ಬೆಂಗಳೂರು: ವೃತಿಪರ ಕೋರ್ಸ್ ಗಳ ಸಿಇಟಿ ರಾಂಕಿಂಗ್ ಗೆ ( CET Ranking ) ಸಂಬಂಧಿಸಿದಂತೆ ಉಂಟಾಗಿದ್ದ ಬಿಕ್ಕಟ್ಟನ್ನು ಬಗೆಹರಿಸಲು ರಾಜ್ಯ ಸರಕಾರ ನೇಮಿಸಿದ್ದ ಸಮಿತಿಯ ವರದಿಯನ್ನು ಹೈಕೋರ್ಟ್ ( Karnataka High Court ) ಒಪ್ಪಿಕೊಂಡಿದೆ. ಇದು ಸ್ವಾಗತಾರ್ಹವಾಗಿದ್ದು, ಪರಿಷ್ಕೃತ ಸಿಇಟಿ ರಾಂಕಿಂಗ್ ಪಟ್ಟಿಯನ್ನು ಇದೇ 29ರಂದು ಬಿಡುಗಡೆ ಮಾಡಲಾಗುವುದು. ಜತೆಗೆ ಅಕ್ಟೋಬರ್‌ 3ರಿಂದ ಪ್ರವೇಶಾತಿ ಮೊದಲ ಸುತ್ತಿನ ಕೌನ್ಸೆಲಿಂಗ್ ಆರಂಭಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ( Minister Dr CN Ashwathnarayana ) ತಿಳಿಸಿದ್ದಾರೆ.

BIG BREAKING NEWS: ಮುರುಘಾ ಶ್ರೀಗಳಿಗೆ ಬಿಗ್ ಶಾಕ್: ಜಾಮೀನು ಅರ್ಜಿ ತಿರಸ್ಕಾರ | Murugha Sri

ಶುಕ್ರವಾರ ಈ ಬಗ್ಗೆ ಮಾತನಾಡಿರುವ ಅವರು, ಸಮಸ್ಯೆಯನ್ನು ಬಗೆಹರಿಸಲು ಒಂದು ಸಮನ್ವಯ ಸೂತ್ರ ರೂಪಿಸುವಂತೆ ಸೂಚಿಸಿತ್ತು. ಅದರಂತೆ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಉಪಾಧ್ಯಕ್ಷ ಪ್ರೊ.ಬಿ. ತಿಮ್ಮೇಗೌಡರ ಅಧ್ಯಕ್ಷತೆಯಲ್ಲಿ ಐವರ ಸಮಿತಿ ರಚಿಸಿ, ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದೆವು. ನ್ಯಾಯಾಲಯವು ಸಮಿತಿ ಕೊಟ್ಟ ವರದಿಯನ್ನು ಪುರಸ್ಕರಿಸಿರುವುದು ಸಂತಸ ತಂದಿದೆ ಎಂದಿದ್ದಾರೆ.

BIGG NEWS : ಕೇಂದ್ರ ಸರ್ಕಾರ ಮಹತ್ವದ ಕ್ರಮ ; ಈಗ ‘ಬ್ಯಾಂಕ್ ವಂಚನೆ’ಯಿಂದ ತಪ್ಪಿಸಿಕೊಳ್ಳೋದು ತುಂಬಾನೇ ಸುಲಭ

Share.
Exit mobile version