ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಾಜೌರಿ ಹಾಗೂ ಪೂಂಚ್ನಲ್ಲಿ ಇತ್ತೀಚೆಗೆ ನಡೆದ ಭಯೋತ್ಪಾದಕ ದಾಳಿಯ ನಂತರ ಹೆಚ್ಚಿನ ಸೈನಿಕರನ್ನು ನಿಯೋಜಿಸಲು ಕೇಂದ್ರ ನಿರ್ಧರಿಸಿದ್ದು, ಭದ್ರತೆಯನ್ನು ಬಿಗಿಗೊಳಿಸಲಾಗಿದೆ.
ಮೂಲಗಳು ಹೇಳುವಂತೆ ಸಿಆರ್ಪಿಎಫ್ನ (ಕೇಂದ್ರ ಮೀಸಲು ಪೊಲೀಸ್ ಪಡೆ) ಸುಮಾರು 1,800 ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಪೂಂಚ್ ಮತ್ತು ರಜೌರಿಯಲ್ಲಿ ಎರಡು ದಿನಗಳ ಅಂತರದಲ್ಲಿ 2 ಪ್ರತ್ಯೇಕ ದಾಳಿ ನಡೆಸಲಾಗಿತ್ತು. ದಾಳಿಗಳ ನಂತರ ವ್ಯಾಪಕ ಭೀತಿಯಿಂದ ಜಿಲ್ಲೆಯಲ್ಲಿ ಭಾರೀ ಪ್ರತಿಭಟನೆಗಳು ನಡೆದಿದ್ದು, ಜನರನ್ನು ರಕ್ಷಿಸುವಲ್ಲಿ ಆಡಳಿತ ವಿಫಲವಾಗಿದೆ ಎಂದು ಹಲವರು ಆರೋಪಿಸಿದ್ದಾರೆ.
ಭಾನುವಾರ ಸಂಜೆ ಮತ್ತು ಸೋಮವಾರ ಬೆಳಗ್ಗೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಆರು ಮಂದಿ ಸಾವನ್ನಪ್ಪಿದ್ದು, ಅನೇಕರು ಗಾಯಗೊಂಡಿದ್ದಾರೆ. ಭದ್ರತೆಯ ದೃಷ್ಟಿಯಿಂದ ಪೊಲೀಸರು ಮತ್ತು ಸಿಆರ್ಪಿಎಫ್ ಜಂಟಿ ಕಾರ್ಯಾಚರಣೆಯನ್ನು ಆರಂಭಿಸಿವೆ.
BREAKING NEWS : ಬೆಳಗಾವಿ ಭೀಕರ ಅಪಘಾತದಲ್ಲಿ 6 ಮಂದಿ ಸಾವು : ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ : ಸಚಿವ ಕಾರಜೋಳ
BREAKING NEWS : ಬೆಳಗಾವಿ ಭೀಕರ ಅಪಘಾತ ಪ್ರಕರಣ : ಮೃತಪಟ್ಟವರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಣೆ
BREAKING NEWS : ಬೆಳಗಾವಿ ಭೀಕರ ಅಪಘಾತದಲ್ಲಿ 6 ಮಂದಿ ಸಾವು : ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ : ಸಚಿವ ಕಾರಜೋಳ
BREAKING NEWS : ಬೆಳಗಾವಿ ಭೀಕರ ಅಪಘಾತ ಪ್ರಕರಣ : ಮೃತಪಟ್ಟವರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಣೆ