ಬೆಂಗಳೂರು: ಬರ ಪರಿಹಾರದಲ್ಲಿ ಕೇಂದ್ರ ಸರ್ಕಾರದ ಮೋಸದ ಕಣ್ಣಾಮುಚ್ಚಾಲೆ ಆಟ ಮುಂದುವರೆದಿದೆ,
ಸುಪ್ರೀಂ ಕೋರ್ಟಿನ ಆದೇಶವನ್ನು ಪಾಲಿಸಿದಂತೆಯೂ ಇರಬೇಕು, ಕರ್ನಾಟಕಕ್ಕೆ ಅನ್ಯಾಯ ಆಗುವಂತೆಯೂ ಇರಬೇಕು ಎಂಬ ಚಾಣಾಕ್ಷತನ ತೋರಿದೆ ಅಂಥ ರಾಜ್ಯ ಕಾಂಗ್ರೆಸ್‌ ಟ್ವಿಟ್‌ ಮಾಡಿ ಕಿಡಿಕಾರಿದೆ.

ಇದೇ ವೇಳೆ ಕರ್ನಾಟಕ ಬೇಡಿಕೆ ಇಟ್ಟಿದ್ದು 18,172 ಕೋಟಿ, ಆದರೆ ಆನೆ ಹೊಟ್ಟೆಗೆ ಅರೆ ಕಾಸಿನ ಮಜ್ಜಿಗೆ ಎನ್ನುವಂತೆ ಕೇವಲ 3,454 ಕೋಟಿ ಮಾತ್ರ ಬಿಡುಗಡೆ ಮಾಡಿ ತನ್ನ ಕರ್ನಾಟಕ ದ್ವೇಷ ಮುಂದುವರೆಸಿದೆ ಅಂಥ ತಿಳಿಸಿದೆ.

ಕರ್ನಾಟಕ ದ್ರೋಹಿ ಕೇಂದ್ರ ಸರ್ಕಾರ ಮತ್ತೊಮ್ಮೆ ಕನ್ನಡಿಗರಿಗೆ ವಂಚನೆ ಮಾಡಿದೆ.ಬರದಿಂದ ಕರ್ನಾಟಕಕ್ಕೆ 35,000 ಕೋಟಿಗೂ ಅಧಿಕ ನಷ್ಟವಾಗಿದೆ. NDRF ನಿಯಮದ ಪ್ರಕಾರವೇ ನಮ್ಮ ಸರ್ಕಾರ ಪ್ರಸ್ತಾವನೆ ಸಲ್ಲಿಸಿದ್ದು 18,172 ಕೋಟಿಗೆ,

ಆದರೆ ಸುಪ್ರೀಂ ಕೋರ್ಟಿನಿಂದ ತಪರಾಕಿ ಬರಿಸಿಕೊಂಡು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ್ದು ಕೇವಲ 3,454 ಕೋಟಿ ಮಾತ್ರ.ಇದು ನಮಗೆ ಅಗತ್ಯವಿರುವ ಮೊತ್ತದ ಕಾಲು ಬಾಗಕ್ಕಿಂತ ಕಡಿಮೆ. ನ್ಯಾಯಾಲಯದ ಕಣ್ಣಿಗೂ ಮಣ್ಣೆರಚುವ ಕೇಂದ್ರ ಸರ್ಕಾರದ ಕುತಂತ್ರದ ನಡೆಯನ್ನು ಕನ್ನಡಿಗರು ಅರ್ಥ ಮಾಡಿಕೊಂಡಿದ್ದಾರೆ.

ನ್ಯಾಯಯುತ ಪರಿಹಾರಕ್ಕಾಗಿ ಕನ್ನಡಿಗರು ಮತ್ತೊಮ್ಮೆ ನ್ಯಾಯಾಲಯದ ಮೆಟ್ಟಿಲು ಹತ್ತಬೇಕೇ ನರೇಂದ್ರ ಮೋದಿಯವರೇ ಅಂತ ಪ್ರಶ್ನೆ ಮಾಡಿ..

Share.
Exit mobile version