ಮಂಡ್ಯ: ಪಾಕಿಸ್ತಾನದಲ್ಲಿ ಅಡಗಿರುವ ಉಗ್ರರ ನೆಲೆಗಳ ಮೇಲೆ ಭಾರತ ದಾಳಿಮಾಡಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೇಂದ್ರ ಸರ್ಕಾರದ ಸೂಚನೆಯಂತೆ ಎಲ್ಲೆಡೆ ಅಣುಕು ಕವಾಯತು ಮಾಡಲಾಗುತ್ತಿದೆ ಹಾಗೂ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ವಹಿಸಲಾಗುತ್ತಿದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.
ಅಣೆಕಟ್ಟುಗಳ ಸುರಕ್ಷತೆಯ ದೃಷ್ಟಿಯಲ್ಲಿ ಎಲ್ಲೆಡೆ ಎಚ್ಚರಿಕೆ ನೀಡಲಾಗಿದ್ದು, ಯಾವುದೇ ಕ್ಷಣದಲ್ಲಿ ವಿಕೋಪ ಪರಿಸ್ಥಿತಿ ಎದುರಾದರೂ ಅದನ್ನು ಸಮರ್ಥವಾಗಿ ಎದುರಿಸಲು ಸನ್ನದ್ಧರಾಗಿರುವಂತೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.
ಮುಜರಾಯಿ ಇಲಾಖೆ ದೇವಾಲಯಗಳಲ್ಲಿ ವಿಶೇಷ ಪೂಜೆ ಮಾಡುವ ಬಗ್ಗೆ ಸಚಿವರಾದ ರಾಮಲಿಂಗಾರೆಡ್ಡಿಯವರು ನನ್ನೊಂದಿಗೆ ಚರ್ಚೆ ನಡೆಸಿ, ಕ್ರಮ ಕೈಗೊಂಡಿದ್ದಾರೆ ಅಂತ ತಿಳಿಸಿದ್ದಾರೆ.
ಪಾಕಿಸ್ತಾನದಲ್ಲಿ ಅಡಗಿರುವ ಉಗ್ರರ ನೆಲೆಗಳ ಮೇಲೆ ಭಾರತ ದಾಳಿಮಾಡಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೇಂದ್ರ ಸರ್ಕಾರದ ಸೂಚನೆಯಂತೆ ಎಲ್ಲೆಡೆ ಅಣುಕು ಕವಾಯತು ಮಾಡಲಾಗುತ್ತಿದೆ ಹಾಗೂ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ವಹಿಸಲಾಗುತ್ತಿದೆ.
ಅಣೆಕಟ್ಟುಗಳ ಸುರಕ್ಷತೆಯ ದೃಷ್ಟಿಯಲ್ಲಿ ಎಲ್ಲೆಡೆ ಎಚ್ಚರಿಕೆ ನೀಡಲಾಗಿದ್ದು, ಯಾವುದೇ ಕ್ಷಣದಲ್ಲಿ ವಿಕೋಪ… pic.twitter.com/t11EPGBBvo
— Siddaramaiah (@siddaramaiah) May 8, 2025
BIG NEWS: ಪಾಕಿಸ್ತಾನದ ಬಹುತೇಕ ಪ್ರಜೆಗಳು ರಾಜ್ಯದಿಂದ ಗಡಿಪಾರು: ಸಿಎಂ ಸಿದ್ಧರಾಮಯ್ಯ ಮಾಹಿತಿ