ನವದೆಹಲಿ: ಬರ ಪರಿಸ್ಥಿತಿಯನ್ನು ನಿಭಾಯಿಸಲು ಕರ್ನಾಟಕಕ್ಕೆ ಸಹಾಯ ಮಾಡಲು ಭಾರತದ ಚುನಾವಣಾ ಆಯೋಗ (ಇಸಿಐ) ಅನುಮತಿ ನೀಡಿದೆ ಎಂದು ಕೇಂದ್ರ ಸರ್ಕಾರ ಸೋಮವಾರ ಸುಪ್ರೀಂ ಕೋರ್ಟ್ ಗೆ ತಿಳಿಸಿದೆ.
ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ಸಂದೀಪ್ ಮೆಹ್ತಾ ಅವರ ನ್ಯಾಯಪೀಠವು ಭಾರತದ ಅಟಾರ್ನಿ ಜನರಲ್ ಆರ್.ವೆಂಕಟರಮಣಿ ಅವರು ಈ ವಿಷಯವನ್ನು ತ್ವರಿತವಾಗಿ ಪರಿಹರಿಸಲಾಗುವುದು ಎಂದು ಹೇಳಿದ ನಂತರ ಈ ವಿಷಯವನ್ನು ಮುಂದೂಡಿದೆ. ಇದೇ ವೇಳೇ ಒಂದು ವಾರದಲ್ಲಿ ಬರ ಪರಿಹಾರದ ಕುರಿತು ತೀರ್ಮಾನ ತೆಗೆದುಕೊಳ್ಳಲಾಗುತ್ತದೆ. ಹಾಗಾಗಿ, ಕೇಂದ್ರ ಸರ್ಕಾರಕ್ಕೆ ನ್ಯಾಯಾಲಯವು ಒಂದು ವಾರ ಸಮಯಾವಕಾಶ ನೀಡಬೇಕು’ ಎಂದು ಅಟಾರ್ನಿ ಜನರಲ್ ಆರ್.ವೆಂಕಟರಮಣಿ ಅವರು ಸರ್ವೋಚ್ಚ ನ್ಯಾಯಾಲಯಕ್ಕೆ ಮನವಿ ಮಾಡಿದರು.
ನ್ಯಾಯಮೂರ್ತಿ ಬಿ.ಆರ್.ಗವಾಯಿ ಮತ್ತು ನ್ಯಾಯಮೂರ್ತಿ ಸಂದೀಪ್ ಮೆಹ್ತಾ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ನಿಧಿ (ಎನ್ಡಿಆರ್ಎಫ್) ಅಡಿಯಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಆರ್ಥಿಕ ನೆರವು ನೀಡುತ್ತಿಲ್ಲ ಎಂದು ಆರೋಪಿಸಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಪೀಠ ವಿಚಾರಣೆ ನಡೆಸಿತು. ಸುಮಾರು ಆರು ತಿಂಗಳುಗಳಿಂದ ವಿಪತ್ತು ಕುರಿತು ಅಂತರ ಸಚಿವಾಲಯದ ಕೇಂದ್ರ ತಂಡದ ವರದಿಯ ಮೇಲೆ ಕೇಂದ್ರ ಸರ್ಕಾರ ಇನ್ನೂ ಕ್ರಮ ಕೈಗೊಂಡಿಲ್ಲ ಮತ್ತು ರಾಜ್ಯಕ್ಕೆ ಎನ್ಡಿಆರ್ಎಫ್ ಪ್ರಯೋಜನಗಳನ್ನು ತಡೆಹಿಡಿದಿರುವುದರಿಂದ ಪರಿಸ್ಥಿತಿ ಹದಗೆಟ್ಟಿದೆ ಎಂದು ಸುಪ್ರೀಂ ಕೋರ್ಟ್ಗೆ ತಿಳಿಸಲಾಯಿತು.