಗೆ ಸೂಕ್ತವಾಗಿ ಸ್ಪಂದಿಸಿದ ಕೇಂದ್ರ ಸಚಿವರಾದ ಶ್ರೀ @nitin_gadkari ಹಾಗೂ ಪ್ರಧಾನಿ ಶ್ರೀ @narendramodi ಅವರಿಗೆ ನಾಗರಿಕರ ಪರವಾಗಿ ಧನ್ಯವಾದಗಳು.
ಟೋಲ್ ರದ್ದು ಮಾಡುವ ಭರವಸೆಯನ್ನು ಈ ಮೊದಲೇ ಕೇಂದ್ರ ಸಚಿವರು ನೀಡಿದ್ದು, ಈಗ ತಾಂತ್ರಿಕ ಅಂಶ ಪೂರೈಸಲಾಗಿದೆ.
— Nalinkumar Kateel (@nalinkateel) November 14, 2022
ಅಂದಹಾಗೇ 2015ರಲ್ಲಿ ಮಂಗಳೂರಿನ ಸುರತ್ಕಲ್ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಟೋಲ್ ನಿರ್ಮಿಸಿ, ಹಣ ವಸೂಲಿ ಮಾಡಲಾಗುತ್ತಿತ್ತು. ಹೈವೇಯಲ್ಲಿ 60 ಕಿಲೋಮೀಟರ್ ಅಂತರದಲ್ಲಿ ಟೋಲ್ ಇರಬೇಕು ಎಂಬ ನಿಯಮವನ್ನೇ ಗಾಳಿಗೆ ತೂರಿ ಸುರತ್ಕಲ್ ಬಳಿಯಲ್ಲಿ ಟೋಲ್ ನಿರ್ಮಿಸಿ ಹಣ ಸಂಗ್ರಹಿಸಲಾಗುತ್ತಿತ್ತು. ಈ ಟೋಲ್ ರದ್ದುಗೊಳಿಸುವಂತೆ ಹಲವು ವರ್ಷಗಳಿಂದ ಪ್ರತಿಭಟನೆ ನಡೆಸಲಾಗುತ್ತಿತ್ತು.
ಹುಬ್ಬಳ್ಳಿ-ಧಾರವಾಡ ಅವಳಿನಗರದ ಜನತೆಗೆ ಶುಭಸುದ್ದಿ: ನವದೆಹಲಿಯಿಂದ ಹುಬ್ಬಳ್ಳಿಗೆ ವಿಮಾನ ಸೇವೆ ಆರಂಭ
ಕಳೆದ ಕೆಲ ದಿನಗಳಿಂದ ಟೋಲ್ ಗೇಟ್ ಮುಚ್ಚುವಂತೆ ಅನಿರ್ಧಿಷ್ಟಾವಧಿಯವರೆಗೆ ಧರಣಿಯನ್ನು ಕಾಂಗ್ರೆಸ್ ಪಕ್ಷದ ನಾಯಕರು, ಡಿವೈಎಸ್ಪಿ, ಸಿಪಿಐಎಂ ಸೇರಿದಂತೆ ಸಮಾನ ಮನಸ್ಕರ ಸಂಘಟನೆಗಳು ನಡೆಸುತ್ತಿದ್ದವು. ಅಕ್ಟೋಬರ್ 28ರಂದು ಸುಲತ್ಕಲ್ ಟೋಲ್ ಗೆ ಮುತ್ತಿಗೆ ಹಾಕುವಂತ ಪ್ರತಿಭಟನೆ ಕೂಡ ನಡೆಸಲಾಗಿತ್ತು. ಈ ಹಿನ್ನಲೆಯಲ್ಲಿ ಮಂಗಳೂರು ಹೊರವಲಯದಲ್ಲಿನ ಸುಲತ್ಕಲ್ ಬಳಿಯ ಟೋಲ್ ಸಂಗ್ರಹವನ್ನು ರದ್ದುಗೊಳಿಸಿ ಕೇಂದ್ರ ಸರ್ಕಾರ ಆದೇಶಿಸಿದೆ.
ಡಿಸೆಂಬರ್ ವೇಳೆಗೆ ರಾಜ್ಯದ ಶೇ.50 ರಷ್ಟು ಅರ್ಹರಿಗೆ ಆಯುಷ್ಮಾನ್ ಕಾರ್ಡ್ ವಿತರಣೆ – ಸಚಿವ ಡಾ.ಕೆ.ಸುಧಾಕರ್